ಕರಾವಳಿಯಲ್ಲಿ ಕೇಸರಿ ಪಡೆಗೆ ಮೋದಿ ಹೆಸರಿನಲ್ಲಿ ಮತ ಕೇಳುವ ಅನಿವಾರ್ಯತೆ!

ಮಂಗಳೂರು, ಮಾರ್ಚ್ 27: ರಾಜ್ಯದ ಕರಾವಳಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರದ ಭರಾಟೆ ಹೆಚ್ಚಾಗಿದೆ. ಚುನಾವಣಾ ಕಣಕ್ಕಿಳಿದಿರುವ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ ಬಳಿಕ ದೇವಾಲಯ, ಕ್ಷೇತ್ರ ದರ್ಶನ ಆರಂಭಿಸಿದ್ದಾರೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವಿಗಾಗಿ ದೇವರ ಮೊರೆ ಹೋಗಿದ್ದಾರೆ. ಪ್ರಚಾರ ಕಾರ್ಯಕ್ಕಿಂತ ಹೆಚ್ಚಾಗಿ ದೇವಾಲಯಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಈ ನಡುವೆ ಬಿಜೆಪಿಯ ಭದ್ರಕೋಟೆ ಎಂದೇ ಗುರುತಿಸಲಾಗುವ ದಕ್ಷಿಣ ಕನ್ನಡ ಮತ್ತು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಪಾಳಯದಲ್ಲಿ ತಳಮಳ ಆರಂಭವಾಗಿದೆ. ಈ ಬಾರಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಕೇಸರಿ ಪಡೆ ಹಾಲಿ ಸಂಸದರನ್ನೇ ಕಣಕ್ಕಿಳಿಸಿದೆ. ಈ ಇಬ್ಬರೂ ಅಭ್ಯರ್ಥಿಗಳ ವಿರುದ್ಧ ಸ್ವ ಪಕ್ಷದಲ್ಲೇ ಅಸಮಾಧಾನ ಹೊಗೆಯಾಡುತ್ತಿದೆ.

ಕರಾವಳಿ ಪ್ರದೇಶ ರಾಜ್ಯದ ಕೇಸರಿ ಪಡೆಗೆ ಫೇವರ್ ಬೆಲ್ಟ್.ಇಲ್ಲಿ ಬಿಜೆಪಿ ಅಭ್ಯರ್ಥಿಗಳೇ ಗೆಲುವಿನ ಕುದುರೆಗಳು. ಹೀಗಾಗಿ ಬಿಜೆಪಿ ಈ ಬಾರಿಯೂ ಅದೇ ರೀತಿಯ ಫಲಿತಾಂಶ ದಕ್ಕಿಸಿಕೊಳ್ಳುವ ಭರವಸೆಯಲ್ಲಿದೆ. ಆದರೆ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಸದ್ಯದ ಸ್ಥಿತಿಗತಿ ನೋಡಿದರೆ ಬಿಜೆಪಿಗೆ ವರವಾಗುವ ಲಕ್ಷಣ ಕಾಣುತ್ತಿಲ್ಲ.

ದಕ್ಷಿಣ ಕನ್ನಡದಲ್ಲಿ ನಳಿನ್ ಕುಮಾರ್ ಕಟೀಲ್ ಮತ್ತು ಉಡುಪಿ- ಚಿಕ್ಕಮಗಳೂರಿನಲ್ಲಿ ಶೋಭಾ ಕರಂದ್ಲಾಜೆ ವಿರುದ್ಧ ಅಸಮಾಧಾನ ವ್ಯಕ್ತವಾಗುತ್ತಿದೆ. ಪರಿಣಾಮ ಈ 2 ಕ್ಷೇತ್ರಗಳಲ್ಲಿ ಅನಿವಾರ್ಯವಾಗಿ ಮೋದಿ ನೋಡಿ ವೋಟು ಕೋಡಿ ಅನ್ನೋ ಪ್ರಚಾರ ನಡೆಯುತ್ತಿದೆ. ಮುಂದೆ ಓದಿ...

 ಮತ್ತೊಮ್ಮೆ ಮೋದಿಗಾಗಿ ಭಾರೀ ಪ್ರಚಾರ

ಮತ್ತೊಮ್ಮೆ ಮೋದಿಗಾಗಿ ಭಾರೀ ಪ್ರಚಾರ

ಸ್ವ ವರ್ಚಸ್ಸಿನ ಮೇಲೆ ಚುನಾವಣೆ ಗೆಲ್ಲುವ ತಾಕತ್ತು ಈ ಶೋಭಾ ಕರಂದ್ಲಾಜೆ ಹಾಗೂ ನಳಿನ್ ಕುಮಾರ್ ಕಟೀಲ್ ಗೆ ಇಲ್ಲ ಎಂದೇ ಹೇಳಲಾಗುತ್ತಿದೆ. ತುಳುನಾಡಿನಲ್ಲಿ ಹೇಳುವಂತೆ ಆಟಿ ಅಮವಾಸ್ಯೆಯ ಕಹಿ ಕಷಾಯದಂತೆ ಅನಿವಾರ್ಯವಾಗಿ ಇದನ್ನು ಕುಡಿಯಲೇಬೇಕು ಎನ್ನುವ ಬಿಜೆಪಿ ಕಾರ್ಯಕರ್ತರು ಮತ್ತೊಮ್ಮೆ ಮೋದಿಗಾಗಿ ಭಾರೀ ಪ್ರಚಾರ ಆರಂಭಿಸಿದ್ದಾರೆ.

 ಕಾಂಗ್ರೆಸ್‍ ಅಭ್ಯರ್ಥಿ ಮಿಥುನ್ ಗೆ ವರವಾಗುತ್ತಾ?

ಕಾಂಗ್ರೆಸ್‍ ಅಭ್ಯರ್ಥಿ ಮಿಥುನ್ ಗೆ ವರವಾಗುತ್ತಾ?

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಸಂಸದ ನಳಿನ್ ಕುಮಾರ್ ಕಟೀಲ್ ವಿರುದ್ಧ ಬಿಜೆಪಿ ಪಾಳಯದಲ್ಲೇ ಎದ್ದಿರುವ ಅಸಮಾಧಾನ ಮುಳುವಾಗುವ ಸಂಭವವಿದೆ. ಸಂಘ ಪರಿವಾರದ ಹಲವು ನಾಯಕರು ನಳಿನ್ ಗೆ ಈ ಬಾರಿ ಟಿಕೆಟ್ ನೀಡಬಾರದೆಂದು ಹೇಳಿದ್ದರು. ಆದರೂ ಟಿಕೆಟ್ ಗಿಟ್ಟಿಸಿಕೊಂಡಿರುವ ನಳಿನ್ ಕುಮಾರ್ ಕಟೀಲ್ ಗೆಲುವಿಗಾಗಿ ತಿಣುಕಾಡಬೇಕಾದ ಪರಿಸ್ಥಿತಿ ಎದುರಾಗಿದೆ. ವಿಶೇಷವಾಗಿ ಸಂಸದರ ವೈಫಲ್ಯಗಳ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆ ನಡೆಯುತ್ತಿದೆ. ಇದು ಕಾಂಗ್ರೆಸ್‍ ಅಭ್ಯರ್ಥಿ ಮಿಥುನ್ ರೈ ಗೆ ಕೊಂಚ ವರವಾಗುವ ಸಾಧ್ಯತೆ ಇದೆ ಎಂಬ ವಿಮರ್ಶೆ ಮಾಡಲಾಗುತ್ತಿದೆ.

 ಶೋಭಾ ಕರಂದ್ಲಾಜೆಗೂ ಗೆಲುವು ಸುಲಭವಿಲ್ಲ

ಶೋಭಾ ಕರಂದ್ಲಾಜೆಗೂ ಗೆಲುವು ಸುಲಭವಿಲ್ಲ

ಅಂತೆಯೇ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಪರಿಸ್ಥಿತಿ ಭಿನ್ನವಾಗಿಲ್ಲ. ಶೋಭಾ ಕರಂದ್ಲಾಜೆ ವಿರುದ್ಧ ಅಸಮಾಧಾನ ಸ್ವಲ್ಪ ಜೋರಾಗಿಯೇ ಇದೆ. ಕ್ಷೇತ್ರದಲ್ಲಿ ಶೋಭಾ ಕರಂದ್ಲಾಜೆ ಅವರಿಗೆ ಟಿಕೆಟ್ ನೀಡದಂತೆ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ನಡೆದಿತ್ತು. ಆದರೆ ಸದ್ಯ ಎಲ್ಲವೂ ಸೈಲೆಂಟ್ ಆಗಿದೆ. ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಕರೆದುಕೊಂಡು ಬಂದು ನಾಮಪತ್ರ ಸಲ್ಲಿಸಿರುವ ಶೋಭಾ ಅವರಿಗೆ ಈ ಬಾರಿ ಜಯ ಸುಲಭ ಆಗಿಲ್ಲ ಅನ್ನೋದು ಮನದಟ್ಟಾಗಿದೆ.

 ಕೇಳಿ ಬರುತ್ತಿದೆ ಮೋದಿಯೆಂಬ ಕೂಗು

ಕೇಳಿ ಬರುತ್ತಿದೆ ಮೋದಿಯೆಂಬ ಕೂಗು

ಇನ್ನು ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಪ್ರಮೋದ್ ಮಧ್ವರಾಜ್ ಮೊಗವೀರ ಸಮುದಾಯದ ಮತಗಳನ್ನ ಸುಲಭವಾಗಿ ಸೆಳೆಯೋ ಸಾಧ್ಯತೆ ಇದೆ ಎನ್ನಲಾಗುತ್ತಿದೆ ಎಂದು ವಿಮರ್ಶಿಸಲಾಗಿದೆ. ಈ ಹಿನ್ನೆಲೆಯಲ್ಲಿ ಈ ಎರಡು ಕ್ಷೇತ್ರಗಳಲ್ಲಿ ಶೋಭಾ ಕರಂದ್ಲಾಜೆ ಹಾಗೂ ನಳಿನ್ ಕುಮಾರ್ ಕಟೀಲ್ ಮೋದಿಗಾಗಿ ವೋಟು ಕೊಡಿ ಎನ್ನುವ ಅನಿವಾರ್ಯತೆ ಎದುರಾಗಿದೆ. ಈ ಅಸಮಾಧಾನದ ಬೆಂಕಿ ಕಿಡಿಯನ್ನು ಆರಿಸಲು ಮೋದಿ ಮೋದಿಯೆಂಬ ಕೂಗು ಕೇಳಿ ಬರುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+