ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸುಳ್ಯದ ಸೋಲಿಲ್ಲದ ಸರದಾರನಿಗೆ ಈ ಬಾರಿಯೂ ತಪ್ಪಿದ ಮಂತ್ರಿಗಿರಿ, ಭುಗಿಲೆದ್ದ ಆಕ್ರೋಶ

|
Google Oneindia Kannada News

Recommended Video

Cabinet Expansion:ಸೋಲಿಲ್ಲದ ಸರದಾರನಿಗೆ ಅನ್ಯಾಯ ಮಾಡಿದ ಬಿಜೆಪಿ..? | S Angara | Oneindia Kannada

ಮಂಗಳೂರು ಆಗಸ್ಟ್ 20: ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟದಲ್ಲಿ ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಗೆ ಮಂತ್ರಿಗಿರಿ ಪಟ್ಟ ದಕ್ಕದಿರುವುದಕ್ಕೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನ ಸಭಾ ಕ್ಷೇತ್ರಗಳ ಪೈಕಿ ಬಿಜೆಪಿಗೆ 7 ಶಾಸಕರನ್ನು ಕೊಟ್ಟರೂ ಜಿಲ್ಲೆಗೆ ಮಂತ್ರಿ ಭಾಗ್ಯ ಸಿಕ್ಕಿಲ್ಲ.

ನೂತನ ಸಚಿವ ಸಂಪುಟ ಪಟ್ಟಿಯಲ್ಲಿ ಕೊನೆ ಕ್ಷಣದವರೆಗೆ ಸುಳ್ಯ ಶಾಸಕ ಎಸ್.ಅಂಗಾರ ಅವರು ಹೆಸರು ಕಾಣಿಸಿಕೊಂಡಿತ್ತು. ಸಚಿವ ಸ್ಥಾನ ದೊರಕುವ ನಿರೀಕ್ಷೆಯಲ್ಲಿ ಅಂಗಾರ ನಿನ್ನೆ ರಾತ್ರಿಯೇ ಕುಟುಂಬದೊಂದಿಗೆ ಬೆಂಗಳೂರಿಗೆ ತೆರಳಿದ್ದರು. ಆದರೆ ಕಡೇ ಕ್ಷಣದಲ್ಲಿ ಅಂಗಾರ ಹೆಸರು ಪಟ್ಟಿಯಿಂದ ಕೈಬಿಟ್ಟಿರುವುದು ನಿರಾಶೆ ಮೂಡಿಸಿದೆ.

ಸತತ 6 ಬಾರಿ ಸುಳ್ಯ ವಿಧಾನ ಸಭಾ ಕ್ಷೇತ್ರವನ್ನು ಪ್ರತಿನಿಧಿಸಿ ಗೆದ್ದ ಅಂಗಾರ ಸೋಲಿಲ್ಲದ ಸರದಾರ ಎಂದೇ ಗುರುತಿಸಿ ಕೊಂಡಿದ್ದರು. ಅಂಗಾರ ಅವರಿಗೆ ಸಚಿವ ಸ್ಥಾನ ದೊರಕದೇ ಇರುವುದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳು ತೀವ್ರ ಆಕ್ರೋಶ ಹೊರಹಾಕಿದ್ದಾರೆ.

ಯಡಿಯೂರಪ್ಪ ಸಚಿವ ಸಂಪುಟದಲ್ಲಿ ಯಾರು ಯಾರಿದ್ದಾರೆ? ಸಂಪೂರ್ಣ ಪಟ್ಟಿಯಡಿಯೂರಪ್ಪ ಸಚಿವ ಸಂಪುಟದಲ್ಲಿ ಯಾರು ಯಾರಿದ್ದಾರೆ? ಸಂಪೂರ್ಣ ಪಟ್ಟಿ

26 ವರ್ಷಗಳಿಂದ ಸುಳ್ಯದಲ್ಲಿ ಬಿಜೆಪಿಯಿಂದ ಅಭ್ಯರ್ಥಿಯಾಗಿ ಸುಳ್ಯದ ಶಾಸಕರಾದ ಎಸ್ ಅಂಗಾರ ಅವರಿಗೆ ಕಳೆದ ಬಿಜೆಪಿ ಸರಕಾರ ರಚನೆಯಾದಾಗಲೂ ಸಚಿವ ಸ್ಥಾನ ನೀಡಿರಲಿಲ್ಲ.

Sullia MLA Angara Disappointed

ಸುಳ್ಯ ವಿಧಾನಸಭಾ ಕ್ಷೇತ್ರ ರಚನೆಯಾಗಿ 57 ವರ್ಷವಾದರೂ ಸುಳ್ಯದಿಂದ ಚುನಾಯಿತರಾದ ಶಾಸಕರಾರಿಗೂ ಇದುವರೆಗೆ ಮಂತ್ರಿಗಿರಿ ಲಭಿಸಿರಲ್ಲ. ಆದರೆ ಈ ಬಾರಿ ಶಾಸಕ ಅಂಗಾರ ಅವರಿಗೆ ಸಚಿವ ಸ್ಥಾನ ದೊರಕಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಲಾಗಿತ್ತು.

ಪುತ್ತೂರು ವಿಧಾನಸಭಾ ಕ್ಷೇತ್ರದೊಂದಿಗೆ ಸೇರಿದ್ದ ಸುಳ್ಯ ತಾಲೂಕು ಪ್ರತ್ಯೇಕಗೊಂಡು ಹೊಸ ಕ್ಷೇತ್ರವಾದ ನಂತರ 14 ಬಾರಿ ಚುನಾವಣೆ ಎದುರಿಸಿದೆ. ಇಲ್ಲಿನ ಜನಪ್ರತಿನಿಧಿಗಳು ಆಡಳಿತ ಪಕ್ಷದ ಸದಸ್ಯರಾಗಿದ್ದರೂ ಸಚಿವ ಸ್ಥಾನ ದೊರೆತಿರಲಿಲ್ಲ. ಆದರೆ ಈ ಬಾರಿ ಬಿಜೆಪಿ ಸರಕಾರ ರಚನೆಯಲ್ಲಿ ಮೀಸಲು ಕ್ಷೇತ್ರವಾಗಿರುವ ಸುಳ್ಯವನ್ನು ಸತತ ಆರನೇ ಬಾರಿಗೆ ಪ್ರತಿನಿಧಿಸಿದ್ದ ಎಸ್‌. ಅಂಗಾರ ಅವರಿಗೆ ಸಚಿವ ಸ್ಥಾನ ದೊರೆಯುವ ಸಾಧ್ಯತೆ ಹೆಚ್ಚು ಎನ್ನುವ ಚರ್ಚೆ ಬಿರುಸು ಪಡೆದಿತ್ತು. ಈ ವಿಧಾನ ಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನ ಸಭಾ ಕ್ಷೇತ್ರಗಳ ಪೈಕಿ 7 ರಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಬಿಜೆಪಿ 7 ಶಾಸಕರಲ್ಲಿ ಎಸ್‌.ಅಂಗಾರ ಅತ್ಯಂತ ಹಿರಿಯರು.

2008ರ ಬಿಜೆಪಿ ಸರಕಾರದಲ್ಲಿ ಎಸ್‌.ಅಂಗಾರ ಅವರಿಗೆ ಸಚಿವ ಸ್ಥಾನ ದೊರೆಯಲಿದೆ ಎಂಬ ನಿರೀಕ್ಷೆ ಹುಸಿಯಾಗಿತ್ತು. ಆದರೆ ಈ ಬಾರಿಯಾದರೂ ಅಂಗಾರ ಅವರಿಗೆ ಸಚಿವ ಸ್ಥಾನ ದೊರಕಲಿದೆ ಎಂಬ ವಿಶ್ವಾಸವೂ ಸುಳ್ಳಾಯಿತು. ಕೊನೆ ಗಳಿಗೆಯಲ್ಲಿ ಅಂಗಾರ ಅವರ ಹೆಸರನ್ನು ಕೈಬಿಟ್ಟಿರುವುಕ್ಕೆ ಸುಳ್ಯ ವಿಧಾನ ಸಭಾಕ್ಷೇತ್ರದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.

English summary
Sullia MLA S Angara's name missed in the list of new cabinet . Angara disappointed over this development . Political debate has begun in social media
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X