ಹರಿದ್ವಾರದಲ್ಲಿ ಶ್ರೀರಾಮ ಕ್ಷೇತ್ರದ ಶಾಖಾ ಮಠ ಆರಂಭ
ದಕ್ಷಿಣ ಕನ್ನಡ, ನವೆಂಬರ್ 19 : ಹಿಮಾಲಯದ ತಪ್ಪಲಿನ ಹರಿದ್ವಾರದಲ್ಲಿ ಶ್ರೀರಾಮ ಕ್ಷೇತ್ರದ ಪೀಠಾಧೀಶ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೂತನ ಶಾಖಾ ಮಠ 'ಸಾಧನಾ ಕುಟೀರ' ಸೆ.25ರಂದು ಲೋಕಾರ್ಪಣೆಗೊಳ್ಳಲಿದೆ.
ಧರ್ಮಸ್ಥಳ ಉಜಿರೆಯ ಶ್ರೀರಾಮ ಕ್ಷೇತ್ರದ ಪೀಠಾಧೀಶ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೂತನ ಶಾಖಾ ಮಠವನ್ನು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಉದ್ಘಾಟಿಸಲಿದ್ದಾರೆ.

ಹರಿಹರ ಕೈಲಾಸ ಋಷಿಕೇಶದ ಸ್ವಾಮೀಜಿ ಪ್ರೇಮಾನಂದಜಿ ಮಹಾರಾಜ್, ಹರಿದ್ವಾರದ ಹರನಾಥ್ ಮಂದಿರದ ಅಧ್ಯಕ್ಷ ದೇವಾನಂದ ಸರಸ್ವತಿ ಮಹಾರಾಜ್ ಹಾಗೂ ಸ್ವಾಮಿ ಸೋಮೇಶ್ವರ ನಂದಜಿ ಮಹಾರಾಜ್ ಆಶೀರ್ವಚನ ನೀಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್, ದಕ್ಷಿಣ ಕನ್ನಡ ಸಂಸದ ನಳೀನ್ ಕುಮಾರ್ ಕಟೀಲ್, ಭಟ್ಕಳ ಶಾಸಕ ಮಂಕಾಳ ವೈದ್ಯ ಮುಂತಾದವರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
'ಮುಂದಿನ ದಿನಗಳಲ್ಲಿ ರಾಜ್ಯದ ಸಮಸ್ತ ಹಿಂದೂ ಬಾಂಧವರು ಉತ್ತರ ಭಾರತದ ಪುಣ್ಯ ಕ್ಷೇತ್ರಗಳ ದರ್ಶನಕ್ಕೆ ಆಗಮಿಸಿದ ಸಂದರ್ಭದಲ್ಲಿ ಈ ಕುಟೀರದಲ್ಲಿ ವಾಸ್ತವ್ಯ ಹೂಡುವ ಮೂಲಕ ಇದರ ಪ್ರಯೋಜನೆ ಪಡೆದುಕೊಳ್ಳಬಹುದಾಗಿದೆ.












Click it and Unblock the Notifications