ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗಳೂರು; ಹಂದಿ ಫಾರ್ಮ್‌ ತೆರವಿಗೆ ದೇವಾಲಯದ ಭಕ್ತರ ಒತ್ತಾಯ

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಅಕ್ಟೋಬರ್ 25; ದಕ್ಷಿಣ ಕನ್ನಡ ಜಿಲ್ಲೆಯ ಇತಿಹಾಸ ಪ್ರಸಿದ್ಧ ಕ್ಷೇತ್ರ ಸುಳ್ಯ ತಾಲೂಕಿನ ಅರಂತೋಡು ಗ್ರಾಮದ ತೋಡಿಕಾನ ಮಲ್ಲಿಕಾರ್ಜುನ ದೇವಸ್ಥಾನ. ಲಕ್ಷಾಂತರ ಮಂದಿ ಭಕ್ತರನ್ನು ಹೊಂದಿರುವ ಈ ದೇವಸ್ಥಾನಕ್ಕೆ ಈಗ ಸ್ಥಳೀಯ ಉದ್ಯಮಿಯಿಂದ ಅಪಚಾರವಾಗುತ್ತಿದೆ ಎಂಬ ಆರೋಪ ಕೇಳಿ‌ಬಂದಿದೆ.

ದೇವಸ್ಥಾನಕ್ಕೆ ಸಂಬಂಧಪಟ್ಟ ಗುಡಿಗೆ ಪಕ್ಕದಲ್ಲೇ ಹಂದಿ ಫಾರ್ಮ್ ಕಾರ್ಯಾಚರಣೆ ನಡೆಸುತ್ತಿದೆ. ಇದರಿಂದಾಗಿ ದೇವಸ್ಥಾನದ ಪಾವಿತ್ಯಕ್ಕೆ ಧಕ್ಕೆಯಾಗುತ್ತಿದೆ ಎನ್ನುವ ಆರೋಪ ಭಕ್ತರಿಂದ ಕೇಳಿ ಬರಲಾರಂಭಿಸಿದೆ.

ದೇವಾಲಯ ತೆರವು ವಿವಾದ, ನಂಜನಗೂಡು ತಹಶೀಲ್ದಾರ್ ವರ್ಗಾವಣೆ ದೇವಾಲಯ ತೆರವು ವಿವಾದ, ನಂಜನಗೂಡು ತಹಶೀಲ್ದಾರ್ ವರ್ಗಾವಣೆ

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅರಂತೋಡು ಗ್ರಾಮದ ತೋಡಿಕಾನ ಮಲ್ಲಿಕಾರ್ಜುನ ದೇವಸ್ಥಾನದ ಹೊಸತೋಟ ಎಂಬಲ್ಲಿನ ಸರಕಾರಿ ಜಾಗದಲ್ಲಿ ಅಕ್ರಮವಾಗಿ ಸ್ಥಳೀಯ ವ್ಯಕ್ತಿಯೋರ್ವರು ಹಂದಿಯ ಫಾರ್ಮ್ ಆರಂಭಿಸಿದ್ದು, ಈ ಫಾರ್ಮ್ ಆರಂಭಕ್ಕೆ ಮೊದಲೇ ಸ್ಥಳೀಯರು ಆಕ್ಷೇಪ ಸಲ್ಲಿಸಿದ್ದರು.

 ಕಟೀಲು, ಪೊಳಲಿ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಬ್ಯಾನರ್ ಅಳವಡಿಕೆ ಕಟೀಲು, ಪೊಳಲಿ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಬ್ಯಾನರ್ ಅಳವಡಿಕೆ

 Sulya Villagers Demand To Shut Down Pig Farm

ಈ ಸಂಬಂಧ ಸ್ಥಳೀಯ ಗ್ರಾಮ ಪಂಚಾಯತಿ, ಕಂದಾಯ ಇಲಾಖೆ, ಆರೋಗ್ಯ ಇಲಾಖೆ ಸೇರಿದಂತೆ ಸಂಬಂಧಪಟ್ಟ ಎಲ್ಲಾ ಇಲಾಖೆಗೆ ಮನವಿ ಸಲ್ಲಿಸಿದ್ದರೂ ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಹಂದಿ ಫಾರ್ಮ್ ಅನ್ನು ಅಕ್ರಮವಾಗಿ ನಡೆಸುತ್ತಿರುವ ವ್ಯಕ್ತಿಯ ಪರವಾಗಿ ಗ್ರಾಮ ಪಂಚಾಯತಿ ಆಡಳಿತ ಕಾರ್ಯಾಚರಿಸುತ್ತಿದೆ ಎಂದು ಸ್ಥಳೀಯರು ಆರೋಪಿಸುತ್ತಾರೆ.

ಕೊಪ್ಪಳ: ದಲಿತ ಬಾಲಕ ದೇವಾಲಯ ಪ್ರವೇಶಿಸಿದ್ದಕ್ಕೆ ದಂಡಕೊಪ್ಪಳ: ದಲಿತ ಬಾಲಕ ದೇವಾಲಯ ಪ್ರವೇಶಿಸಿದ್ದಕ್ಕೆ ದಂಡ

ತೋಡಿಕಾನದ ಹೊಸತೋಟದ ನಿವಾಸಿಯೊಬ್ಬರು ಕಳೆದ ಎರಡು ತಿಂಗಳ ಹಿಂದೆ ಈ ಹಂದಿ ಫಾರ್ಮ್ ಅನ್ನು ಪ್ರಾರಂಭಿಸಿದ್ದು, ಸುಮಾರು 150ಕ್ಕೂ ಹೆಚ್ಚು ಹಂದಿಗಳನ್ನು ಇಲ್ಲಿ ಸಾಕಲಾಗುತ್ತಿದೆ. ಈ ಹಂದಿಗಳಿಗೆ ತಿನ್ನಲು ಕೊಳೆತ ವಸ್ತುಗಳನ್ನು ಇಲ್ಲಿ ಶೇಖರಿಸಲಾಗುತ್ತಿದ್ದು, ಇದರ ದುರ್ನಾತದ ಜೊತೆಗೆ ಹಂದಿಗಳಿರುವ ತೊಟ್ಟಿಯನ್ನು ತೊಳೆಯುವ ನೀರಿನ ದುರ್ನಾತ ಇಡೀ ಗ್ರಾಮದ ತುಂಬಾ ಹರಡುತ್ತಿದೆ. ಇದರಿಂದಾಗಿ ಪಕ್ಕದಲ್ಲಿರುವ ಮನೆ ಮಂದಿಗೆ ಮನೆಯಲ್ಲಿ ಕುಳಿತುಕೊಳ್ಳದಾಗದ ಸ್ಥಿತಿಯೂ ನಿರ್ಮಾಣಗೊಂಡಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಅಲ್ಲದೆ ಹಂದಿ ಫಾರ್ಮ್‌ನ ಕೊಳಚೆ ನೀರನ್ನು ಪೈಪ್ ಮೂಲಕ ಸಾಗಿಸಿ ತೋಡಿಕಾನದ ಪುರಾತನ ದೇವಸ್ಥಾನವಾದ ಮಲ್ಲಿಕಾರ್ಜುನ ಸ್ವಾಮಿಯ ದರ್ಪಣ ತೀರ್ಥದ ಹಳ್ಳಕ್ಕೆ ಬಿಡಲಾಗುತ್ತಿದೆ. ಇದರಿಂದ ಒಂದೆಡೆ ನೀರು ಕಲುಷಿತಗೊಳ್ಳುತ್ತಿದ್ದು, ಇನ್ನೊಂದೆಡೆ ಈ ಫಾರ್ಮ್ ಪಕ್ಕದಲ್ಲೇ ಕ್ಷೇತ್ರಕ್ಕೆ ಸಂಬಂಧಪಟ್ಟ ರಕ್ತೇಶ್ವರಿ ದೇವಿ ಹಾಗೂ ನಾಗದೇವರ ಗುಡಿಯಿದ್ದು, ಈ ಫಾರ್ಮ್ ನಿಂದಾಗಿ ಈ ಗುಡಿಗಳು ಅಪವಿತ್ರವಾಗುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ. ಈ ಸಂಬಂಧ ದೇವಸ್ಥಾನದ ವತಿಯಿಂದಲೂ ಆಕ್ಷೇಪದ ಮನವಿಯನ್ನು ಸಲ್ಲಿಸಲಾಗಿದ್ದರೂ, ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ.

 Sulya Villagers Demand To Shut Down Pig Farm

ಕಳೆದ ವರ್ಷ ವೃಂದಾ ಅರಸ್ ಎನ್ನುವ ಮಾಡಲಿಂಗ್ ತಾರೆ ಇದೇ ಕ್ಷೇತ್ರಕ್ಕೆ ಸಂಬಂಧಪಟ್ಟ ದೇವರಗುಂಡಿ ಜಲಪಾತದ ಬಳಿ ಬಿಕಿನಿ ಫೋಟೋ ಶೂಟ್ ಮಾಡಿದ್ದು, ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೂ ಗ್ರಾಸವಾಗಿತ್ತು. ಆ ಸಂದರ್ಭದಲ್ಲಿ ಸ್ಥಳೀಯರು ಈ ಕೃತ್ಯದಿಂದ ತೋಡಿಕಾನ ಮಲ್ಲಿಕಾರ್ಜುನ ಕ್ಷೇತ್ರಕ್ಕೆ ಅಪಚಾರವಾಗಿದೆ ಎಂದು ದೂರಿ ಪ್ರತಿಭಟನೆಯನ್ನೂ ನಡೆಸಿದ್ದರು.

ಮುಖ್ಯವಾಗಿ ಹಿಂದೂಪರ ಸಂಘಟನೆಗಳು ಈ ಪ್ರತಿಭಟನೆಯನ್ನು ಕೈಗೊಳ್ಳುವ ಮೂಲಕ ಕ್ಷೇತ್ರಕ್ಕೆ ಅಪಚಾರ ವಿಚಾರವನ್ನು ಗಂಭೀರವಾಗಿ ತೆಗೆದುಕೊಂಡಿದ್ದವು. ಆದರೆ ಇದೀಗ ಸ್ಥಳೀಯರಿಂದಲೇ ದೇವಸ್ಥಾನಕ್ಕೆ ಅಪಚಾರವಾಗುವಂತಹ ಕೃತ್ಯದಲ್ಲಿ ತೊಡಗಿಕೊಂಡಿದ್ದರೂ, ಹಿಂದೂಪರ ಸಂಘಟನೆಗಳು ಮೌನವಹಿಸುತ್ತಿರುವುದು ಸ್ಥಳೀಯ ನಿವಾಸಿಗಳ ಆಕ್ರೋಶಕ್ಕೂ ಕಾರಣವಾಗಿದೆ.

ಹಂದಿ ಫಾರ್ಮ್ ಕಾರ್ಯಾಚರಿಸುತ್ತಿರುವ ಜಾಗವು ಸರಕಾರಿ ಜಾಗವಾಗಿದ್ದು, ಇಲ್ಲಿ ಅಕ್ರಮ ಕಟ್ಟಡವನ್ನೂ ನಿರ್ಮಿಸಲಾಗಿದೆ. ಅಲ್ಲದೆ ಕೃಷಿಗೆ ಸಂಬಂಧಪಟ್ಟ ವಿದ್ಯುತ್ ಸಂಪರ್ಕವನ್ನೂ ಈ ಫಾರ್ಮ್‌ಗೆ ಅಳವಡಿಸುವ ಮೂಲಕ ಅಕ್ರಮ ವಿದ್ಯುತ್ ಸಂಪರ್ಕವನ್ನೂ ಕಲ್ಪಿಸಲಾಗಿದೆ.

ಈ ಸಂಬಂಧ ಈಗಾಗಲೇ ಅರಂತೋಡು ಗ್ರಾಮ ಪಂಚಾಯತಿ ಪಿಡಿಒ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರೂ, ಈವರೆಗೂ ಯಾವುದೇ ಕ್ರಮ ಜಾರಿಯಾಗಿಲ್ಲ.

ಜನವಸತಿ ಇರುವ ಪ್ರದೇಶದಲ್ಲಿ ಹಂದಿ ಫಾರ್ಮ್ ಪ್ರಾರಂಭಿಸುವ ಮೊದಲು ಸ್ಥಳೀಯರ ಗಮನಕ್ಕೂ ತರದೆ, ಇದೀಗ ಇಡೀ ಊರಿಗೇ ದುರ್ನಾತ ಬೀರುತ್ತಿರುವ ಈ ಹಂದಿ ಫಾರ್ಮ್ ಮುಚ್ಚಿಸಬೇಕೆಂದು ಆಗ್ರಹಿಸಿ ಸ್ಥಳೀಯರು ಜಿಲ್ಲಾಧಿಕಾರಿಗಳ ಮೊರೆ ಹೋಗಿದ್ದಾರೆ.

English summary
Villagers demand to shut down Pig farm near Thodikana Mallikarjuna temple at Sulya taluk of Dakshina Kannada district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X