Dharmasthala:ಕ್ಷೇತ್ರದ ಬಗ್ಗೆ ಅಪಪ್ರಚಾರ ನಡೆದರೂ ಸುಮ್ಮನಿರೋದ್ಯಾಕೆ: ಮುಖ್ಯಸ್ಥರ ಸಭೆಯಲ್ಲಿ ವೀರೇಂದ್ರ ಹೆಗ್ಗಡೆ ಹೇಳಿದ್ದೇನು?

ಮಂಗಳೂರು, ಜುಲೈ 19: 11 ವರ್ಷಗಳ ಬಳಿಕ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಮತ್ತೆ ಮುಖ್ಯಭೂಮಿಕೆಗೆ ಬಂದಿದೆ. ಇತ್ತೀಚಿಗಷ್ಟೇ ಆರೋಪಿ ಸಂತೋಷ್‌ ರಾವ್‌ನನ್ನು ದೋಷ ಮುಕ್ತಗೊಳಿಸಿ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ಈ ಬಳಿಕ ಶ್ರೀ ಕ್ಷೇತ್ರ ಧರ್ಮಸ್ಥಳ ಬಗ್ಗೆ ಪರ-ವಿರೋಧ ಚರ್ಚೆಗಳು ಸಾಮಾಜಿಕ ಜಾಲತಾಣದಲ್ಲಿ ಯತೇಚ್ಛವಾಗಿ ನಡೆಯುತ್ತಿದೆ.

ಈ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಧರ್ಮಸ್ಥಳದ ವಿಭಾಗೀಯ ಮುಖ್ಯಸ್ಥರ ಸಭೆ ನಡೆಸಿ ಪ್ರಸ್ತುತ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ಕ್ಷೇತ್ರದಲ್ಲಿ 60 ವರ್ಷಗಳಲ್ಲಿ ಬಹಳ ಬದಲಾವಣೆ ಆಗಿದೆ. ಹಲವು ಸೇವೆ ಮಾಡಿಕೊಂಡು ಬಂದಿದ್ದೇವೆ ಎಂದಿದ್ದಾರೆ.

Sowjanya Murder Case Ujire

ಒಳ್ಳೆಯ ಕೆಲಸ ಎನ್ನುವುದು ಎರಡು ರೀತಿಯ ಕತ್ತಿ ಇದ್ದ ಹಾಗೆ. ಅದು ಎರಡೂ ಕಡೆಯಿಂದ ಕೊಯ್ಯುತ್ತದೆ. ಪ್ರಚಾರದ ದೃಷ್ಟಿಯಲ್ಲಿ ಒಳ್ಳೆಯದು ಹಾಗೂ ದ್ವೇಷ ಎರಡನ್ನೂ ಕೂಡ ಉಂಟು ಮಾಡುತ್ತದೆ. ನಮಗೆ ಕೋಟ್ಯಂತರ ಅಭಿಮಾನಿಗಳ ಬಳಗ ಇದೆ. ಇದರಲ್ಲಿ ಕೆಲವರಿಗೆ ದ್ವೇಷ ಆಗಿದೆ. ಇದಕ್ಕೆ ಧರ್ಮಸ್ಥಳದ ಹೆಸರಲ್ಲಿ ಒಳ್ಳೆಯ ಕೆಲಸ ಆಗುತ್ತಿದೆ ಎನ್ನುವ ಅಸೂಯೇ ಕಾರಣ ಎಂದರು.

ಧರ್ಮಸ್ಥಳದಿಂದ ಎಲ್ಲಾ ರೀತಿಯ ಕೆಲಸಗಳು ನಡೆದಿದೆ. ಅವರು ಇಷ್ಟೆಲ್ಲಾ ಕೆಲಸ ಮಾಡಿ ಹೆಸರು ತೆಗೆದುಕೊಳ್ಳುತ್ತಾರಲ್ಲ. ದೇವಸ್ಥಾನದ ಹಣವನ್ನು ಬಳಸಿಕೊಂಡಲ್ಲವೇ ಕಾರ್ಯಕ್ರಮಗಳನ್ನು ಮಾಡುವುದು ಎನ್ನುವ ಮಾತು ಹಲವರಲ್ಲಿದೆ. ಹೌದು ಕ್ಷೇತ್ರದ ಸಂಪತ್ತನ್ನು ಹೇಗೆ ಉಪಯೋಗಿಸಿಕೊಳ್ಳುತ್ತೇವೆ ಎನ್ನುವುದು ಮುಖ್ಯ ಎಂದರು.

ಈ ಹಿಂದೆ ಏನಾಗಿದೆ ಎನ್ನುವುದು ಊರಿನಲ್ಲಿರುವವರಿಗೆಲ್ಲಾ ಗೊತ್ತು. ಈಗ ಅವರು ಮಾತನಾಡುವ ವಿಷಯಗಳು ನಮಗೆ ಸಂಬಂಧವೇ ಇಲ್ಲ. ತನಿಖೆ ಮಾಡಲು ಮೊದಲು ಸರ್ಕಾರಕ್ಕೆ ಮೊದಲು ಪತ್ರ ಬರೆದಿದ್ದೇ ನಾನು. ಸಿಬಿಐಗೆ ಒಪ್ಪಿಸಿ ಅಂತ ಮುಖ್ಯಮಂತ್ರಿಗಳಿಗೆ ಹೇಳಿದ್ದು ನಾನೇ. ಮತ್ತಷ್ಟು ತನಿಖೆ, ಸಂಶೋಧನೆ ಮಾಡಲಿ ಅದರಿಂದ ನಮಗೆ ತೊಂದರೆ ಇಲ್ಲ. ಆದರೆ ಕ್ಷೇತ್ರದ ವಿಷಯ ಯಾಕೆ ಮಧ್ಯೆ ತರುತ್ತಾರೆ ಎಂದು ಗೊತ್ತಾಗ್ತಿಲ್ಲ ಎಂದು ಹೇಳಿದರು.

Sowjanya Murder Case Ujire

ಇದರ ಹಿಂದೆ ಅಮಾಯಕ ಹುಡುಗಿಯ ಸಾವಿನ ವಿಚಾರ ಇಲ್ಲ, ಬದಲಿಗೆ ಕ್ಷೇತ್ರದ ಹೆಸರನ್ನು ಹಾಳುವ ಮಾಡುವ ಉದ್ದೇಶ ಇದರಲ್ಲಿ ಕಾಣುತ್ತದೆ. ನನಗೆ ಯಾವುದೇ ಭಯ, ಸಂಕೋಚ ಹಾಗೂ ಸಂದೇಹ ಇಲ್ಲ. ನಾನು ನಿರ್ಮಲವಾಗಿದ್ದೇನೆ. ಆದರೆ ಅನಾವಶ್ಯಕವಾಗಿ ಯಾಕೆ ಶತ್ರುತ್ವ ಬೆಳೆಸುತ್ತಿದ್ದಾರೆ. ಶತೃತ್ವಕ್ಕೆ ಕಾರಣ ಏನು ಎನ್ನುವುದೇ ನಮಗೆ ಇರುವ ಸಮಸ್ಯೆಯಾಗಿದೆ.

ನಮ್ಮ ಕ್ಷೇತ್ರ ಸಿಬ್ಬಂದಿಗೆ ಈ ಸತ್ಯ ಗೊತ್ತಿರಬಹುದು. ಹೀಗಾಗಿ ಕ್ಷೇತ್ರದ ಬಗ್ಗೆ ಅಪಪ್ರಚಾರ ನಡೆದರೂ ನಾವು ಯಾಕೆ ಸುಮ್ಮನಿದ್ದೇವೆ ಎಂದು ಅವರಿಗೆ ಅನಿಸಬಾರದು. ಸುಮ್ಮನೆ ಸಂಭಾಷಣೆ ಆರಂಭವಾಗಬಾರದು ಎಂದು ನಾವು ಸುಮ್ಮನ್ನಿದ್ದೇವೆ. ಅನೇಕರು ಬಂದು ಕಣ್ಣೀರು ಹಾಕುತ್ತಾರೆ. ನಿಮಗೆ ಹೀಗಾದರೆ ಹೇಗೆ ತಡೆಯೋದು ಎನ್ನುತ್ತಾರೆ. ಇದು ನಿಜವಾದ ಪ್ರೀತಿ. ನಮ್ಮ ಮೇಲೆ ಪ್ರೀತಿ ಯಾರಿಗೆ ಇದೆ, ದ್ವೇಷ ಯಾರಿಗೆ ಇದೆ ಎನ್ನುವುದನ್ನು ತಿಳಿದುಕೊಳ್ಳುವ ಸಮಯ. ಈಗ ಪ್ರೀತಿ ಮತ್ತು ದ್ವೇಷ ಯಾರಿಗಿದೆ ಎಂದು ಗೊತ್ತಾಗುತ್ತದೆ ಎಂದರು.

ನಮ್ಮ ಆತ್ಮ ಮತ್ತು ವ್ಯವಹಾರ ಎಲ್ಲವೂ ಸ್ವಚ್ಛವಾಗಿದೆ. ಗುಬ್ಬಿಗೆ ಬ್ರಹ್ಮಾಸ್ತ್ರ ಬಿಡುವ ಅಗತ್ಯವೇ ಇಲ್ಲ. ನೀವೆಲ್ಲಾ ನಿಮ್ಮ ಸಿಬ್ಬಂದಿ ಕರೆದು ಈ ಬಗ್ಗೆ ಗಟ್ಟಿಯಾಗಿ ಹೇಳಿ. ಧರ್ಮಸ್ಥಳದಲ್ಲಿ ಎಲ್ಲವೂ ಚೆನ್ನಾಗಿದೆ. ನಮ್ಮಲ್ಲಿ ಒಳ್ಳೆಯ ಕಾರ್ಯಗಳು ನಡೆಯುತ್ತಿದೆ. ಇದು ಮಧ್ಯದಲ್ಲಿ ಬಂದ ಮೋಡವಷ್ಟೇ. ಈ ಪರದೆ ತೆಗೆಯಬೇಕು. ಅದನ್ನುದೇವರು ತೆಗೆಯುತ್ತಾನೆ. ನಿಮ್ಮ ಶಿಸ್ತು ಮತ್ತು ನಿಯಮ ಬಿಡಬೇಡಿ. ನನಗೆ ಯಾವ ಭಯವೂ ಇಲ್ಲ. ನಾವು ಯಾರಿಗೂ ಯಾವ ಅನ್ಯಾಯಕ್ಕೂ ಸಹಕಾರ ನೀಡಲ್ಲ ಎಂದು ಹೇಳಿದರು.

ವೈಯಕ್ತಿಕ ಅವಮಾನ ಮತ್ತು ವೈಯಕ್ತಿಕ ಸಂಭಾಷಣೆ ಸರಿಯಲ್ಲ. ನಮ್ಮ ಅಭಿಮಾನಿಗಳು ಏನಾದರೂ ಮಾಡಲು ಸಿದ್ಧರಿದ್ದಾರೆ. ಆದರೆ ನಾನು ಏನೂ ಮಾಡಬೇಡಿ ಅಂದಿದ್ದೇನೆ. ನೈತಿಕ ಶಕ್ತಿ ದೊಡ್ಡದು ಎಂದಿದ್ದೇನೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+