ಶರತ್ ಶವಯಾತ್ರೆ ವೇಳೆ ಕಲ್ಲುತೂರಾಟ, ಹಿಂದು ಮುಖಂಡರಿಗೆ ತಾತ್ಕಾಲಿಕ ರಿಲೀಫ್

ಮಂಗಳೂರು, ಆಗಸ್ಟ್ 20: ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಶವಯಾತ್ರೆ ಸಂದರ್ಭ ನಡೆದ ಕಲ್ಲು ತೂರಾಟ ಮತ್ತು ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಪೊಲೀಸರು ದಾಖಲಿಸಿದ್ದ ಎಫ್ಐಆರ್ ಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಸತ್ಯಜಿತ್ ಸುರತ್ಕಲ್ ಸೇರಿ ಐವರು ಹಿಂದೂ ಮುಖಂಡರ ವಿರುದ್ಧ ಬಂಟ್ವಾಳ ಪೊಲೀಸರು ಎಫ್ಐಆರ್ ದಾಖಲಿಸಿದ್ದರು.

Stone pelting during Sharath Madivala funeral- HC orders interim injunction to the FIR

ತಮ್ಮ ವಿರುದ್ಧ ದಾಖಲಿಸಿದ್ದ ಎಫ್ಐಆರ್ ಗೆ ಹಾಗೂ ವಿಚಾರಣೆಗೆ ತಡೆಯಾಜ್ಞೆ ನೀಡುವಂತೆ ಕೋರಿ ಹಿಂದು ಪರ ಸಂಘಟನೆ ಮುಖಂಡರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಬಂಟ್ವಾಳ ಜೆಎಂಎಫ್ಸಿ ಕೋರ್ಟ್ ನಲ್ಲಿ ನಡೆಯಲಿರುವ ವಿಚಾರಣೆಗೆ ಹಾಗೂ ಎಫ್ಐಆರ್ ಗೆ ಮಧ್ಯಂತರ ತಡೆ ನೀಡಿ ಆಗಸ್ಟ್ 26ಕ್ಕೆ ವಿಚಾರಣೆ ಮುಂದೂಡಿದೆ.

ಕಳೆದ ಜುಲೈ 7ರಂದು ಮೃತಪಟ್ಟಿದ್ದ ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಶವಯಾತ್ರೆ ನಡೆಯುತ್ತಿದ್ದ ವೇಳೆ ಗಲಭೆ ನಡೆದಿತ್ತು. ಜುಲೈ 4 ರಂದು ಶರತ್ ಮಡಿವಾಳ ಹತ್ಯೆಗೆ ಯತ್ನಿಸಿದ್ದು ಗಂಭೀರ ಗಾಯಗೊಂಡಿದ್ದ ಅವರು ಜುಲೈ 7ರಂದು ಆಸ್ಪತ್ರೆಯಲ್ಲಿ ನಿಧನರಾಗಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+