ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕರಾವಳಿಯ ಶಿವಾಲಯಗಳಲ್ಲಿ ಕಳೆಕಟ್ಟಿದ ಮಹಾಶಿವರಾತ್ರಿಯ ಸಂಭ್ರಮ

|
Google Oneindia Kannada News

ಮಂಗಳೂರು, ಮಾರ್ಚ್ 04: ಇಂದು ನಾಡಿನೆಲ್ಲೆಡೆ ಮಹಾಶಿವರಾತ್ರಿಯ ಸಂಭ್ರಮ.ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಬಹುತೇಕ ಎಲ್ಲಾ ಶಿವಾಲಯಗಳಲ್ಲಿ ಜಾತ್ರೆ, ರುದ್ರಾಭಿಷೇಕ ಹಾಗೂ ವಿಶೇಷ ಪೂಜೆಗಳು ಭಕ್ತಿ, ಸಂಭ್ರಮದಿಂದ ನಡೆಯುತ್ತಿವೆ.

ಶಿವ ಅಭಿಷೇಕ ಪ್ರಿಯ. ರುದ್ರ ಮಂತ್ರಗಳಿಂದ ಶಿವಲಿಂಗಕ್ಕೆ ಜಲಾಭಿಷೇಕ ಮಾಡಿ, ಶಿವತೀರ್ಥ ಸ್ವೀಕರಿಸುವ ಶಾಸ್ತ್ರಕರ್ಮ ನಡೆದು ಬಂದಿದೆ. ಅದರಂತೆ ಮಂಗಳೂರಿನ ಕದ್ರಿ ಮಂಜುನಾಥ ದೇವಾಲಯ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ವರ್ಷಾವಧಿ ಉತ್ಸವ ಹಾಗೂ ಶಿವರಾತ್ರಿ ಮಹೋತ್ಸವ ನಡೆಯುತ್ತದೆ.ಇಂದು ಮುಂಜಾನೆಯಿಂದಲೇ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಶ್ರೀ ಕ್ಷೇತ್ರದಲ್ಲಿ ಆರಂಭವಾಗಿವೆ.

ಭಕ್ತರ ಪಾಲಿನ ಭೂ ಕೈಲಾಸ ಶ್ರೀ ಕ್ಷೇತ್ರ ಗೋಕರ್ಣದ ಇತಿಹಾಸ, ಮಹಿಮೆಭಕ್ತರ ಪಾಲಿನ ಭೂ ಕೈಲಾಸ ಶ್ರೀ ಕ್ಷೇತ್ರ ಗೋಕರ್ಣದ ಇತಿಹಾಸ, ಮಹಿಮೆ

ಕದ್ರಿ ಮಂಜುನಾಥ ದೇಗುಲದಲ್ಲಿ ಶಿವರಾತ್ರಿ ಅಂಗವಾಗಿ ವಿಶೇಷವಾಗಿ ರುದ್ರಾಭಿಷೇಕ, ಶಿವಪೂಜೆ, ರಾತ್ರಿ ಜಮಾ ಪೂಜೆ, ಉತ್ಸವ ಬಲಿ, ಬೆಳ್ಳಿ ರಥೋತ್ಸವ ಜರಗಲಿದೆ. ಪಾಂಡೇಶ್ವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ಅಂಗವಾಗಿ ಇಂದು ಮುಂಜಾನೆಯಿಂದ ಮರುದಿನ ಬೆಳಗ್ಗೆವರೆಗೆ ವಿಶೇಷ ಪೂಜೆ, ಸಾಂಸ್ಕೃತಿಕ ಕಾರ್ಯಕ್ರಮ, ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ.

Special poojas are performed in all Shiva temples of Dakshina Kannada

ಶರವು ಮಹಾಗಣಪತಿ ದೇಗುಲದಲ್ಲಿ ಉಷಃಕಾಲ ಪೂಜೆ, ಏಕಾದಶ ರುದ್ರಾಭಿಷೇಕ, ವಿಶೇಷ ಸೀಯಾಳಾಭಿಷೇಕ ನಡೆಯಲಿದೆ. ಸಂಜೆ 7.30ರಿಂದ ವಿಶೇಷ ಅಲಂಕಾರ ಪೂಜೆ, ಮಹಾಪೂಜೆ, ಕಾರ್ತಿಕ ಪೂಜೆ, 8ಕ್ಕೆ ಶತರುದ್ರಾಭಿಷೇಕ, ರಂಗಪೂಜೆ, ಮಹಾಪೂಜೆ ಜರಗಲಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಮಹಾಶಿವರಾತ್ರಿ ಆಚರಣೆಗೆ ಸಜ್ಜಾಗಿದೆ.

 ಶಿವರಾತ್ರಿಗೆ ಮಹದೇಶ್ವರಬೆಟ್ಟದತ್ತ ಹೊರಟ ಪಾದಯಾತ್ರಿಗಳು ಶಿವರಾತ್ರಿಗೆ ಮಹದೇಶ್ವರಬೆಟ್ಟದತ್ತ ಹೊರಟ ಪಾದಯಾತ್ರಿಗಳು

ಉಡುಪಿಯ ಶ್ರೀ ಅನಂತೇಶ್ವರ ದೇವಸ್ಥಾನ, ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನ, ಕೋಟೇಶ್ವರದ ಶ್ರೀಶಂಕರ ನಾರಾಯಣ ದೇವಸ್ಥಾನ, ಶಂಕರನಾರಾಯಣದ ದೇವಸ್ಥಾನ, ಮಡಿ ಮಲ್ಲಿಕಾರ್ಜುನ ದೇವಸ್ಥಾನ ಮೊದಲಾದೆಡೆಗಳಲ್ಲಿ ವಿಶೇಷ ಪೂಜೆ, ಅಭಿಷೇಕ, ಪಾರಾಯಣಗಳು ನಡೆಯುತ್ತಿವೆ.

Special poojas are performed in all Shiva temples of Dakshina Kannada

 ಮಹಾ ಶಿವರಾತ್ರಿ ಆಚರಣೆಗೆ ಸಜ್ಜಾದ ಮೈಸೂರು, ದೇವಾಲಯಗಳಲ್ಲಿ ವಿಶೇಷ ಪೂಜೆ ಮಹಾ ಶಿವರಾತ್ರಿ ಆಚರಣೆಗೆ ಸಜ್ಜಾದ ಮೈಸೂರು, ದೇವಾಲಯಗಳಲ್ಲಿ ವಿಶೇಷ ಪೂಜೆ

ಮಹಾ ಶಿವರಾತ್ರಿಯ ಹಿನ್ನೆಲೆಯಲ್ಲಿ ಭಾನುವಾರದಿಂದಲೇ ಮಂಗಳೂರು, ಉಡುಪಿಯ ವಿವಿಧ ಮಾರುಕಟ್ಟೆಗಳಲ್ಲಿ ವ್ಯಾಪಾರ ವಹಿವಾಟು ಭರ್ಜರಿಯಾಗಿ ನಡೆಯುತ್ತಿದ್ದು, ಇಂದು ಮುಂಜಾನೆಯಿಂದಲೇ ಹೂ-ಹಣ್ಣುಗಳ ಮಾರಾಟ ಜೋರಾಗಿದೆ. ಭಾರೀ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಗಳಿಗೆ ಬರುತ್ತಿದ್ದಾರೆ.

English summary
In all the Shiva temples in Dakshina Kannada and Udupi district Jatra, Rudrabhishekha, special poojas are performed.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X