ಮಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಸುರೇಶ್ ಅಧಿಕಾರ ಸ್ವೀಕಾರ
ಮಂಗಳೂರು, ಜೂನ್ 12 : ಮಂಗಳೂರು ನಗರಕ್ಕೆ ನೂತನ ಪೊಲೀಸ್ ಆಯುಕ್ತರಾಗಿ ಶಿವಮೊಗ್ಗ ಮೂಲದ ಟಿ ಆರ್ ಸುರೇಶ್ (ತಿಮ್ಮಯ್ಯ ರಾಮಪ್ಪ ಸುರೇಶ್) ಸೋಮವಾರ ಮಧ್ಯಾಹ್ನ ಅಧಿಕಾರ ಸ್ವೀಕರಿಸಿದರು.
1991ರಲ್ಲಿ ಡಿವೈಎಸ್ ಪಿಯಾಗಿ ಬಿಜಾಪುರದಲ್ಲಿ ಸೇವೆ ಆರಂಭಿಸಿರುವ ಟಿ ಆರ್ ಸುರೇಶ್ ಅವರು, ಬಾಗಲಕೋಟೆ, ಉತ್ತರ ಕನ್ನಡ, ಹುಬ್ಬಳ್ಳಿ-ಧಾರವಾಡ, ಮೈಸೂರು, ತುಮಕೂರು, ಬೆಳಗಾವಿ, ಕೊಡಗು, ಬಾಗಲಕೋಟೆ, ರಾಯಚೂರು, ಬೆಂಗಳೂರು ನಗರ ಉತ್ತರ, ಅಗ್ನಿಶಾಮಕ ದಳ ಹೀಗೆ ಸುಮಾರು 26 ವರ್ಷ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದಾರೆ.

ಬಳಿಕ ಮಾತನಾಡಿದ ಅವರು, ಮಂಗಳೂರಿನಲ್ಲಿ ಸೇವೆ ಸಲ್ಲಿಸಲು ಇದೊಂದು ಉತ್ತಮ ಅವಕಾಶ ಎಂದು ಭಾವಿಸುತ್ತೇನೆ. ನನ್ನ ಶಕ್ತಿಮೀರಿ ನಗರದ ಕಾನೂನು ಸುವ್ಯವಸ್ಥೆ ಕಾಪಾಡಲು ಮತ್ತು ಸಾರ್ವಜನಿಕರ ಆಸ್ತಿಪಾಸ್ತಿ ರಕ್ಷಿಸಲು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತೇನೆ. ಮಂಗಳೂರು ನಗರ ಪೊಲೀಸ್ ವ್ಯಾಪ್ತಿಯಲ್ಲಿ ಜನಸ್ನೇಹಿ ಪೊಲೀಸ್‌ಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದರು.












Click it and Unblock the Notifications