ಸೌಜನ್ಯ ಹತ್ಯೆ ಪ್ರಕರಣದ ಮರುತನಿಖೆ ಮಾಡಿ: ಸಿಎಂಗೆ ಬೆಳ್ತಂಗಡಿ ಶಾಸಕ ಮನವಿ

ಮಂಗಳೂರು, ಜುಲೈ, 23: ಹನ್ನೊಂದು ವರ್ಷಗಳ ಬಳಿಕ ರಾಜದಲ್ಲಿ ತೀವ್ರ ಸದ್ದು ಮಾಡುತ್ತಿರುವ ಧರ್ಮಸ್ಥಳದ ಸೌಜನ್ಯಾ ಅತ್ಯಾಚಾರ ಕೊಲೆ ಪ್ರಕರಣದ ಮರು ತನಿಖೆ ಮಾಡಬೇಕೆಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಜೊತೆಗೂಡಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿಯಾದ ಹರೀಶ್ ಪೂಂಜಾ, ಸೌಜನ್ಯ ಪ್ರಕರಣವನ್ನು ಮರು ತನಿಖೆ ಮಾಡಿ ನೈಜ ಆರೋಪಿಗಳನ್ನು ಪತ್ತೆಹಚ್ಚಿ ಅವರಿಗೆ ಶಿಕ್ಷೆ ನೀಡಬೇಕೆಂದು ಮನವಿ ಮಾಡಿದ್ದಾರೆ.

Soujanya murder case: Belthangady MLA demands for reinvestigation

ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಚರ್ಚೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಮನವಿ ಪತ್ರದಲ್ಲಿ ಏನಿದೆ?

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ದಿನಾಂಕ 09 ಅಕ್ಟೋಬರ್ 2012ರಂದು ಬೆಳ್ತಂಗಡಿ ತಾಲೂಕಿನ ಉಜಿರೆ ಕಾಲೇಜಿನಲ್ಲಿ ವಿದ್ಯಾರ್ಥಿನಿ ಸೌಜನ್ಯಳ ಅತ್ಯಾಚಾರಕ್ಕೀಡಾಗಿ ಕೊಲೆಯಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಹಲವಾರು ಇಲಾಖೆಗಳಿಂದ ತನಿಖೆ ನಡೆದು ನಂತರ ತಮ್ಮ ನೇತೃತ್ವದ ಘನ
ಸರ್ಕಾರ 2013ರಲ್ಲಿ ಈ ಪ್ರಕರಣವನ್ನು ಸಿ.ಬಿ.ಐ.ಗೆ ಒಪ್ಪಿಸಿದ್ದು ತಮಗೂ ತಿಳಿದ ವಿಚಾರವಾಗಿದೆ. ಅಲ್ಲಿಂದ 2023ರವರೆಗೂ ನಡೆದ ಸಿ.ಟಿ.ಐ ತನಿಖೆಯಲ್ಲಿ ಶಂಕಿತ ಆರೋಪಿಯನ್ನು ದೋಷಮುಕ್ತಗೊಳಿಸಿ ನ್ಯಾಯಾಲಯವು ಆದೇಶ ನೀಡಿದೆ.

ಈ ತನಿಖೆಯ ಫಲಶೃತಿಯ ಬಗ್ಗೆ ಅಪರಾಧಿಗಳನ್ನು ಕಾನೂನಿನ ಚೌಕಟ್ಟನೊಳಗೆ ತಂದು ಶಿಕ್ಷೆ ನೀಡಲು ಆಡಳತ ವ್ಯವಸ್ಥೆ ವಿಫಲವಾಗಿದೆ ಎಂಬ ಶಂಕೆ ಬೆಳ್ತಂಗಡಿ ತಾಲೂಕಿನ ಸಜ್ಜನ ನಾಗರೀಕ ಬಂಧುಗಳದ್ದಾಗಿದೆ. ಆದ್ದರಿಂದ ನಾಗರೀಕರ ಭಾವನೆಗಳನ್ನು ಗಂಭೀರವಾಗಿ ಪರಿಗಣಿಸಿ ಸರ್ಕಾರವು ಸೌಜನ್ಯಳ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಮರುತನಿಖೆಗೆ ಒಳಪಡಿಸಬೇಕು.

ಈ ಮೂಲಕ ಮೃತ ಸಹೋದರಿ ಸೌಜನ್ಯಳಗೆ ಮತ್ತು ಅವರ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕಾಗಿ ಕ್ಷೇತ್ರದ ಶಾಸಕನ ನೆಲೆಯಲ್ಲಿ ಹಾಗೂ ವೈಯಕ್ತಿಕವಾಗಿ ತಮ್ಮನ್ನು ಆಗ್ರಹಿಸುತ್ತೇನೆ ಎಂದು ಹರೀಶ್ ಪೂಂಜಾ ಮನವಿ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+