ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಸ್ ಗಳ ಮೇಲೆ ಕಲ್ಲು ತೂರಾಟ; 7 ಬಸ್ ಜಖಂ, ಮೂವರಿಗೆ ಗಾಯ

|
Google Oneindia Kannada News

ಮಂಗಳೂರು ಜೂನ್ 25: ಬಂಟ್ವಾಳ - ವಿಟ್ಲದಲ್ಲಿ ದುಷ್ಕರ್ಮಿಗಳು ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಇಂದು ಮುಂಜಾನೆ ನಡೆದಿದೆ. ಘಟನೆಯಲ್ಲಿ 7 ಬಸ್ ಗಳು ಜಖಂ ಗೊಂಡಿದ್ದು, ಚಾಲಕ ಸೇರಿದಂತೆ 3 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

ಇಂದು ಮುಂಜಾನೆ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಖಾಸಗಿ ಬಸ್ ಸೇರಿದಂತೆ ಕೆಎಸ್ ಆರ್ ಟಿಸಿ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದ ಬಸ್ ಚಾಲಕ ಹಾಗೂ ಮೂವರು ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ. ಈ ಘಟನೆ ವಿಟ್ಲ ಹಾಗೂ ಬಂಟ್ವಾಳ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

 'ಗೋ ಕಳ್ಳರ ವಿರುದ್ಧ ರೌಡಿ ಶೀಟರ್ ಕೇಸು ದಾಖಲಿಸಿ ಗಡಿಪಾರು ಮಾಡಿ' 'ಗೋ ಕಳ್ಳರ ವಿರುದ್ಧ ರೌಡಿ ಶೀಟರ್ ಕೇಸು ದಾಖಲಿಸಿ ಗಡಿಪಾರು ಮಾಡಿ'

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ವಿವಿಧೆಡೆ ಕುದ್ರೆಬೆಟ್ಟು, ಪಾಣೆಮಂಗಳೂರು, ಗಡಿಯಾರ ಮತ್ತು ದಾಸಕೋಡಿ ಎಂಬಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಬಸ್ ಗಳ ಗಾಜು ಸಂಪೂರ್ಣ ಧ್ವಂಸಗೊಂಡಿದೆ. ಬಸ್ಸಿನಲ್ಲಿ ಶಾಲಾ ವಿದ್ಯಾರ್ಥಿಗಳು ಸೇರಿ ಅನೇಕ ಮಂದಿ ಪ್ರಯಾಣಿಸುತ್ತಿದ್ದರು. ಕಿಟಕಿ ಗಾಜು ಹಾಗೂ ಕಲ್ಲಿನೇಟಿಗೆ ಮೂವರು ವಿದ್ಯಾರ್ಥಿಗಳಿಗೆ ತಲೆಭಾಗಕ್ಕೆ ಗಾಯವಾಗಿದೆ.

Stone pelting on bus in Bantwal

ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಆದರೆ ದುಷ್ಕರ್ಮಿಗಳಿಂದ ಜಿಲ್ಲೆಯಲ್ಲಿ ಶಾಂತಿ ಕದಡುವ ಯತ್ನ ನಡೆಯುತ್ತಿದೆ ಎಂದು ಆರೋಪಿಸಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ, ಪುತ್ತೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲಿಸಲಾಗಿದೆ.

English summary
Group of youth who came on bike pelted stone at private and KSRTC bus on June 25. This incident happened near Kudurebettu, Pane Mangaluru and Mani,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X