ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಂದ ಬೃಹತ್ ಪ್ರತಿಭಟನೆ

ಮಂಗಳೂರು, ಜು. 22 : ರಾಜ್ಯದಲ್ಲಿ ಮಹಿಳೆಯರ ಮೇಲೆ ನಡೆದ ದೌರ್ಜನ್ಯ ಪ್ರಕರಣಗಳನ್ನು ಖಂಡಿಸಿ ಮಂಗಳೂರಿನಲ್ಲಿ ಮಂಗಳವಾರ ಬೃಹತ್ ಪ್ರತಿಭಟನೆ ನಡೆಯಿತು. ಎಬಿವಿಪಿ ಮತ್ತು ತುಳುನಾಡ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಹಲವು ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಮಂಗಳವಾರ ಬೆಳಗ್ಗೆ ಬಂಟ್ಸ್ ಹಾಸ್ಟೆಲ್ ವೃತ್ತದ ಬಳಿ ಪ್ರತಿಭಟನೆ ಆರಂಭಿಸಿದ ರಾಮಕೃಷ್ಣ, ಬೆಸೆಂಟ್, ಕೆನರಾ ಮುಂತಾದ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. [ಬೆಂಗಳೂರಿನಲ್ಲಿ ಎಬಿವಿಪಿ ಪ್ರತಿಭಟನೆ]

ಮಂತ್ರಿಗಳ, ಶಾಸಕರ ಮಕ್ಕಳಿಗೆ ರಕ್ಷಣೆ ಇರುತ್ತದೆ. ಸಾಮಾನ್ಯ ಜನರ ಮಕ್ಕಳಾದ ನಾವು ಏನು ಮಾಡಬೇಕು? ಎಂದು ಸರ್ಕಾರವನ್ನು ಪ್ರಶ್ನಿಸಿದ ವಿದ್ಯಾರ್ಥಿಗಳು, ಹೆಣ್ಣು ಮಕ್ಕಳ ರಕ್ಷಣೆಗೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯ ಚಿತ್ರಗಳು ಇಲ್ಲಿವೆ. [ಕಾಂಗ್ರೆಸ್ ಸರ್ಕಾರದ ವಿರುದ್ಧ ಬೀದಿಗಿಳಿದ ಬಿಜೆಪಿ]

ಮಂಗಳೂರಿನಲ್ಲಿ ಇಂದು ಕಾಲೇಜ್ ಬಂದ್

ಮಂಗಳೂರಿನಲ್ಲಿ ಇಂದು ಕಾಲೇಜ್ ಬಂದ್

ರಾಜ್ಯದಲ್ಲಿ ನಡೆಯುತ್ತಿರುವ ಸರಣಿ ಅತ್ಯಾಚಾರ ಪ್ರಕರಣಗಳನ್ನು ಖಂಡಿಸಿ ಮಂಗಳವಾರ ಮಂಗಳೂರಿನಲ್ಲಿ ಕಾಲೇಜ್ ಗಳನ್ನು ಬಂದ್ ಮಾಡಿ ವಿದ್ಯಾರ್ಥಿಗಳಿ ಎಬಿವಿಪಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.

ನೂರಾರು ವಿದ್ಯಾರ್ಥಿಗಳು ಭಾಗಿ

ನೂರಾರು ವಿದ್ಯಾರ್ಥಿಗಳು ಭಾಗಿ

ಕೆನರಾ, ಬೆಸೆಂಟ್, ರಾಮಕೃಷ್ಣಾ ಸೇರಿದಂತೆ ವಿವಿಧ ಕಾಲೇಜಿನ ನೂರಾರು ವಿದ್ಯಾರ್ಥಿಗಳು ಸರ್ಕಾರದ ವಿರುದ್ಧ ನಡೆದ ಬೃಹತ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಕೆ

ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಕೆ

ಬಂಟ್ಸ್ ಹಾಸ್ಟೆಲ್ ಬಳಿ ಆರಂಭವಾದ ಮೆರವಣಿಗೆ ಜಿಲ್ಲಾಧಿಕಾರಿ ಕಚೇರಿ ವರೆಗೆ ನಡೆಯಿತು. ಹೆಣ್ಣು ಮಕ್ಕಳ ರಕ್ಷಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಪ್ರತಿಭಟನಾಕಾರರು ಮನವಿ ಸಲ್ಲಿಸಿದರು.

ರತ್ನಾ ಕೊಠಾರಿಗೆ ನ್ಯಾಯ ಕೊಡಿ

ರತ್ನಾ ಕೊಠಾರಿಗೆ ನ್ಯಾಯ ಕೊಡಿ

ಕುಂದಾಪುರ ತಾಲೂಕಿನ ಬೈಂದೂರು ಸಮೀಪದ ಶಿರೂರಿನಲ್ಲಿ ಅನುಮಾಸ್ಪದವಾಗಿ ಮೃತಪಟ್ಟ ಪಿಯು ವಿದ್ಯಾರ್ಥಿನಿ ರತ್ನಾ ಕೊಠಾರಿ ಸಾವಿಗೆ ನ್ಯಾಯ ಕೊಡುವಂತೆ ಪ್ರತಿಭಟನಾಕಾರರು ಸರ್ಕಾರವನ್ನು ಆಗ್ರಹಿಸಿದರು.

ಸೌಜನ್ಯ, ರತ್ನಾ ಇನ್ನೆಷ್ಟು ಸಾವು

ಸೌಜನ್ಯ, ರತ್ನಾ ಇನ್ನೆಷ್ಟು ಸಾವು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯಗಳು ಕಡಿಮೆಯಾಗಿಲ್ಲ ಹಿಂದೆ ಸೌಜನ್ಯ ಕೊಲೆ, ಇತ್ತೀಚೆಗೆ ರತ್ನಾ ಕೊಠಾರಿ ಕೊಲೆ ನಡೆದಿದೆ. ಹೆಣ್ಣು ಮಕ್ಕಳಿಗೆ ರಕ್ಷಣೆ ನೀಡುವವರು ಯಾರು? ಎಂದು ವಿದ್ಯಾರ್ಥಿಗಳಿ ಸರ್ಕಾರವನ್ನು ಪ್ರಶ್ನಿಸಿದರು.

ನಿಮಗೆ ಭದ್ರತೆ ಇದೆ

ನಿಮಗೆ ಭದ್ರತೆ ಇದೆ

ಶಾಸಕರು, ಮಂತ್ರಿಗಳ ಮಕ್ಕಳಿಗೆ ಭದ್ರತೆ ಇದೆ. ಸಾಮಾನ್ಯ ಜನರ ಮಕ್ಕಳಾದ ನಮಗೆ ಭದ್ರತೆ ಇಲ್ಲವಾಗಿದೆ. ಸರ್ಕಾರ ನಮಗೆ ಭದ್ರತೆ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ಕೊಡಿ

ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ಕೊಡಿ

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ವಿದ್ಯಾರ್ಥಿಗಳು ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ನೀಡಬೇಕು. ಅತ್ಯಾಚಾರ ಪ್ರಕರಣಗಳ ವಿಚಾರಣೆ ನಡೆಸಲು ವಿಶೇಷ ನ್ಯಾಯಾಲಯ ಸ್ಥಾಪನೆ ಮಾಡಬೇಕು ಎಂದು ಒತ್ತಾಯಿಸಿದರು.

ಕರ್ನಾಟಕ ಉತ್ತರ ಪ್ರದೇಶವಾಗುತ್ತಿದೆ

ಕರ್ನಾಟಕ ಉತ್ತರ ಪ್ರದೇಶವಾಗುತ್ತಿದೆ

ಮೊದಲು ಉತ್ತರ ಪ್ರದೇಶ ಸೇರಿದಂತೆ ದೇಶದ ಇತರ ರಾಜ್ಯಗಳಲ್ಲಿ ಅತ್ಯಾಚಾರ ಪ್ರಕರಣಗಳು ನಡೆಯುತ್ತಿದ್ದವು. ಆದರೆ, ಇಂದು ಕರ್ನಾಟಕದಲ್ಲಿಯೇ ದೌರ್ಜನ್ಯಗಳು ಹೆಚ್ಚಾಗುತ್ತಿವೆ ಎಂದು ವಿದ್ಯಾರ್ಥಿಗಳು ಆತಂಕ ವ್ಯಕ್ತಪಡಿಸಿದರು.

ತುಳುನಾಡ ರಕ್ಷಣಾ ವೇದಿಕೆ ಬೆಂಬಲ

ತುಳುನಾಡ ರಕ್ಷಣಾ ವೇದಿಕೆ ಬೆಂಬಲ

ವಿದ್ಯಾರ್ಥಿಗಳ ಪ್ರತಿಭಟನೆಗೆ ತುಳುನಾಡ ರಕ್ಷಣಾ ವೇದಿಕೆ ಸಹ ಬೆಂಬಲ ನೀಡಿತ್ತು.

ಸಿಎಂ ಮನೆ ಮುಂದೆ ಧರಣಿ ಎಚ್ಚರಿಕೆ

ಸಿಎಂ ಮನೆ ಮುಂದೆ ಧರಣಿ ಎಚ್ಚರಿಕೆ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಸರ್ಕಾರ ಮಹಿಳೆಯರ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಗಳ ಮನೆ ಮುಂದೆಯೇ ಪ್ರತಿಭಟನೆ ನಡೆಸಲಾಗುವುದು ಎಂದು ವಿದ್ಯಾರ್ಥಿಗಳು ಎಚ್ಚರಿಕೆ ನೀಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+