ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಎಸ್ಎಸ್ಎಲ್ಸಿ ಪರೀಕ್ಷೆ: ದ.ಕ ಜಿಲ್ಲೆ 33518 ವಿದ್ಯಾರ್ಥಿಗಳು, 91 ಕೇಂದ್ರಗಳು

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಮಾರ್ಚ್ 30 : ಪ್ರಸಕ್ತ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ ಇಂದಿನಿಂದ (ಗುರುವಾರ) ಆರಂಭವಾಗಿದ್ದು, ಎಪ್ರಿಲ್ 13ರ ವರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು 91 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿವೆ.

ದಕ್ಷಿಣ ಕನ್ನಡ ಜಿಲ್ಲೆಯ 500 ಪ್ರೌಢ ಶಾಲೆಗಳ 17267 ವಿದ್ಯಾರ್ಥಿಗಳು ಹಾಗೂ 16251 ವಿದ್ಯಾರ್ಥಿನಿಯರು ಸೇರಿದಂತೆ ಒಟ್ಟು 33518 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

SSLC Exams Begin in 91 Centres across DK District

ಎಸ್ಎಸ್ಎಲ್ಸಿ ಪರೀಕ್ಷೆ ಹಿನ್ನಲೆಯಲ್ಲಿ ಯಾವುದೇ ಅಕ್ರಮ ನಡೆಯದಂತೆ ಸಕಲ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಇದುವರೆಗೆ ಬೆಳಿಗ್ಗೆ 10.30ಕ್ಕೆ ಪರೀಕ್ಷೆಗಳು ಆರಂಭಗೊಳ್ಳುತ್ತಿದ್ದವು. ಆದರೆ, ಈ ಬಾರಿ ಪರೀಕ್ಷೆ ಬೆಳಗ್ಗೆ 9.30ಕ್ಕೆ ಆರಂಭಗೊಂಡು ಮಧ್ಯಾಹ್ನ 12.45ಕ್ಕೆ ಮುಕ್ತಾಯಗೊಳ್ಳಲಿದೆ.

ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸುವ ನಿಟ್ಟಿನಲ್ಲಿ ಜಿಲ್ಲೆಯ ಶೇ. 70 ಕೇಂದ್ರಗಳಿಗೆ ಈಗಾಗಲೇ ಸಿಸಿ ಟಿವಿ ಕ್ಯಾಮೆರಾ ಅಳವಡಿಸಲಾಗಿದೆ.

ಉಳಿದ ಶೇ. 30 ಕೇಂದ್ರಗಳಿಗೆ ಕ್ಯಾಮೆರಾ ಅಳವಡಿಸಿಲ್ಲ ಹಾಗೂ ಯಾವುದೇ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪ್ರತಿ ಕೇಂದ್ರಗಳಿಗೂ ಪೊಲೀಸ್‌ ರಕ್ಷಣೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

English summary
As SSLC examinations have begun today, proper arrangements have been made to hold them smoothly until April 12. With CCTVs monitoring, 50,000 students in DK, Udupi sit for SSLC exams.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X