ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಲ್ಲಡ್ಕ: ಶಾಂತಿ ಕದಡುವರಿಗೆ ಖಡಕ್ ಎಚ್ಚರಿಕೆ ನೀಡಿದ ಎಸ್ಪಿ ಭೂಷಣ್

|
Google Oneindia Kannada News

ಮಂಗಳೂರು, ಮೇ 29 : ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿ ಮುಸ್ಲಿಂ ಯುವಕರ ಮೇಲೆ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಶಾಂತಿ ಕದಡುವ ಸಂದೇಶ ರವಾನಿಸುತ್ತಿರುವರಿಗೆ ಜಿಲ್ಲಾ ಎಸ್ಪಿ ಭೂಷಣ್ ಜಿ ಬೊರಸೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಮೇ 25 ರಂದು ಕಲ್ಲಡ್ಕದಲ್ಲಿ ನವಾಜ್ ಮುಗಿಸಿಕೊಂಡು ವಾಪಸ್ಸಾಗುತ್ತಿದ್ದ ಮೈವರು ಮುಸ್ಲಿಂ ಯುವಕರ ಮೇಲೆ ಹಿಂದೂ ಯುವಕ ತಂಡವೊಂದು ದಾಳಿ ಮಾಡಿ ಓರ್ವನಿಗೆ ಚೂರಿ ಇರಿದು ಪರಾರಿಯಾಗಿತ್ತು.[ಕಲ್ಲಡ್ಕದಲ್ಲಿ ಮುಸ್ಲಿಂ ಯುವಕರ ಮೇಲೆ ಹಿಂದೂಗಳ ಹಲ್ಲೆ]

SP warns miscreants provoking posts on social media about kalladka issue

ಈ ಬಗ್ಗೆ ಈಗಾಗಲೇ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಸರಾಗವಾಗಿ ನಡೆಯುತ್ತಿದೆ. ಆದರೆ, ಕೆಲ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಶಾಂತಿ ಭಗ್ನ ಮಾಡುವಂತ ಸಂದೇಶಗಳನ್ನು ಪೋಸ್ಟ್ ಮಾಡುತ್ತಿರುವವರ ಮೇಲೆ ಎಸ್ಪಿ ಭೂಷಣ್ ಜಿ ಬೊರಸೆ ಗರಂ ಆಗಿದ್ದಾರೆ.

ಮನೋವೃತ್ತಿಯ ಶಕ್ತಿಗಳು ಫೇಸ್ಬುಕ್, ವಾಟ್ಸಪ್ ಗಳಲ್ಲಿ ಸಾರ್ವಜನಿಕ ಶಾಂತಿಗೆ ಭಂಗ ತರುವ ರೀತಿಯ ಸಂದೇಶಗಳನ್ನು ರವಾನಿಸುತ್ತಿರುವುದು ಗಮನಕ್ಕೆ ಬಂದಿದೆ. ಸಾರ್ವಜನಿಕರು ಈ ಬಗ್ಗೆ ಯಾವುದೇ ಗೊಂದಲಕ್ಕೆ ಒಳಗಾಗಬಾರದು.

ಇಂತಹ ವ್ಯಕ್ತಿಗಳ ಬಗ್ಗೆ ನೇರವಾಗಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಅಥವಾ ಪೊಲೀಸ್ ಕಂಟ್ರೋಲ್ ರೂಮಿಗೆ ಮಾಹಿತಿ ನೀಡಿದಲ್ಲಿ ಕಠಿಣ ಕ್ರಮ ಜರುಗಿಸುವಲಾಗುವುದು" ಎಂದು ಎಸ್ಪಿ ತಿಳಿಸಿದ್ದಾರೆ.

ಸರ್ವ ಧರ್ಮೀಯರೂ ಜೊತೆಯಾಗಿ ಸಮಾಜದ ಶಾಂತಿ-ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಕೋರಿದ್ದಾರೆ.

English summary
Some miscreants are posting provoking posts on social media regarding kalladka issue, SP Bhushan Borase warns that such persons will be severely punished by the law.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X