NHAI: ಸುರತ್ಕಲ್-ಬಿ.ಸಿ.ರೋಡ್ ಹೆದ್ದಾರಿ ವ್ಯಾಪ್ತಿ ಎನ್‌ಎಚ್‌ಎಐಗೆ ಹಸ್ತಾಂತರದ ಬಿಗ್ ಅಪ್ಡೇಟ್
ಕರ್ನಾಕದಲ್ಲಿ ಹೆದ್ಧಾರಿ ಅಭಿವೃದ್ಧಿ ಕಾಮಗಾರಿಗಳು ಜೋರಾಗಿ ನಡೆಯುತ್ತಿವೆ. ಹಾಗೆಯೇ ಇದೀಗ ಈ ಭಾಗದಲ್ಲಿನ ಹೆದ್ದಾರಿ ನಿರ್ವಹಣೆಯನ್ನು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ವ್ಯಾಪ್ತಿಗೆ ತರಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಮನವಿ ಸಲ್ಲಿಸಲಾಗಿದೆ. ಹಾಗಾದ್ರೆ ಅದು ಯಾವ್ದು ಹಾಗೂ ಹೀಗೆ ಮಾಡಿದ್ರೆ ಏನೆಲ್ಲಾ ಪ್ರಯೋಜನಗಳಿವೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ದೇಶದಲ್ಲಿ ಬಹುನಿರೀಕ್ಷಿತ ಹೆದ್ದಾರಿಗಳಲ್ಲಿ ಈಗಾಗಲೇ ಹಲವು ಉದ್ಘಾಟನೆಯಾಗಿ ವಾಹನಗಳು ಸಂಚಾರ ಮಾಡಿದರೆ, ಇನ್ನೂ ಕೆಲವು ಕಾಮಗಾರಿ ಹಂತದಲ್ಲಿವೆ. ಅದರಲ್ಲೂ ಕರ್ನಾಟಕದಲ್ಲಿಯೂ ಕೂಡ ರಸ್ತೆ ಕಾಮಗಾರಿಗಳು ನಡೆಯುತ್ತಲಿವೆ. ಈ ನಡುವೆಯೇ ಇದೀಗ ಸುರತ್ಕಲ್-ಬಿ.ಸಿ.ರೋಡ್ ನಡುವಿನ ಹೆದ್ದಾರಿಯ ನಿರ್ವಹಣೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವ್ಯಾಪ್ತಿಗೆ ತರುವಂತೆ ಒತ್ತಾಯಿಸಲಾಗಿದೆ.

ನವಮಂಗಳೂರು ಬಂದರು ವ್ಯಾಪ್ತಿಗೆ ಸೇರಿದ ಸುರತ್ಕಲ್-ಬಿ.ಸಿ. ರೋಡ್ ನಡುವಿನ ಹೆದ್ದಾರಿಯ ನಿರ್ವಹಣೆಯನ್ನ ಎನ್‌ಎಚ್‌ಎಐ ವ್ಯಾಪ್ತಿಗೆ ತರಬೇಕು. ಈ ಮೂಲಕ ಅದರ ಸಮರ್ಪಕ ನಿರ್ವಹಣೆ, ವಾಹನಗಳ ಸುಗಮ ಸಂಚಾರಕ್ಕೆ ಶಾಶ್ವತ ಪರಿಹಾರ ಒದಗಿಸಬೇಕೆಂದು ಕೋರಿ ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಅವರು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಮನವಿ ಸಲ್ಲಿಕೆ ಮಾಡಿದ್ದಾರೆ.
ನವದೆಹಲಿಯಲ್ಲಿ ನಿತಿನ್ ಗಡ್ಕರಿ ಅವರನ್ನು ಭೇಟಿಯಾದ ಅವರು, ಮಂಗಳೂರಿನ ಬಂದರು ಸಂಪರ್ಕ ಹೆದ್ದಾರಿ ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆ ಪ್ರಸ್ತುತ ವಿಶೇಷ ಉದ್ದೇಶದ ಘಟಕವಾಗಿ ರಚನೆ ಮಾಡಲಾದ ರಾಷ್ಟ್ರೀಯ ಹೆದ್ದಾರಿ ಸರಕು ಸಾಗಣೆ ನಿರ್ವಹಣೆ ಲಿಮಿಟೆಡ್ ವ್ಯಾಪ್ತಿಗೆ ಸೇರುತ್ತದೆ. ಈ ರಸ್ತೆ ನಿರ್ವಹಣೆಗೆ ನಿರ್ದಿಷ್ಟ ಏಜೆನ್ಸಿ ಇಲ್ಲ ಎಂದು ಹೇಳಿದರು.
ಅಲ್ಲದೇ ಹಣದ ಕೊರತೆ ಹಾಗೂ ಸಮಯಕ್ಕೆ ತಕ್ಕಂತೆ ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡದಿರುವುದು ಈ ಮಾರ್ಗದ ದುಸ್ಥಿತಿಗೆ ಪ್ರಮುಖ ಕಾರಣ ಆಗಿದೆ. ಮಳೆಗಾಲದಲ್ಲಿ ಇಲ್ಲಿನ ರಸ್ತೆಗಳಂತೂ ಸಂಪೂರ್ಣವಾಗಿ ಹದಗೆಟ್ಟು ವಾಹನ ಸವಾರರು ಸಂಚರಿಸದ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ತಿಳಿಸಿದರು.
ಈ ಗಂಭೀರ ಸಮಸ್ಯೆ ಪರಿಹಾರಕ್ಕಾಗಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿ ಇದ್ದು, ಸುರತ್ಕಲ್-ಬಿ.ಸಿ. ರೋಡ್ ಹೆದ್ದಾರಿಯನ್ನು ಎನ್‌ಎಚ್‌ಎಐ ವ್ಯಾಪ್ತಿಗೆ ತಂದು ನವೀಕರಣ ಮತ್ತು ನಿಯಮಿತ ನಿರ್ವಹಣೆಗೆ ಶಾಶ್ವತ ಪರಿಹಾರಕ್ಕಾಗಿ ಈ ಸಮಸ್ಯೆ ಬಗೆಹರಿಸಲು ಸಚಿವರ ಸಹಕಾರ ಕೋರಿದ್ದಾರೆ.
ಈಗಾಗಲೇ ಮಂಗಳೂರು-ಬೆಂಗಳೂರು ಹೈಸ್ಪೀಡ್ ಕಾರಿಡಾರ್ ಯೋಜನೆ ಹೆದ್ದಾರಿಗೆ ಸಚಿವಾಲಯದಿಂದ ಟೆಂಡರ್ ನಡೆಸಿ ವಿಸ್ತೃತ ಯೋಜನಾ ವರದಿ ತಯಾರಿಸುವ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ. ಅಲ್ಲದೆ, ದಕ್ಷಿಣ ಕನ್ನಡದ ಪ್ರಮುಖ ಮೂಲಸೌಕರ್ಯ ಯೋಜನೆಗಳ ಜಾರಿ ಸಂಬಂಧಪಟ್ಟಂತೆ ನಿತಿನ್ ಗಡ್ಕರಿ ಅವರಿಗೆ ಚೌಟ ಅವರು ವಿಶೇಷ ಕೃತಜ್ಞತೆ ಸಲ್ಲಿಸಿದರು.
ರಾಜ್ಯದಲ್ಲು 2ನೇ ಅತೀ ದೊಡ್ಡ ನಗರವಾಗಿ ಬೆಳೆಯುತ್ತಿರುವ ಮಂಗಳೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ತುಂಬಾ ಸಮಸ್ಯೆ ಉಂಟಾಗುತ್ತಿದೆ. ಅಲ್ಲದೆ, ಕರಾವಳಿ ತೀರವನ್ನು ಹೊಂದಿರುವ ಹಿನ್ನೆಲೆ ನಗರೀಕರಣದ ವ್ಯಾಪ್ತಿ ವಿಸ್ತರಣೆಗೂ ವಿವಿಧ ರೀತಿಯ ಸವಾಲು ಎದುರಾಗುತ್ತಿವೆ. ರಸ್ತೆ, ರೈಲು, ಬಂದರು ಹಾಗೂ ವಿಮಾನ ಸಂಪರ್ಕ ವ್ಯವಸ್ಥೆಯಿಂದ ನಗರಕ್ಕೆ ಹೆಚ್ಚಿನ ಪ್ರಮಾಣದ ಜನರು ಹಾಗೂ ಪ್ರವಾಸಿಗರ ಭೇಟಿಗೂ ಅನುಕೂಲ ಕಲ್ಪಿಸಿದೆ ಎಂದು ತಿಳಿಸಿದೆ.
ಆದರೆ, ನಗರೀಕರಣದ ದೃಷ್ಟಿಯಿಂದ ಮಂಗಳೂರು ಮಧ್ಯಭಾಗದಲ್ಲಿ ಜನದಟ್ಟಣೆ ಹಾಗೂ ವಾಹನ ದಟ್ಟಣೆ ಸಮಸ್ಯೆಗೆ ದೂರದೃಷ್ಟಿಯ ಪರಿಹಾರ ಕಂಡುಕೊಳ್ಳುವುದಕ್ಕೆ NH-66 ಹಾಗೂ NH-75 ಹೆದ್ದಾರಿಗಳನ್ನು ಸಂಪರ್ಕಿಸುವ ಮಂಗಳೂರಿಗೆ ಹೊರ ವರ್ತುಲ ರಸ್ತೆಯನ್ನು ನಿರ್ಮಾಣ ಮಾಡುವಂತೆ ಸಂಸದರು ಮನವಿ ಮಾಡಿದರು.
ಇನ್ನು ಶಿರಾಡಿ ಘಾಟಿ ಭಾಗದಲ್ಲಿ ರಸ್ತೆ ಹಾಗೂ ರೈಲು ಹಳಿಗಳ ಅಭಿವೃದ್ದಿ ಕಾಮಗಾರಿಗೆ ರೈಲ್ವೇ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಜಂಟಿ ಸಮೀಕ್ಷೆಯನ್ನು ಕೈಗೊಳ್ಳಲು ಮತ್ತು ಅದಕ್ಕೆ ಸಂಬಂಧಿಸಿದ ಮೇಲ್ವಿಚಾರಣೆ ಮಾಡಲು ತಜ್ಞರ ಸಮಿತಿಯನ್ನ ನೇಮಕ ಮಡುವಂತೆ ರೈಲ್ವೆ ಸಚಿವಾಲಯದೊಂದಿಗೆ ಚರ್ಚೆ ನಡೆಸುವಂತೆಯೂ ಮನವಿ ಮಾಡಿದರು.
ಶಿರಾಡಿ ಘಾಟಿ ಪ್ರದೇಶವು ಪರಿಸರ ಸೂಕ್ಷ್ಮತೆ ಮತ್ತು ತಾಂತ್ರಿಕ ಸಂಕೀರ್ಣತೆಯನ್ನು ಗಮನದಲ್ಲಿಟ್ಟುಕೊಂಡು, ರೈಲ್ವೆ ಸಚಿವಾಲಯದೊಂದಿಗೆ ತಜ್ಞರ ನೇತೃತ್ವದ ಜಂಟಿ ವಿಧಾನವು ಸೂಕ್ತ ಜೋಡಣೆ ಸುಸ್ಥಿರತೆ ಮತ್ತು ದೀರ್ಘಕಾಲೀನ ಪರಿಹಾರ-ಮಾರ್ಗೋಪಾಯಗಳನ್ನು ಒದಗಿಸುತ್ತದೆ ಎಂದು ಸಂಸದರು ಸಚಿವರಿಗೆ ಮನದಟ್ಟು ಮಾಡಿದ್ದಾರೆ. ಇನ್ನು ದಕ್ಷಿಣ ಕನ್ನಡ ಜಿಲ್ಲೆಯ ಹೆದ್ದಾರಿಗಳ ಅಭಿವೃದ್ಧಿ, ಮೂಲಸೌಕರ್ಯ, ಮಂಗಳೂರಿನಲ್ಲಿ ಹೊರ ವರ್ತುಲ ರಸ್ತೆ ನಿರ್ಮಾಣ, ಶಿರಾಡಿ ಘಾಟಿ ಡಿಪಿಆರ್‌ಗೆ ಜಂಟಿ ಸಮೀಕ್ಷೆ ನಡೆಸುವುದು ಸೇರಿದಂತೆ ಎಲ್ಲಾ ಮನವಿಗಳಿಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಭೇಟಿ ಬಳಿಕ ಅವರು ತಿಳಿಸಿದರು.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications