ಮಂಗಳೂರಿನಲ್ಲಿ ರ್ಯಾಗಿಂಗ್ ಪ್ರಕರಣ; ಆರು ವಿದ್ಯಾರ್ಥಿಗಳ ಬಂಧನ
ಮಂಗಳೂರು, ಜುಲೈ 17: ಮಂಗಳೂರಿನಲ್ಲಿ ಮತ್ತೆ ರ್ಯಾಗಿಂಗ್ ಪ್ರಕರಣ ನಡೆದಿದ್ದು, ನಗರದ ಇಂದಿರಾ ನರ್ಸಿಂಗ್ ಕಾಲೇಜಿನ 6 ಮಂದಿ ವಿದ್ಯಾರ್ಥಿಗಳು ಜೂನಿಯರ್ಗಳಿಗೆ ರ್ಯಾಗಿಂಗ್ ಮಾಡಿದ್ದು, ಈಗ ಪೊಲೀಸ್ ಠಾಣೆಯಲ್ಲಿ ಕಂಬಿ ಎಣಿಸುತ್ತಿದ್ದಾರೆ.
ಜುಲೈ 14ರಂದು ಘಟನೆ ನಡೆದಿದ್ದು, ಇಂದಿರಾ ಕಾಲೇಜಿನ ಪ್ರಥಮ ವರ್ಷದ ನರ್ಸಿಂಗ್ ವಿದ್ಯಾರ್ಥಿಗಳು ಪಳ್ನೀರ್ನ ಹೋಟೆಲ್ಗೆ ಹೋಗಿದ್ದಾರೆ. ಈ ವೇಳೆ ಅದೇ ಹೋಟೆಲ್ಗೆ ಬಂದ ಸೀನಿಯರ್ ವಿದ್ಯಾರ್ಥಿ ಶ್ರೀಲಾಲ್, ವಿದ್ಯಾರ್ಥಿಗಳನ್ನು ಉದ್ದೇಶಿಸಿ, "ಏನು ಮುಖ ನೋಡುತ್ತೀಯಾ, ನೀವು ನನ್ನ ಜೂನಿಯರ್ಗಳು. ನಾನು ಸೀನಿಯರ್, ನಾನು ಬರುವಾಗ ಎದ್ದು ರೆಸ್ಪೆಕ್ಟ್ ಕೊಡಬೇಕು,'' ಎಂದು ಹೇಳಿದ್ದಾನೆ.
ಇಷ್ಟಕ್ಕೆ ಸುಮ್ಮನಾಗದೇ ಜೂನಿಯರ್ ವಿದ್ಯಾರ್ಥಿಗಳು ಇರುವ ಅಪಾರ್ಟ್ಮೆಂಟ್ಗೆ ಶ್ರೀಲಾಲ್ ಹಾಗೂ ಆತನ ಸ್ನೇಹಿತರಾದ ಅಮ್ಜದ್, ಹುಸೈನ್, ಲಿಮ್ಸ್, ಜುರೈಜ್ ಮತ್ತು ಶಾಹೀದ್ ಮಾರಕಾಸ್ತ್ರಗಳೊಂದಿಗೆ ಹೋಗಿ ವಿದ್ಯಾರ್ಥಿಗಳನ್ನು ಬೆದರಿಸಿದ್ದಾರೆ.

"ನಾವು ಸೀನಿಯರ್ಗಳು, ನಾವು ಹೇಳಿದಾಗೆ ಕೇಳಬೇಕು ಅಂತಾ ಹೇಳಿದ್ದಾರೆ. ವಿದ್ಯಾರ್ಥಿಗಳ ಬಟ್ಟೆಗಳನ್ನು ತೆಗೆದು ಒಳವಸ್ತ್ರದಲ್ಲಿ ಭಸ್ಕಿ ತೆಗೆಯುವಂತೆ ರ್ಯಾಗಿಂಗ್ ಮಾಡಿದ್ದಾರೆ. ಕೆಟ್ಟ ಶಬ್ದಗಳಿಂದ ಬೈದು, ನಾಳೆ ಕಾಲೇಜಿಗೆ ಬರುವಾಗ ತಲೆ ಕೆಳಗೆ ಹಾಕಿಕೊಂಡು ಹೋಗಬೇಕು. ಇಲ್ಲವಾದಲ್ಲಿ ಕೊಲೆ ಮಾಡುವುದಾಗಿ ಬೆದರಿಸಿದ್ದಾರೆ. ರ್ಯಾಗಿಂಗ್ ಮಾಡಿದವರೆಲ್ಲಾ ಕೇರಳ ಮೂಲದ ವಿದ್ಯಾರ್ಥಿಗಳಾಗಿದ್ದು, ಪ್ರಕರಣ ದಾಖಲಾಗಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications