ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸ್ಪೀಕರ್ ಕಾಂಗ್ರೆಸ್ ಶಾಸಕರ ರಾಜೀನಾಮೆ ಅಂಗೀಕರಿಸುವುದಿಲ್ಲ- ಶರವಣ

|
Google Oneindia Kannada News

ಮಂಗಳೂರು, ಜುಲೈ 2: ವಿಧಾನ ಪರಿಷತ್ ಸದಸ್ಯ ಹಾಗೂ ಮುಖ್ಯಮಂತ್ರಿ ಕುಮಾರಸ್ವಾಮಿ ಆಪ್ತ ಶರವಣ ಇಂದು ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿದರು. ದೇವಾಲಯದಲ್ಲಿ ಸುಬ್ರಹ್ಮಣ್ಯನ ದರ್ಶನ ಪಡೆದು ಪೂಜೆ ಸಲ್ಲಿಸಿದರು. ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನ ಇಬ್ಬರು ಶಾಸಕರು ಸಲ್ಲಿಸಿದ ರಾಜೀನಾಮೆಯನ್ನು ಸ್ಪೀಕರ್ ಊರ್ಜಿತ ಮಾಡುವುದಿಲ್ಲ ಎಂದರು.

 ರಮೇಶ್ ಜಾರಕಿಹೊಳಿ ದೆಹಲಿಗೆ, ರಾಜ್ಯ ರಾಜಕಾರಣ ಕ್ಲೈಮ್ಯಾಕ್ಸ್‌ಗೆ? ರಮೇಶ್ ಜಾರಕಿಹೊಳಿ ದೆಹಲಿಗೆ, ರಾಜ್ಯ ರಾಜಕಾರಣ ಕ್ಲೈಮ್ಯಾಕ್ಸ್‌ಗೆ?

ಇಬ್ಬರು ಶಾಸಕರು ರಾಜೀನಾಮೆಯನ್ನು ಸಲ್ಲಿಸಬೇಕಾದ ನಿಯಮವನ್ನು ಪಾಲಿಸಿಲ್ಲ. ಈ ಕಾರಣಕ್ಕಾಗಿ ಸ್ಪೀಕರ್ ಇಬ್ಬರ ರಾಜೀನಾಮೆಯನ್ನು ಅಂಗೀಕರಿಸುವುದಿಲ್ಲ. ಇಬ್ಬರು ಶಾಸಕರನ್ನು ಮನವೊಲಿಸುವ ಕಾರ್ಯವನ್ನು ಕಾಂಗ್ರೆಸ್ ಮುಖಂಡರು ಮಾಡುತ್ತಿದ್ದಾರೆ ಎಂದ ಅವರು, ಸರ್ಕಾರ ಸುಭದ್ರವಾಗಿದ್ದು, ಐದು ವರ್ಷ ಯಾವುದೇ ಅಡ್ಡಿಯಿಲ್ಲದೆ ಪೂರೈಸುತ್ತದೆ ಎಂದು ಭರವಸೆ ವ್ಯಕ್ತಪಡಿಸಿದರು.

Speaker wont accept the resignation of Congress legislators said saravana

ಕಾಂಗ್ರೆಸ್ ನಾಯಕರು ಅವರ ಶಾಸಕರನ್ನು ಏನು ಮಾಡಬೇಕು ಅದನ್ನು ಮಾಡ್ತಾರೆ, ಜೆಡಿಎಸ್ ಶಾಸಕರು ದೇವೇಗೌಡರ ಸಂಪರ್ಕದಲ್ಲಿದ್ದಾರೆ. ಸರ್ಕಾರ ಬೀಳಿಸಲು ಪ್ರಯತ್ನಿಸುತ್ತಿರುವ ಬಿಜೆಪಿ ತಂತ್ರ ಫಲಿಸುವುದಿಲ್ಲ. ಕುರ್ಚಿಯ ಆಸೆಗೆ ಬಿಜೆಪಿ ಜಪ ಮಾಡುತ್ತಿದ್ದು, ಅವರ ಆಸೆ ನೆರವೇರುವುದಿಲ್ಲ ಎಂದು ಅವರು ಬಿಜೆಪಿ ನಾಯಕರ ವಿರುದ್ಧ ಕಿಡಿ ಕಾರಿದರು.

English summary
Speaker wont accept the resignation of Congress legislators said saravana. Speaking to media person in Kukke Subramanya, MLC Sharavara said that, Though two congress MLA's resigned, It wont affect coalition government and moreover, speaker wont accept the resignation.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X