ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೀನುಗಾರಿಕೆಗೆ ತೆರಳಿದ್ದ ದೋಣಿ ಅವಘಡ; ಆರು ಮಂದಿ ನಾಪತ್ತೆ

By Lekhaka
|
Google Oneindia Kannada News

ಮಂಗಳೂರು, ಡಿಸೆಂಬರ್ 01: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ದೋಣಿ ಮಗುಚಿ ಬಿದ್ದು ಆರು ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.

ಬೋಳಾರದಿಂದ ಮೀನುಗಾರಿಕೆಗೆ ತೆರಳಿದ್ದ ದೋಣಿಯು ಆಳ ಸಮುದ್ರದಲ್ಲಿ ಮಗುಚಿ ಬಿದ್ದಿದ್ದು, ಆರು ಮೀನುಗಾರರು ನಾಪತ್ತೆಯಾಗಿರುವುದಾಗಿ ತಿಳಿದುಬಂದಿದೆ. ಸೋಮವಾರ ನಸುಕಿನ ಜಾವ ಬೋಳಾರದ ಶ್ರೀ ರಕ್ಷಾ ಮೀನುಗಾರಿಕಾ ಬೋಟ್ ನಲ್ಲಿ 22 ಮಂದಿ ಮೀನುಗಾರರು ಮೀನುಗಾರಿಕೆಗೆ ತೆರಳಿದ್ದರು. ಆದರೆ ರಾತ್ರಿಯಾದರೂ ಯಾರೂ ವಾಪಸ್ಸಾಗಿಲ್ಲ. ಮಂಗಳವಾರ ಬೆಳಿಗ್ಗೆ ಉಳ್ಳಾಲದ ಪಶ್ಚಿಮ ಭಾಗದ ನಾಟಿಕಲ್ ಮೈಲ್ ದೂರದಲ್ಲಿ ದೋಣಿ ಮಗುಚಿ ಬಿದ್ದಿರುವುದು ಕಂಡುಬಂದಿದೆ.

 Mangaluru: Six Fishermen Missing In Boat Accident

 ಉಡುಪಿ ನಾಡದೋಣಿ ದುರಂತ: ಎಲ್ಲ ನಾಲ್ವರು ಮೀನುಗಾರರ ಶವ ಪತ್ತೆ ಉಡುಪಿ ನಾಡದೋಣಿ ದುರಂತ: ಎಲ್ಲ ನಾಲ್ವರು ಮೀನುಗಾರರ ಶವ ಪತ್ತೆ

ಇತರೆ ಮೀನುಗಾರಿಕಾ ಬೋಟ್ ಮೂಲಕ ಸುಮಾರು 16 ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ. ಇನ್ನುಳಿದವರು ನಾಪತ್ತೆಯಾಗಿದ್ದು, ಅವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಕಡಲಲ್ಲಿ ಭಾರೀ ಪ್ರಮಾಣದ ಮೀನು ಸಿಕ್ಕಿದ್ದು, ಸಂಜೆ 6.30ರ ಸುಮಾರಿಗೆ ಬಲೆ ಎಳೆಯುವಾಗ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಬೋಟ್ ನಲ್ಲಿ ಉಳ್ಳಾಲ, ಮಂಗಳೂರು ಹಾಗೂ ತಮಿಳುನಾಡು ಮೂಲದ ಮೀನುಗಾರರು ಇದ್ದರು ಎಂದು ತಿಳಿದುಬಂದಿದೆ.

English summary
6 fishermen missing, 16 rescued after a deep-sea fishing boat capsized in the Arabian Sea, off Mangaluru coast, today morning
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X