ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊರೊನಾ ವಿರುದ್ಧ ಹೋರಾಡಿದವರಿಗೇ ಸಂಬಳ ಇಲ್ಲ!; ಯು.ಟಿ.ಖಾದರ್ ಆರೋಪ

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಮೇ 31: ಆರೋಗ್ಯ ಸಿಬ್ಬಂದಿಗೆ ಎರಡು ತಿಂಗಳಿನಿಂದ ಸಂಬಳ ನೀಡಿಲ್ಲ. ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಈ ಸಂದರ್ಭದಲ್ಲೇ ವೇತನ ನೀಡದೇ ವೈದ್ಯರಿಗೆ, ನರ್ಸ್ ಗಳಿಗೆ ರಾಜ್ಯ ಸರ್ಕಾರ ಅವಮಾನಿಸುತ್ತಿದೆ ಎಂದು ಮಾಜಿ ಸಚಿವ ಯು.ಟಿ. ಖಾದರ್ ಆರೋಪಿಸಿದ್ದಾರೆ.

ನಗರದಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಕೊರೊನಾ ವೈರಸ್ ವಿರುದ್ಧ ಹೋರಾಡುತ್ತಿರುವವರಿಗೆ ರಾಜ್ಯ ಸರ್ಕಾರ ಸಂಬಳ ನೀಡದೆ ನಿರ್ಲಕ್ಷಿಸುತ್ತಿದೆ. ಕೊರೊನಾ ವಾರಿಯರ್ ‍ಗಳಿಗೇ ಸಂಬಳ ನೀಡಿಲ್ಲ ಎಂದದರೆ, ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸ್ಥಿತಿ ಹೇಗಿರಬೇಡ ಎಂದು ಪ್ರಶ್ನಿಸಿದರು. ಈ ಕೂಡಲೇ ಸಂಬಳ ಬಿಡುಗಡೆ ಮಾಡಬೇಕು ಎಂದೂ ಆಗ್ರಹಿಸಿದರು.

ಕೊರೊನಾ ಶ್ರೀಮಂತರಿಗೆ ಮಾತ್ರ ಬರೋದು, ಡೋಂಟ್ ವರಿ: ಯು ಟಿ ಖಾದರ್ಕೊರೊನಾ ಶ್ರೀಮಂತರಿಗೆ ಮಾತ್ರ ಬರೋದು, ಡೋಂಟ್ ವರಿ: ಯು ಟಿ ಖಾದರ್

State Government Insulting Health Staff By Not Giving Them Salary Said Ut Khader

ನ್ಯಾಷನಲ್ ಹೆಲ್ತ್ ಮಿಷನ್ ಅಡಿಯಲ್ಲಿ ಬರುವ ವೈದ್ಯರು, ನರ್ಸ್, ಲ್ಯಾಬ್ ಟೆಕ್ನೀಷಿಯನ್ ಯಾರಿಗೂ ಸಂಬಳ ಆಗಿಲ್ಲ. ಕೊರೊನಾ ವೈರಸ್ ಸೋಂಕು ಹರಡಿದ ಬಿಕ್ಕಟ್ಟಿನ ಸಂದರ್ಭದಲ್ಲಿ ಎರಡು ತಿಂಗಳು ಆರೋಗ್ಯ ಸಿಬ್ಬಂದಿ ಬಿಡುವು ಪಡೆದುಕೊಳ್ಳದೇ ಕೆಲಸ ಮಾಡಿದ್ದಾರೆ. ಆದರೆ ಅವರಿಗೇ ಸಂಬಳ ಕೊಟ್ಟಿಲ್ಲ ಎಂದು ದೂರಿದರು. ಕೋವಿಡ್ ಪರಿಹಾರ ನಿಧಿಯ ಹಣವನ್ನು ಹೇಗೆ ಖರ್ಚು ಮಾಡಿದ್ದಾರೆ ಎಂದು ಬಹಿರಂಗಪಡಿಸಲಿ. ಸರ್ಕಾರ ವೈದ್ಯರಿಗೆ ಸಂಬಳ ನೀಡದಿದ್ದರೆ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

English summary
"State government has not given salary to doctors and nurses since two months properly. Government is insulting them" said ut khader in mangaluru,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X