ದೊಡ್ಡಣ್ಣ, ರಾಕ್ ಲೈನ್ ಜೊತೆ ಧರ್ಮಸ್ಥಳಕ್ಕೆ ಭೇಟಿ ನೀಡಿದ ಸುಮಲತಾ
ಮಂಗಳೂರು, ಏಪ್ರಿಲ್ 01: ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿರುವ ಮಂಡ್ಯ ಲೋಕಸಭಾ ಕ್ಷೇತ್ರ ದಿನದಿಂದ ದಿನಕ್ಕೆ ಹಲವಾರು ರಾಜಕೀಯ ಬೆಳವಣಿಗೆಗೆ ಸಾಕ್ಷಿಯಾಗುತ್ತಿದೆ. ಮಂಡ್ಯದಲ್ಲಿ ನಡೆಯಲಿರುವ ಹೈ ವೊಲ್ಟೇಜ್ ಕದನಕ್ಕೆ ದಿನಗಣನೆ ಆರಂಭವಾಗಿದೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಕ್ಷೇತ್ರದಲ್ಲಿ ಗೆಲುವಿಗಾಗಿ ರಾಜಕೀಯ ತಂತ್ರ ಮತ್ತು ಪ್ರತಿತಂತ್ರ ನಡೆಯುತ್ತಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ವಿರುದ್ಧ ಮತದಾರರ ಓಲೈಕೆಗೆ ಜೆಡಿಎಸ್ ನಾನಾ ಕಸರತ್ತು ಗಳನ್ನು ರಾಜಕೀಯ ಪಟ್ಟುಗಳನ್ನು ಅನುಸರಿಸುತ್ತಿದೆ.
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರನ್ನು ಮಣಿಸಲು ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಕೂಟ ಎಲ್ಲಾ ಪ್ರಯತ್ನಗಳನ್ನು ನಡೆಸುತ್ತಿರುವ ಬೆನ್ನಲ್ಲೇ ಸುಮಲತಾ ಧರ್ಮಸ್ಥಳ ಮಂಜುನಾಥನ ಮೊರೆ ಹೋಗಿದ್ದಾರೆ. ಇಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸುಮಲತಾ ಭೇಟಿ ನೀಡಿದ್ದಾರೆ. ಅವರೊಂದಿಗೆ ಹಿರಿಯ ನಟ ದೊಡ್ಡಣ್ಣ ಹಾಗೂ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಮತ್ತಿತರರು ಇದ್ದಾರೆ.

ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಲಿರುವ ಸುಮಲತಾ ಅಂಬರೀಶ್ ನಂತರ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಲಿದ್ದಾರೆ. ಬ್ಯಾಲೆಟ್ ಪೇಪರ್ ಗೊಂದಲ ಹಾಗೂ ಮಂಡ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಮಧ್ಯೆ ಸುಮಲತಾ ಧರ್ಮಸ್ಥಳಕ್ಕೆ ಭೇಟಿ ನೀಡಿರುವುದು ಹಲವಾರು ವಿಶ್ಲೇಷಣೆಗೆ ದಾರಿ ಮಾಡಿಕೊಟ್ಟಿದೆ.












Click it and Unblock the Notifications