ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಸೀದಿಗಳಿಗೆ ತಸ್ತಿಕ್ ಭತ್ಯೆ; ವಿಎಚ್‌ಪಿ, ಭಜರಂಗದಳ ತೀವ್ರ ವಿರೋಧ

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಜೂನ್ 09; ಧಾರ್ಮಿಕ ದತ್ತಿ ಇಲಾಖೆಯ ಹೊಸ ಆದೇಶ ಕರಾವಳಿಯಲ್ಲಿ ವಿವಾದ ಹುಟ್ಟು ಹಾಕಿದೆ. ಹಿಂದೂ ಧಾರ್ಮಿಕ ದತ್ತಿ ಇಲಾಖೆಯಿಂದ ಮಸೀದಿ, ಮದರಸಾಗಳಿಗೆ ತಸ್ತಿಕ್ ಭತ್ಯೆ ನೀಡುವುದಕ್ಕೆ ಮಂಗಳೂರಿನಲ್ಲಿ ವಿಶ್ವಹಿಂದೂ ಪರಿಷತ್, ಭಜರಂಗದಳ ವಿರೋಧ ವ್ಯಕ್ತಪಡಿಸಿದೆ.

ಕೊರೊನಾ ಲಾಕ್‌ಡೌನ್‌ನಿಂದಾಗಿ ದೇವಾಲಯಗಳ ಅರ್ಚಕರು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ. ತಸ್ತಿಕ್ ಭತ್ಯೆ ನೀಡಲು ಧಾರ್ಮಿಕ ದತ್ತಿ ಇಲಾಖೆಯಿಂದ ಆದೇಶ ಮಾಡಲಾಗಿದೆ. ಈ ಸಂಬಂಧ 32 ಕೋಟಿ ರೂ.ಗಳನ್ನು ಬಿಡುಗಡೆ ಮಾಡುವಂತೆಯೂ ಸರ್ಕಾರ ಆದೇಶಿಸಿದೆ.

ತಮಿಳುನಾಡಲ್ಲಿ 'ಕೊರೊನಾ ದೇವಿ' ದೇವಾಲಯ; ವಿಶೇಷ ಪೂಜೆ ತಮಿಳುನಾಡಲ್ಲಿ 'ಕೊರೊನಾ ದೇವಿ' ದೇವಾಲಯ; ವಿಶೇಷ ಪೂಜೆ

ಆದರೆ ಈ ಆದೇಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 41 ಮಸೀದಿ, ಮದರಸಾದ ಮೌಲ್ವಿಗಳಿಗೂ ತಸ್ತಿಕ್ ಭತ್ಯೆ ನೀಡಲು ಉಲ್ಲೇಖಿಸಲಾಗಿದೆ. ಮಸೀದಿ ಅಥವಾ ಮದರಸಾದ ಮೌಲ್ವಿಗಳಿಗೂ ತಲಾ 48,000 ಸಾವಿರ ರೂಪಾಯಿ ನೀಡಲು ರಾಜ್ಯ ಸರ್ಕಾರ ಸೂಚಿಸಿದೆ.

ಕೊಡಗು: ಬಾಗಿಲು ಮುಚ್ಚಿ ಪ್ರವಚನ ನೀಡುತ್ತಿದ್ದ ಮಸೀದಿ ವಿರುದ್ಧ ಕೇಸ್ ದಾಖಲುಕೊಡಗು: ಬಾಗಿಲು ಮುಚ್ಚಿ ಪ್ರವಚನ ನೀಡುತ್ತಿದ್ದ ಮಸೀದಿ ವಿರುದ್ಧ ಕೇಸ್ ದಾಖಲು

Tasdik Allowance For Masjid And Madarsa Vishwa Hindu Parishad Opposed

ಹಿಂದು ಧಾರ್ಮಿಕ ದತ್ತಿ ಇಲಾಖೆ ಮೂಲಕವೇ ಮಸೀದಿ, ಮದರಸಾಗಳಿಗೆ ತಸ್ತಿಕ್ ಭತ್ಯೆ ನೀಡಲು ಆದೇಶ ಮಾಡಲಾಗಿದ್ದು,ಇದರಿಂದ ವಿಶ್ವಹಿಂದೂ ಪರಿಷತ್ ಮತ್ತು ಭಜರಂಗ ಆಕ್ರೋಶ ವ್ಯಕ್ತಪಡಿಸಿದೆ.

 ಮಸೀದಿ, ದರ್ಗಾಗಳಲ್ಲಿ ಧ್ವನಿವರ್ಧಕ ಬಳಕೆ; ವಕ್ಫ್‌ ಬೋರ್ಡ್‌ನಿಂದ ಪರಿಷ್ಕೃತ ಸುತ್ತೋಲೆ ಮಸೀದಿ, ದರ್ಗಾಗಳಲ್ಲಿ ಧ್ವನಿವರ್ಧಕ ಬಳಕೆ; ವಕ್ಫ್‌ ಬೋರ್ಡ್‌ನಿಂದ ಪರಿಷ್ಕೃತ ಸುತ್ತೋಲೆ

ಸರ್ಕಾರ ಕೂಡಲೇ ಆದೇಶ ಹಿಂಪಡೆಯಲು ಧಾರ್ಮಿಕ ದತ್ತಿ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿಗೆ ವಿಶ್ವ ಹಿಂದೂ ಪರಿಷತ್ ಮನವಿ ಮಾಡಿದೆ. ಯಾವುದೇ ಕಾರಣಕ್ಕೂ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಹಣದಿಂದ ಮೌಲ್ವಿಗಳಿಗೆ ತಸ್ತಿಕ್ ಭತ್ಯೆ ನೀಡದಂತೆ ಮನವಿ ಮಾಡಲಾಗಿದೆ.

ದೇವಾಲಯದ ಹಣವನ್ನು ಹಿಂದುಗಳಿಗೆ ಮತ್ತು ದೇವಾಲಯದ ಕಾರ್ಯಗಳಿಗೆ ಮಾತ್ರ ಉಪಯೋಗಿಸಬೇಕು. ಮಸೀದಿ, ಮದರಸಾಗಳಿಗೆ ಉಪಯೋಗಿಸುವುದು ಸರಿಯಲ್ಲ ಎಂದು ವಿಶ್ವಹಿಂದೂ ಪರಿಷತ್, ಭಜರಂಗದಳ ಹೇಳಿದೆ.

English summary
Vishwa hindu parishad and Bajrang dal opposed to issue tasdik allowance for masjid and madarsa from hindu religious institutions and charitable endowments department.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X