ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶರತ್ ಮಡಿವಾಳ, ಅಶ್ರಫ್ ಕುಟುಂಬಕ್ಕೆ ಸರಕಾರದಿಂದ ತಲಾ 5 ಲಕ್ಷ ಪರಿಹಾರ

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಡಿಸೆಂಬರ್ 14: "ಬಂಟ್ವಾಳದಲ್ಲಿ ಇಬ್ಬರು ಅಮಾಯಕರ (ಮುಹಮ್ಮದ್ ಅಶ್ರಫ್, ಶರತ್ ಮಡಿವಾಳ) ಹತ್ಯೆ ನಡೆದಾಗ ಪತ್ರಿಕಾಗೋಷ್ಠಿ ಕರೆದು, ಪರಿಹಾರ ಕೊಡಿಸುತ್ತೇನೆ ಎಂದು ಹೇಳಿದ್ದೆ. ಸರಕಾರದ ಜತೆ ಮಾತುಕತೆ ನಡೆಸಿ, ಪರಿಹಾರ ಬಿಡುಗಡೆ ಮಾಡಿಸಿ, ಕೊಟ್ಟ ಮಾತು ಉಳಿಸಿದ್ದೇನೆ" ಎಂದು ಸಚಿವ ಯು.ಟಿ.ಖಾದರ್ ಇಲ್ಲಿ ಹೇಳಿದರು.

ಶರತ್ ಮಡಿವಾಳ ಹತ್ಯೆ ಪ್ರಕರಣ, ಮತ್ತಿಬ್ಬರು ಆರೋಪಿಗಳ ಬಂಧನಶರತ್ ಮಡಿವಾಳ ಹತ್ಯೆ ಪ್ರಕರಣ, ಮತ್ತಿಬ್ಬರು ಆರೋಪಿಗಳ ಬಂಧನ

ಈ ಬಗ್ಗೆ ಮಂಗಳೂರಿನಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಆಹಾರ ಮತ್ತು ನಾಗರಿಕ‌ ಸರಬರಾಜು ಸಚಿವ ಯು.ಟಿ. ಖಾದರ್, ಪರಿಹಾರದ ಮೊತ್ತವನ್ನು ಮುಂದಿನ ದಿನಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರು ಇಬ್ಬರ ಕುಟುಂಬಕ್ಕೂ ವಿತರಿಸಲಿದ್ದಾರೆ ಎಂದು ಅವರು ಹೇಳಿದರು.

State government announces 5 lakh compensation to families Of Ashraf, Sharath

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ಕೆಲ ತಿಂಗಳ ಹಿಂದೆ ಕೊಲೆಯಾಗಿದ್ದ ಎಸ್ ಡಿಪಿಐ ಮುಖಂಡ ಮುಹಮ್ಮದ್ ಅಶ್ರಫ್ ಮತ್ತು ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಅವರ ಕುಟುಂಬಕ್ಕೆ ರಾಜ್ಯ ಸರಕಾರ ತಲಾ 5 ಲಕ್ಷ ರುಪಾಯಿ ಪರಿಹಾರ ಬಿಡುಗಡೆ ಮಾಡಿದೆ.

ಕಳೆದ ಜೂನ್ 21ರಂದು ಬಂಟ್ವಾಳದ ಬೆಂಜನಪದವಿನಲ್ಲಿ ಎಸ್ ಡಿಪಿಐ ಮುಖಂಡ ಕಲಾಯಿ ಅಶ್ರಫ್ ಅವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕಡಿದು ಕೊಲೆ ಮಾಡಿದ್ದರು. ಜುಲೈ 6ರಂದು ಬಂಟ್ವಾಳದ ಬಿ.ಸಿ. ರೋಡ್ ನಲ್ಲಿ ಬೈಕ್ ನಲ್ಲಿ ಬಂದಿದ್ದ ಮೂವರು ದುಷ್ಕರ್ಮಿಗಳು ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಅವರನ್ನು ಮಾರಕಾಸ್ತ್ರಗಳಿಂದ ಕಡಿದು ಹತ್ಯೆ ಮಾಡಿದ್ದರು.

English summary
Karnataka state government announced Rs 5 lakh each to families of Sharath Madival and Mohammed Ashraf Kalai who were murdered in Bantwal taluk, Dakshina Kannada a few months back. Compensation details given by minister for food and civil supply U.T. Khader says in a press meet held at Mangaluru on Thursday, December 14.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X