ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ತೋಟ ಬೆಂಗ್ರೆ ಅತ್ಯಾಚಾರ ಪ್ರಕರಣ: ಆರೋಪಿಗಳ ಪರ ವಾದಿಸದಂತೆ ಮನವಿ

|
Google Oneindia Kannada News

ಮಂಗಳೂರು, ನವೆಂಬರ್. 28: ಮಂಗಳೂರಿನ ತೋಟ ಬೆಂಗ್ರೆ ಬೀಚ್ ನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಭಾರೀ ಸದ್ದು ಮಾಡುತ್ತಿದೆ. ಈ ಪ್ರಕರಣದ ಪ್ರಮುಖ ಆರೋಪಿಗಳನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ .

ತೋಟ ಬೆಂಗ್ರೆ ಬೀಚ್ ನಲ್ಲಿ ಸುತ್ತಾಡಲು ಗೆಳೆಯನೊಂದಿಗೆ ಬಂದಿದ್ದ ಯುವತಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಂಧಿತ ಆರೋಪಿಗಳ ಪರ ವಕಾಲತ್ತು ನಡೆಸದಂತೆ ದಕ್ಷಿಣ ಕನ್ನಡ ಜಿಲ್ಲೆಯ ಸರ್ವ ಕಾಲೇಜು ವಿದ್ಯಾರ್ಥಿ ಸಂಘ ಒತ್ತಾಯಿಸಿದೆ.

ತೋಟ ಬೆಂಗ್ರೆ ಬೀಚ್ ಗ್ಯಾಂಗ್ ರೇಪ್ ಪ್ರಕರಣ, ಮತ್ತಷ್ಟು ಮಾಹಿತಿಗಳು ಬಹಿರಂಗತೋಟ ಬೆಂಗ್ರೆ ಬೀಚ್ ಗ್ಯಾಂಗ್ ರೇಪ್ ಪ್ರಕರಣ, ಮತ್ತಷ್ಟು ಮಾಹಿತಿಗಳು ಬಹಿರಂಗ

ಸರ್ವಕಾಲೇಜು ವಿದ್ಯಾರ್ಥಿ ಸಂಘದ ಸದಸ್ಯರು ಇಂದು ಮಂಗಳೂರಿನ ನ್ಯಾಯಾಲಯ ಆವರಣಕ್ಕೆ ತೆರಳಿ ಸಾಮೂಹಿಕ ಅತ್ಯಾಚಾರದ ಪ್ರಕರಣದ ಆರೋಪಿಗಳ ಪರ ವಕಾಲತ್ತು ನಡೆಸದಂತೆ ಜಿಲ್ಲಾ ವಕೀಲರ ಸಂಘಕ್ಕೆ ಮನವಿ ಮಾಡಿದೆ.

Students have requested a lawyers association

ಈ ಅತ್ಯಾಚಾರ ಪ್ರಕರಣ ನಾಡಿಗೆ ಕಳಂಕ ತಂದಿದೆ . ಜಿಲ್ಲೆಯ ಜನರು ತಲೆ ತಗ್ಗಿಸುವಂತೆ ಮಾಡಿದೆ. ಸಮಾಜಕ್ಕೆ ಮಾರಕವಾಗಿರುವ ಇಂತಹ ಆರೋಪಿಗಳ ಪರ ವಾದಿಸದೆ ದುಷ್ಕರ್ಮಿಗಳಿಗೆ ತಕ್ಕ ಶಿಕ್ಷೆಯಾಗಲು ಸಹಕರಿಸಬೇಕು. ಆರೋಪಿಗಳ ಪರ ವಾದಿಸದಂತೆ ವಕೀಲರಿಗೆ ಸಂಘ ಸೂಚಿಸಬೇಕು ಎಂದು ಒತ್ತಾಯಿಸಿದೆ.

ಮಂಗಳೂರು ಬೀಚ್‌ನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ: 6 ಯುವಕರ ಬಂಧನಮಂಗಳೂರು ಬೀಚ್‌ನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ: 6 ಯುವಕರ ಬಂಧನ

ಆರೋಪಿಗಳ ಪರ ಯಾರಾದರೂ ವಕೀಲರು ವಕಾಲತ್ತು ನಡೆಸಿದರೆ ಅವರ ಕಚೇರಿ ಎದುರು ಪ್ರತಿಭಟನೆ ನಡೆಸುವುದಾಗಿ ಸರ್ವಕಾಲೇಜು ವಿದ್ಯಾರ್ಥಿ ಸಂಘ ಎಚ್ಚರಿಸಿದೆ

ಮಾಜಿ ಪ್ರೇಯಸಿಯನ್ನು ಬೆದರಿಸಿ ರೇಪ್ ಮಾಡಿದ ಸಾಫ್ಟ್ ವೇರ್ ಎಂಜಿನಿಯರ್ಮಾಜಿ ಪ್ರೇಯಸಿಯನ್ನು ಬೆದರಿಸಿ ರೇಪ್ ಮಾಡಿದ ಸಾಫ್ಟ್ ವೇರ್ ಎಂಜಿನಿಯರ್

ಮನವಿ ಸಲ್ಲಿಸಿದ ಸರ್ವಕಾಲೇಜು ವಿದ್ಯಾರ್ಥಿ ಸಂಘದ ನಿಯೋಗದಲ್ಲಿ ಪದಾಧಿಕಾರಿಗಳಾದ ಗುರುದತ್ ಮಲ್ಲಿ, ಇಬ್ರಾಹೀಂ ಬಾತೀಶ್, ಆ್ಯಸ್ಟಲ್ ಲೋಬೊ,ಅಶ್ವಿತ್ ಅಡಪ, ಅನ್ವಿತಾ ಶೆಟ್ಟಿ, ಪ್ರಿಯಾಂಕಾ ಶೆಟ್ಟಿ, ಶೈನಿ, ಮೇಘಾ, ನಿಹಾಲ್ ರೈ,ಸೋಹನ್ ಕಾರಂತ್, ಮಜೀದ್ ಕೊರೆಪಾಡಿ, ಸುಲೈಮಾನ್ ಶಾಫಿ, ಅಶ್ಫಾಕ್ ಮತ್ತಿತರರು ಉಪಸ್ಥಿತರಿದ್ದರು.

English summary
Thota bengre gang rape case: Students have requested a lawyer's association do not argue favour of accused.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X