ಶ್ರೀಕ್ಷೇತ್ರ ಕೊಲ್ಲೂರಿಗೆ ನಾಳೆ ಶ್ರೀಲಂಕಾ ಪ್ರಧಾನಿ, ಬಿಗಿ ಭದ್ರತೆ
ಮಂಗಳೂರು, ಜುಲೈ 25: ಶ್ರೀಲಂಕಾ ಪ್ರಧಾನಿ ರನಿಲ್ ವಿಕ್ರಮ ಸಿಂಘೆ ನಾಳೆ ರಾಜ್ಯದ ಕರಾವಳಿಗೆ ಭೇಟಿ ನೀಡಲಿದ್ದಾರೆ. ನಾಳೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಲಿರುವ ಅವರು ನಂತರ ಜುಲೈ 27ರಂದು ಕೇರಳದ ಕುಂಬಳೆ ಸಮೀಪದ ಕುಮಾರಮಂಗಲ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.
ಶ್ರೀಲಂಕಾ ಪ್ರಧಾನಿ ರನಿಲ್ ವಿಕ್ರಮ ಸಿಂಘೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರ ಕೊಲ್ಲೂರು ಹಾಗೂ ಕುಮಾರಮಂಗಲ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಗಳಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಶ್ರೀಲಂಕಾ ಪ್ರಧಾನಿ ಭೇಟಿ ಸಂದರ್ಭ ಸಾರ್ವಜನಿಕರ ದರ್ಶನಕ್ಕೆ ನಿರ್ಬಂಧ ಹೇರಲಾಗಿದೆ. ಶ್ರೀಲಂಕಾ ಪ್ರಜೆಗಳ ಕ್ಷೇಮಕ್ಕಾಗಿ ವಿಶೇಷ ಸೇವೆಗಳನ್ನು ನೆರವೇರಿಸುವರು ಎಂದು ತಿಳಿದುಬಂದಿದೆ.

ಕೊಲ್ಲೂರಿನಲ್ಲಿ ನಾಳೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಸಾರ್ವಜನಿಕ ಭೇಟಿಯನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಆದೇಶ ಹೊರಡಿಸಿದ್ದಾರೆ. ಕೇರಳದ ಕಾಸರಗೋಡು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಜಿಲ್ಲಾಧಿಕಾರಿಯವರು ಪ್ರತ್ಯೇಕ ಸಭೆಗಳನ್ನು ನಡೆಸಿದರು. ಕ್ಷೇತ್ರದಲ್ಲಿ ಜುಲೈ 27ರ ಬೆಳಗ್ಗೆ 7 ಗಂಟೆಯಿಂದ ಶ್ರೀಲಂಕಾ ಪ್ರಧಾನಿಯವರು ಮರಳುವ ತನಕ ಭಕ್ತರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.












Click it and Unblock the Notifications