Breaking; ಪದ್ಮಶ್ರೀ ಪುರಸ್ಕೃತ ಸುಕ್ರಿ ಬೊಮ್ಮಗೌಡ ಆಸ್ಪತ್ರೆಗೆ ದಾಖಲು
ಮಂಗಳೂರು, ಮೇ 08; ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಜನಪದ ಕಲಾವಿದೆ ಸುಕ್ರಿ ಬೊಮ್ಮಗೌಡ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಹೇಳಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಬಡಗೇರಿ ಗ್ರಾಮದ ಸುಕ್ರಿ ಬೊಮ್ಮಗೌಡ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆ ವೈದ್ಯರ ತಂಡ ಅವರ ಆರೋಗ್ಯದ ಮೇಲೆ ನಿಗಾ ಇಟ್ಟಿದೆ.

ಬುಡಕಟ್ಟು ಸಮುದಾಯವಾದ ಹಾಲಕ್ಕಿ ಒಕ್ಕಲಿಗ ಪಂಗಡಕ್ಕೆ ಸೇರಿದ ಸುಕ್ರಿ ಬೊಮ್ಮಗೌಡ ಹಾಲಕ್ಕಿ ಸಮುದಾಯವನ್ನು ಕೇಂದ್ರ ಸರ್ಕಾರ ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು ಎಂದು ಹೋರಾಟವನ್ನು ಸಹ ಮಾಡುತ್ತಿದ್ದಾರೆ.
ಸುಕ್ರಿ ಬೊಮ್ಮಗೌಡ ಹಾಲಕ್ಕಿ ಸಮಾಜದ ಸಾಂಸ್ಕೃತಿಕ ರಾಯಭಾರಿ ಎಂದೇ ಖ್ಯಾತರಾಗಿದ್ದಾರೆ. ಸಮಾಜದ ಸಾಂಸ್ಕೃತಿಕ ಪರಂಪರೆಯನ್ನು ರಾಷ್ಟ್ರದ ರಾಜಧಾನಿ ತನಕ ತಲುಪಿಸಿದ್ದಾರೆ 83 ವರ್ಷದ ಸುಕ್ರಜ್ಜಿ.
ಕರ್ನಾಟಕ ವಿಶ್ವವಿದ್ಯಾಲಯದ ಜನಪದ ವಿಭಾಗದಲ್ಲಿ 5 ವರ್ಷಗಳ ಕಾಲ ಹಾಲಕ್ಕಿ ಸಮುದಾಯ ಆಹಾರ, ಉಡುಪು, ಹಾಡು ಮುಂತಾದ ಸಾಂಸ್ಕೃತಿಕ ವಿಷಯಗಳನ್ನು ಸಾವಿರಾರು ವಿದ್ಯಾರ್ಥಿಗಳಿಗೆ ಸುಕ್ರಿ ಬೊಮ್ಮಗೌಡ ತಿಳಿಸಿಕೊಟ್ಟಿದ್ದಾರೆ.












Click it and Unblock the Notifications