ಎಚ್ಡಿಕೆ ಗುಣಮುಖರಾಗಲಿ ಎಂದು ಮಂಗಳೂರಿನಲ್ಲಿ ವಿಶೇಷ ಪೂಜೆ

ಮಂಗಳೂರು, ಸೆಪ್ಟೆಂಬರ್ 24 : ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬೇಗ ಗುಣಮುಖರಾಗಲಿ ಎಂದು ದೇವರಿಗೆ ಪ್ರಾರ್ಥನೆ ಸಲ್ಲಿಸಲಾಯಿತು. ಕುಮಾರಸ್ವಾಮಿ ಅವರಿಗೆ ತೆರೆದ ಹೃದಯದ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾ ಯುವ ಜನತಾದಳದ ವತಿಯಿಂದ ಮಂಗಳೂರು ನಗರದ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ವಿಶೇಷ ರುದ್ರ ಅಭೀಷೇಕ ನಡೆಸಿ, ಕುಮಾರಸ್ವಾಮಿ ಅವರು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸಲಾಯಿತು.

 Special prayers in Mangaluru for HD Kumaraswamy health

ನಂತರ ಪ್ರಸಿದ್ಧ ದರ್ಗಾ ಹಾಗೂ ವಿಲಾಗ್ರಿಸ್ ಚರ್ಚ್ ಗೆ ಭೇಟಿ ನೀಡಿ ವಿಶೇಷ ಪೂಜೆಯನ್ನು ನಡೆಸಲಾಯಿತು. ದಕ್ಷಿಣ ಕನ್ನಡ ಜಿಲ್ಲಾ ಯುವ ಜನತಾದಳ ಜಿಲ್ಲಾಧ್ಯಕ್ಷರಾದ ಅಕ್ಷಿತ್ ಸುವರ್ಣ ನೇತೃತ್ವದಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು.

ಇದೇ ಸಂದರ್ಭದಲ್ಲಿ ರಾಜ್ಯ ನಾಯಕರುಗಳಾದ ಗೋಪಾಲಕೃಷ್ಣ ಅತ್ತಾವರ, ಪೈಜಲ್, ರತ್ನಕರ್ ಸುವರ್ಣ, ನಾಸಿರ್, ಜಿಲ್ಲಾ ಯುವ ಮಹಾ ಪ್ರಧಾನ ಕಾರ್ಯದರ್ಶಿ ಮಧುಸೂದನ ಗೌಡ, ಜಿಲ್ಲಾ ಯುವ ಸಂಘಟನಾ ಕಾರ್ಯದರ್ಶಿ ಅರ್ಷಕ್ ಇಸ್ಮಾಯಿಲ್ ಮುಂತಾದವರು ಉಪಸ್ಥಿತರಿದ್ದರು.

ಬೆಂಗಳೂರಿನ ಅಪೋಲೊ ಆಸ್ಪತ್ರೆಯಲ್ಲಿ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಯಶಸ್ವಿಯಾಗಿ ತೆರೆದ ಹೃದಯದ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಕುಮಾರಸ್ವಾಮಿ ಅವರು ಚೇತರಿಸಿಕೊಳ್ಳುತ್ತಿದ್ದು, 48 ಗಂಟೆಗಳ ಬಳಿಕ ವಾರ್ಡ್‌ಗೆ ಶಿಫ್ಟ್ ಮಾಡಲಾಗುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+