ಮಂಗಳೂರು: ಖಾಸಗಿ ಕಾಲೇಜಿನಲ್ಲಿ ಕಿಸ್ಸಿಂಗ್ ಆಟ, 8 ವಿದ್ಯಾರ್ಥಿಗಳ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಮಂಗಳೂರು, ಜುಲೈ 22: ನಗರದ ಪ್ರತಿಷ್ಠಿತ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳ ಟ್ರೂತ್ ಆರ್ ಡೇರ್ ಆಟದಲ್ಲಿ ಲಿಪ್‌ಲಾಕ್‌ ಚಾಲೆಂಜ್‌ ನಡೆಸಿದ ವಿಡಿಯೋ ವೈರಲ್ ಆದ ಹಿನ್ನಲೆಯಲ್ಲಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಮಂಗಳೂರು ಪೊಲೀಸರು ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಎಂಟು ವಿದ್ಯಾರ್ಥಿಗಳ ವಿರುದ್ಧ ಪೋಕ್ಸೋ ಕಾಯಿದೆಯಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಅಪ್ರಾಪ್ತ ವಿದ್ಯಾರ್ಥಿಗಳು ನಿವಾಸವೊಂದರಲ್ಲಿ ಲಿಪ್‌ಲಾಕ್‌ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲಾತಾಣದಲ್ಲಿ ವೈರಲ್ ಬೆನ್ನಲ್ಲೇ, ವಿದ್ಯಾರ್ಥಿನಿಯ ಜೊತೆ ದೈಹಿಕ ಸಂಪರ್ಕದ ವಿಡಿಯೋ ಕೂಡ ವೈರಲ್ ಆಗಿದ್ದು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಮಂಗಳೂರು ನಗರ ಪೊಲೀಸರು, ಈಗ ಎಂಟು ಮಂದಿ ವಿದ್ಯಾರ್ಥಿಗಳ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಾಡಿದ್ದಾರೆ. ಮಂಗಳೂರಿನ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇವರು ಎಲ್ಲರೂ ಮಂಗಳೂರಿನ ಪ್ರತಿಷ್ಠಿತ ಖಾಸಗಿ ಕಾಲೇಜಿನ ಪಿಯು ವಿದ್ಯಾರ್ಥಿಗಳಾಗಿದ್ದು, ನಗರದ ಬಾವುಟಗುಡ್ಡೆಯ ರೂಮ್‌ವೊಂದರಲ್ಲಿ ವಿದ್ಯಾರ್ಥಿನಿಯರ ಜೊತೆ ಕಿಸ್ಸಿಂಗ್ ಪಂದ್ಯ ಮಾಡಿದ್ದರು. ಎಂಟು ಮಂದಿ ವಿದ್ಯಾರ್ಥಿಗಳು ಮತ್ತು ಮೂರು ಮಂದಿ ವಿದ್ಯಾರ್ಥಿನಿಯರು ಈ ಆಟದಲ್ಲಿ ಪಾಲ್ಗೊಂಡಿದ್ದರು ಎಂದು ತಿಳಿದುಬಂದಿದೆ.

Students Lip-lock Video Viral Case:8 Mangaluru College Students Booked on Pocso act

ಕಿಸ್ ನೀಡುವ ವಿಡಿಯೋ ವನ್ನು ವೈರಲ್ ಮಾಡಿದ್ದ ವಿದ್ಯಾರ್ಥಿಯನ್ನು ಗುರುವಾರ ಬೆಳಗ್ಗೆ ವಶಕ್ಕೆ ಪಡೆದಿದ್ದ ಪೊಲೀಸರು ಸಂಜೆ ಯ ವೇಳಗೆ ಎಲ್ಲಾ ಎಂಟು ಮಂದಿ ವಿದ್ಯಾರ್ಥಿಗಳ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಾಡಿದ್ದಾರೆ.

ಪೊಲೀಸರ ವಶದಲ್ಲಿರುವ ಎಂಟು ಮಂದಿ ವಿದ್ಯಾರ್ಥಿಗಳೂ ಅಪ್ರಾಪ್ತರಾಗಿದ್ದು, ಮಂಗಳೂರು ಸೇರಿದಂತೆ, ಕೇರಳ ಮತ್ತು ವಿವಿಧ ಜಿಲ್ಲೆಯ ಮೂಲದವರಾಗಿದ್ದಾರೆ. ಈ ಎಂಟು ಮಂದಿ ವಿದ್ಯಾರ್ಥಿಗಳ ಪೈಕಿ ನಾಲ್ವರು ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಅವರ ಹೆತ್ತವರನ್ನೂ ಠಾಣೆಗೆ ಕರೆಸಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. ನಂತರ ಬಾಲಾಪರಾಧಿ ನ್ಯಾಯಾಲಯದ ಮುಂದೆ ಹಾಜರು ಪಡಿಸಿ ಪೋಷಕರ ಜೊತೆಗೆ ಕಳುಹಿಸಿಕೊಡಲಾಗಿದೆ.

Students Lip-lock Video Viral Case:8 Mangaluru College Students Booked on Pocso act

ಇನ್ನೂ ಈ ಅಶ್ಲೀಲ ವೀಡಿಯೊ ಕರಾವಳಿ ಜಿಲ್ಲೆಯನ್ನು ಬೆಚ್ಚಿಬೀಳಿಸಿದೆ, ಈ ಪ್ರಕರಣ ರಾಜ್ಯಾದ್ಯಂತ ಆತಂಕವನ್ನು ಉಂಟುಮಾಡಿದೆ, ಜೊತೆಗೆ ಪೋಷಕರನ್ನು ಚಿಂತೆಗೀಡು ಮಾಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+