ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗಳೂರಿನಲ್ಲಿ ಸೆಪ್ಟೆಂಬರ್ 13ರಂದು ಶ್ರೀ ಕೃಷ್ಣ ವೇಷ ಸ್ಪರ್ಧೆ

|
Google Oneindia Kannada News

ಮಂಗಳೂರು, ಸೆಪ್ಟೆಂಬರ್ 10: ಕೃಷ್ಣಾಷ್ಟಮಿ ಪ್ರಯುಕ್ತ ಕಳೆದ ಮೂರು ದಶಕಗಳಿಂದ ಶ್ರೀಕೃಷ್ಣ ವೇಷ ಸ್ಪರ್ಧೆಗೆ ವೇದಿಕೆಯಾಗಿರುವ ಕಲ್ಕೂರ ಪ್ರತಿಷ್ಠಾನ ಈ ಬಾರಿ ಸೆಪ್ಟೆಂಬರ್ 13 ರಂದು ಶ್ರೀ ಕೃಷ್ಣ ವೇಷ ಸ್ಪರ್ಧೆ ಏರ್ಪಡಿಸಿದೆ.

ನಗರದ ಕದ್ರಿ ಶ್ರೀ ಮಂಜುನಾಥ ದೇವಾಲಯದ ಆವರಣದಲ್ಲಿ ನಡೆಯಲಿರುವ ಈ ಸ್ಪರ್ಧೆಯಲ್ಲಿ ಈ ಬಾರಿ 3 ಸಾವಿರಕ್ಕೂ ಅಧಿಕ ಚಿಣ್ಣರು ಭಾಗವಹಿಸುವ ನಿರೀಕ್ಷೆಯಿದೆ .

Sri Krishna Vesha competition to be held on September 13th in Mangaluru

ಈ ಕುರಿತು ಮಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಸೆಪ್ಟೆಂಬರ್ 13 ರಂದು ಕೃಷ್ಣಾಷ್ಟಮಿ ಪ್ರಯುಕ್ತ ನಡೆಯುವ ರಾಷ್ಟ್ರಮಟ್ಟದ ಮಕ್ಕಳ ಉತ್ಸವ ಶ್ರೀಕೃಷ್ಣ ವೇಷ ಸ್ಪರ್ಧೆ ಈ ಬಾರಿ 28 ವಿಭಾಗಗಳಲ್ಲಿ ನಡೆಯಲಿದೆ ಎಂದು ಹೇಳಿದರು .

8 ವೇದಿಕೆಗಳಲ್ಲಿ ಏಕಕಾಲಕ್ಕೆ ಈ ಸ್ಪರ್ಧೆಗಳು ನಡೆಯಲಿದ್ದು ಇದರೊಂದಿಗೆ ವಿವಿಧ ಸಾಹಿತ್ಯಿಕ , ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಈ ರಾಷ್ಟ್ರೀಯ ಮಕ್ಕಳ ಉತ್ಸವದಲ್ಲಿ ಏರ್ಪಡಿಸಲಾಗಿದೆ ಎಂದು ತಿಳಿಸಿದರು .

ಈ ಬಾರಿ ಕಂದ ಕೃಷ್ಣ, ಮುದ್ದು ಕೃಷ್ಣ, ತುಂಟ ಕೃಷ್ಣ, ಬಾಲಕೃಷ್ಣ, ಕಿಶೋರ ಕೃಷ್ಣ, ಶ್ರೀ ಕೃಷ್ಣ, ಗೀತಾ ಕೃಷ್ಣ, ಯಕ್ಷ ಕೃಷ್ಣ, ರಾಧಾಕೃಷ್ಣ ಯಶೋಧ ಕೃಷ್ಣ ಸೇರಿದಂತೆ ಒಟ್ಟು 28 ವಿಭಾಗದಲ್ಲಿ ಈ ಸ್ಪರ್ಧೆ ನಡೆಯಲಿದೆ ಎಂದವರು ಸ್ಪಷ್ಟಪಡಿಸಿದರು.

ರಂಗೋಲಿಯಲ್ಲಿ ಶ್ರೀಕೃಷ್ಣ ರಚನೆ, ಛಾಯಾಚಿತ್ರಗಾರರಿಗಾಗಿ ಛಾಯಾ ಕೃಷ್ಣ ಸ್ಪರ್ಧೆ , ಶ್ರೀಕೃಷ್ಣ ವರ್ಣ ವೈಭವ ಚಿತ್ರ ರಚನಾ ಸ್ಪರ್ಧೆ ಕೂಡ ಈ ಸಂದರ್ಭದಲ್ಲಿ ನಡೆಯಲಿದೆ ಎಂದು ಅವರು ತಿಳಿಸಿದರು.

English summary
The 'Sri Krishna Vesha' competition to be held on September 13th at Kadri Temple which is constantly taking place from the last three decades.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X