ಉಜಿರೆ: ಸೌಜನ್ಯ ಪೋಷಕರ ಮೇಲೆ ಹಲ್ಲೆ ಯತ್ನ:ಆರೋಪಿ ವಿರುದ್ಧ ಎಫ್‌ಐಆರ್
ಮಂಗಳೂರು, ಆಗಸ್ಟ್ 05: ಉಜಿರೆಯಲ್ಲಿ ಧರ್ಮಸ್ಥಳ ಭಕ್ತರು ನಡೆಸಿದ ಪ್ರತಿಭಟನೆ ವೇಳೆ ಸೌಜನ್ಯ ಪೋಷಕರ ಮೇಲೆ ಹಲ್ಲೆಗೆ ಯತ್ನ ನಡೆಸಿದ ಘಟನೆ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಸೌಜನ್ಯಳ ತಾಯಿ ಕುಸುಮಾವತಿ ಅವರನ್ನು ತಡೆದು ನಿಲ್ಲಿಸಿ ಮೈಗೆ ಕೈ ಹಾಕಿ ಚೂಡಿದಾರದ ಶಾಲು ಎಳೆದು ಮಾನಕ್ಕೆ ಕುಂದುಂಟು ಮಾಡಿದ್ದಲ್ಲದೇ ಮಗನ ಮೇಲೂ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸೌಜನ್ಯಳ ತಾಯಿ ಕುಸುಮಾವತಿ ದೂರು ನೀಡಿದ್ದಾರೆ.

ಕುಸುಮಾವತಿ ದೂರಿನ ಹಿನ್ನೆಲೆಯಲ್ಲಿ ಐಪಿಸಿ 1860, 341, 354, 323, 34 ಸೆಕ್ಷನ್ ಗಳಡಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಸೌಜನ್ಯಾ ಕೊಲೆ ಪ್ರಕರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅವಹೇಳನಕ್ಕೆ ಕ್ಷೇತ್ರದ ಭಕ್ತರಿಂದ ಬೃಹತ್ ಸಭೆ ನಡೆದಿದೆ. ಧರ್ಮಸ್ಥಳ ಕ್ಷೇತ್ರಕ್ಕೆ ಸಂಬಂಧಪಟ್ಟ ವಿವಿಧ ಸಂಸ್ಥೆಗಳ ಪ್ರತಿನಿಧಿಗಳು, ಸದಸ್ಯರು, ಭಕ್ತರು ಸೇರಿ ಬೃಹತ್ ಹಕ್ಕೊತ್ತಾಯ ಸಭೆ ನಡೆಸಿದ್ದು, ವೀರೇಂದ್ರ ಹೆಗ್ಗಡೆ ಅವರ ಬಗ್ಗೆ ಅವಹೇಳನ ಮಾಡುವುದನ್ನು ಖಂಡಿಸಿದ್ದರು.

ಈ ವೇಳೆ ಸೌಜನ್ಯ ತಾಯಿ ಹಾಗೂ ಕುಟುಂಬಸ್ಥರು ಸಮಾವೇಶಕ್ಕೆ ಆಗಮಿಸಿದ್ದರು. ಈ ವೇಳೆ ಸಮಾವೇಶದ ಆಯೋಜಕರು ಹಾಗೂ ಪೊಲೀಸರು ವೇದಿಕೆ ಹತ್ತದಂತೆ ತಡೆದಿದ್ದಾರೆ. ಈ ವೇಳೆ ಮಹಾವೀರ್ ಜೈನ್ ಎನ್ನುವಾತ ಸೌಜನ್ಯ ಸಹೋದರ ಜಯರಾಮ್ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಎಫ್‌ಐಆರ್ ದಾಖಲಾಗಿದೆ.
ಇನ್ನು ನಿನ್ನೆ( ಆಗಸ್ಟ್ 04) ಸೌಜನ್ಯಾ ಹತ್ಯೆ ಪ್ರಕರಣದ ನೆಪದಲ್ಲಿ ಧರ್ಮಸ್ಥಳ ಕ್ಷೇತ್ರದ ಹಾಗೂ ಧರ್ಮಾಧಿಕಾರಿಗಳ ವಿರುದ್ಧ ಆರೋಪ ಮಾಡುವುದನ್ನು ವಿರೋಧಿಸಿ ಸಾವಿರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಉಜಿರೆ ಜನಾರ್ದನ ಸ್ವಾಮಿ ದೇವಸ್ಥಾನದ ಬಳಿಯಿಂದ ಪ್ರತಿಭಟನಾ ಸಭೆಯ ಉದ್ಘಾಟನೆ ನಡೆದು ಬಳಿಕ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಬಳಿಗೆ ಭಕ್ತರು ಕಾಲ್ನಡಿಗೆ ಜಾಥಾ ನಡೆಸಿದರು. ಧರ್ಮಸ್ಥಳ ಕ್ಷೇತ್ರದ ವಿವಿಧ ಸಂಸ್ಥೆಗಳ ಪ್ರತಿನಿಧಿಗಳು, ಸ್ವಸಹಾಯ ಸಂಘದ ಸದಸ್ಯರು, ರಾಜ್ಯದ ವಿವಿಧೆಡೆಯಿಂದ ಬಂದ ಕ್ಷೇತ್ರದ ಭಕ್ತರು ವೀರೇಂದ್ರ ಹೆಗ್ಗಡೆ ಪರವಾಗಿ ಒಕ್ಕೊರಳ ಧ್ವನಿ ಎತ್ತಿದ್ದಾರೆ. ವಿನಾಕಾರಣ ಅಪಪ್ರಚಾರ, ಆರೋಪ ಮಾಡಿದರೆ ಸುಮ್ಮನಿರಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications