ಪಾಲಡ್ಕದಲ್ಲಿ ಬಾವಿಯೊಂದರ ಜಲಮಟ್ಟ ಹಠಾತ್ ಏರಿಕೆ, ಕಾರಣ ಮಾತ್ರ ನಿಗೂಢ!
ಮಂಗಳೂರು, ಫೆಬ್ರವರಿ 22: ಕರಾವಳಿಯಲ್ಲಿ ದಿನದಿಂದ ದಿನಕ್ಕೆ ಬಿಸಿಲ ಬೇಗೆ ಹೆಚ್ಚುತ್ತಿದೆ. ಬೇಸಿಗೆ ಸಮೀಪಿಸುತ್ತಿದಂತೆ ಝಳಕ್ಕೆ ಕೆರೆ, ಹಳ್ಳ ಕೊಳ್ಳಗಳಲ್ಲಿ ನೀರಿನ ಮಟ್ಟ ಕುಸಿಯುತ್ತಿದೆ. ಈ ನಡುವೆ ಬಾವಿಯಲ್ಲಿ ನೀರಿನ ಮಟ್ಟ ದಿಢೀರನೆ ಹೆಚ್ಚಾದರೆ ? ಇಂತಹದೊಂದು ಅಚ್ಚರಿಯ ಬೆಳವಣೆಗೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದರೆ ಸಮೀಪ ನಡೆದಿದೆ.
ಇಲ್ಲಿಯ ಪಾಲಡ್ಕ ಎಂಬಲ್ಲಿನ ನಿವಾಸಿಯೊಬ್ಬರ ಮನೆಯ ಬಾವಿಯಲ್ಲಿ 3 ಅಡಿಗಳಷ್ಟಿದ್ದ ನೀರಿನ ಮಟ್ಟ ಒಮ್ಮಿಂದೊಮ್ಮೆ ಹಠಾತ್ 19 ಅಡಿಗೇರಿದೆ.
ಪಾಲಡ್ಕದ ಶ್ರೀ ಕೊಡಮಣಿತ್ತಾಯ ಕುಕ್ಕಿನಂತಾಯ ದೈವಸ್ಥಾನ ಮತ್ತು ಪಾಲಡ್ಕ ಚರ್ಚ್ ಸಮೀಪ ಇರುವ ಸತೂರ್ನಿ-ವೀಣಾ ಡಿ'ಸಿಲ್ವಾ ಅವರ ಮನೆಯ ಬಾವಿಯಲ್ಲಿ ಈ ವಿಸ್ಮಯ ಸಂಗತಿ ಬೆಳಕಿಗೆ ಬಂದಿದೆ. ಸತೂರ್ನಿ ವೀಣಾ ಡಿ'ಸಿಲ್ವಾ ದಂಪತಿ ಕೆಲವು ವರ್ಷಗಳ ಹಿಂದೆ ಈ ಜಾಗ ಖರೀದಿಸಿ ತಮಗೊಂದು ಪಟ್ಟ ಮನೆ ನಿರ್ಮಿಸಿದ್ದರು.

ಮನೆಯ ಕಾಂಪೌಂಡ್ ನಲ್ಲಿ 40 ಅಡಿ ಆಳದ ತೆರೆದ ಬಾವಿಯನ್ನು ತೋಡಲಾಗಿತ್ತು. ಕಳೆದ ವರ್ಷ ಫೆಬ್ರವರಿಯಲ್ಲಿ ನೀರಿನ ಮಟ್ಟ 3 ರಿಂಗ್‌ಗಳಿಗಷ್ಟೇ ಸೀಮಿತವಾಗಿತ್ತು. ಸತೂರ್ನಿ ಇತ್ತೀಚೆಗೆ ಬಾವಿಯಲ್ಲಿ ನೀರಿನ ಮಟ್ಟ ಪರೀಕ್ಷಿಸಿದಾಗ ಅಷ್ಟೇ ಇತ್ತು.
ಈ ನಡುವೆ ಪಾಲಡ್ಕ ಪ್ರದೇಶದ ಸುತ್ತಮುತ್ತಲಿನ ಬಾವಿಗಳಲ್ಲೂ ನೀರಿನ ಮಟ್ಟ ಸಂಪೂರ್ಣ ಕುಸಿದಿದೆ. ಆದರೆ ಇದೊಂದು ಬಾವಿಯಲ್ಲಿ ಮಾತ್ರ ನೀರು ಏಕಾಏಕಿ ಏರಿಕೆಯಾಗಿದೆ. ಈ ಸಂಗತಿ ಅಚ್ಚರಿಗೆ ಕಾರಣವಾಗಿದ್ದು, ಜನರ ಆಕರ್ಷಣೆಯ ಕೆಂದ್ರವಾಗಿದೆ.
ಈ ಬಾವಿಯಿಂದ ಸುಮಾರು ಎರಡೂವರೆ ಕಿ.ಮೀ. ದೂರದಲ್ಲಿ ಪಾಲಡ್ಕ ಚರ್ಚ್‌ನ ಧರ್ಮಗುರುಗಳು ಹಾಗೂ ಊರವರ ಮುತುವರ್ಜಿಯ ಫಲವಾಗಿ ಜನಪ್ರತಿನಿಧಿಗಳ ಪ್ರಯತ್ನ ದಿಂದ 1.5 ಕೋಟಿ ರೂಪಾಯಿ ವೆಚ್ಚದಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣವಾಗಿತ್ತು.
ಬಾವಿಯಲ್ಲಿ ನೀರಿ ಮಟ್ಟ ಏಕಾಏಕಿ ಏರಿಕೆಯಾಗಲು ತುಸು ದೂರದಲ್ಲಿ ನಿರ್ಮಾಣವಾಗಿರುವ ಈ ಕಿಂಡಿ ಅಣೆಕಟ್ಟು ಕಾರಣ ಎನ್ನಲಾಗಿದೆ. ಅಣೆಕಟ್ಟಿನಿಂದ ಅಂತರ್ಜಲ ವೃದ್ಧಿಯಾಗಿದೆ ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ. ಆದರೆ ಈ ಭಾಗದ ಇತರ ಬಾವಿಗಳಲ್ಲಿ ಏಕೆ ನೀರಿನ ಮಟ್ಟ ಏರಿಕೆಯಾಗಿಲ್ಲ ಎಂಬ ಪ್ರಶ್ನೆ ಈಗ ಜನರನ್ನು ಕಾಡತೊಡಗಿದೆ.
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications