ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಈ ವರ್ಷ 8,500 ಪೊಲೀಸರ ನೇಮಕ: ಜಾರ್ಜ್

By Kiran B Hegde
|
Google Oneindia Kannada News

ಮಂಗಳೂರು, ನ. 25: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ತೀವ್ರವಾಗಿ ಬಾಧಿಸುತ್ತಿರುವ ಹಿನ್ನೆಲೆಯಲ್ಲಿ 8,500 ಪೊಲೀಸ್ ಸಿಬ್ಬಂದಿ ನೇಮಕಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ.

ಮಂಗಳೂರಿನಲ್ಲಿ ಮಂಗಳವಾರ ಪೊಲೀಸ್ ಸಮುದಾಯ ಭವನ ಹಾಗೂ ಪೊಲೀಸ್ ಕ್ಯಾಂಟೀನ್ ಉದ್ಘಾಟಿಸಿದ ಗೃಹ ಸಚಿವ ಕೆ.ಜಿ. ಜಾರ್ಜ್ ಈ ಕುರಿತು ಮಾಹಿತಿ ನೀಡಿದ್ದಾರೆ.

community

ಪ್ರತಿ ವರ್ಷ ಪೊಲೀಸ್ ಇಲಾಖೆಯಲ್ಲಿ ಸುಮಾರು 4,500 ಸಿಬ್ಬಂದಿ ನಿವೃತ್ತರಾಗುತ್ತಾರೆ. ಆದರೆ, ಕಳೆದ ನಾಲ್ಕು ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಯಾವುದೇ ನೇಮಕಾತಿ ನಡೆಯದ ಕಾರಣ 22,500ಕ್ಕೂ ಹೆಚ್ಚು ಮಂಜೂರಾದ ಹುದ್ದೆಗಳು ರಾಜ್ಯದಲ್ಲಿ ಖಾಲಿ ಉಳಿದಿವೆ. ಆದ್ದರಿಂದ ಇಲಾಖೆಯಲ್ಲಿ ಖಾಲಿ ಉಳಿದಿರುವ ಸ್ಥಾನಗಳ ನೇಮಕಾತಿಗೆ ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಜಾರ್ಜ್ ಹೇಳಿದ್ದಾರೆ. [ರಾಜ್ಯದಲ್ಲಿ ಐಎಎಸ್, ಐಪಿಎಸ್ ಅಧಿಕಾರಿಗಳ ಕೊರತೆ]

ತಾತ್ಕಾಲಿಕ ಸೌಲಭ್ಯ: ರಾಜ್ಯದಲ್ಲಿ ಪ್ರತಿ ವರ್ಷ 4,500 ಪೊಲೀಸ್ ಸಿಬ್ಬಂದಿಗೆ ಮಾತ್ರ ತರಬೇತಿ ನೀಡುವಷ್ಟು ಸೌಲಭ್ಯವಿದೆ. ಈ ವರ್ಷ ನೇಮಕಗೊಳ್ಳುವ 8,500 ಸಿಬ್ಬಂದಿಯಲ್ಲಿ 4,000 ಸಿಬ್ಬಂದಿಗೆ ತರಬೇತಿಗಾಗಿ ತಾತ್ಕಾಲಿಕ ವ್ಯವಸ್ಥೆ ಮಾಡಲಾಗಿದೆ ಎಂದು ಗೃಹ ಸಚಿವರು ತಿಳಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ, ಶಾಸಕ ಜೆ.ಆರ್. ಲೋಬೊ, ಪೊಲೀಸ್ ಆಯುಕ್ತ ಹಿತೇಂದ್ರ, ಶಾಸಕ ಮೊಯಿದ್ದೀನ್ ಬಾವಾ ಇತರರು ಪಾಲ್ಗೊಂಡಿದ್ದರು.

English summary
Home Minister for state K J George told that government is thinking to recruit 8,500 police personnel this year. There are around 22,500 vacancies in police department. There was no recruitment in the last four years.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X