ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶ್ರೀಕ್ಷೇತ್ರ ಕೊಲ್ಲೂರಿಗೆ ನಾಳೆ ಶ್ರೀಲಂಕಾ ಪ್ರಧಾನಿ, ಬಿಗಿ ಭದ್ರತೆ

|
Google Oneindia Kannada News

ಮಂಗಳೂರು, ಜುಲೈ 25: ಶ್ರೀಲಂಕಾ ಪ್ರಧಾನಿ ರನಿಲ್ ವಿಕ್ರಮ ಸಿಂಘೆ ನಾಳೆ ರಾಜ್ಯದ ಕರಾವಳಿಗೆ ಭೇಟಿ ನೀಡಲಿದ್ದಾರೆ. ನಾಳೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಲಿರುವ ಅವರು ನಂತರ ಜುಲೈ 27ರಂದು ಕೇರಳದ ಕುಂಬಳೆ ಸಮೀಪದ ಕುಮಾರಮಂಗಲ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

 ಕೊಲ್ಲೂರಿನಲ್ಲಿ ಚಂಡಿಕಾ ಹೋಮ ನೆರವೇರಿಸಿದ ಮೋದಿ ಸಹೋದರ ಪ್ರಹ್ಲಾದ್ ಕೊಲ್ಲೂರಿನಲ್ಲಿ ಚಂಡಿಕಾ ಹೋಮ ನೆರವೇರಿಸಿದ ಮೋದಿ ಸಹೋದರ ಪ್ರಹ್ಲಾದ್

ಶ್ರೀಲಂಕಾ ಪ್ರಧಾನಿ ರನಿಲ್ ವಿಕ್ರಮ ಸಿಂಘೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರ ಕೊಲ್ಲೂರು ಹಾಗೂ ಕುಮಾರಮಂಗಲ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಗಳಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಶ್ರೀಲಂಕಾ ಪ್ರಧಾನಿ ಭೇಟಿ ಸಂದರ್ಭ ಸಾರ್ವಜನಿಕರ ದರ್ಶನಕ್ಕೆ ನಿರ್ಬಂಧ ಹೇರಲಾಗಿದೆ. ಶ್ರೀಲಂಕಾ ಪ್ರಜೆಗಳ ಕ್ಷೇಮಕ್ಕಾಗಿ ವಿಶೇಷ ಸೇವೆಗಳನ್ನು ನೆರವೇರಿಸುವರು ಎಂದು ತಿಳಿದುಬಂದಿದೆ.

Sri lanka Prime minister will visit Kolluru tomorrow

ಕೊಲ್ಲೂರಿನಲ್ಲಿ ನಾಳೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಸಾರ್ವಜನಿಕ ಭೇಟಿಯನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಆದೇಶ ಹೊರಡಿಸಿದ್ದಾರೆ. ಕೇರಳದ ಕಾಸರಗೋಡು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮತ್ತು ಜಿಲ್ಲಾಧಿಕಾರಿಯವರು ಪ್ರತ್ಯೇಕ ಸಭೆಗಳನ್ನು ನಡೆಸಿದರು. ಕ್ಷೇತ್ರದಲ್ಲಿ ಜುಲೈ 27ರ ಬೆಳಗ್ಗೆ 7 ಗಂಟೆಯಿಂದ ಶ್ರೀಲಂಕಾ ಪ್ರಧಾನಿಯವರು ಮರಳುವ ತನಕ ಭಕ್ತರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

English summary
Sri lankan Prime minister Ranil Weckremesinghe will visit Sri Kshethra Kolluru and Kumabale Subramanya temple on July 26. So there is a tight security in temple.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X