ದಕ್ಷಿಣ ಕನ್ನಡದ ಪಟಾಕಿ ತಯಾರಿಕಾ ಘಟಕಗಳಿಗೆ ತಾತ್ಕಾಲಿಕ ನಿರ್ಬಂಧ: ಜಿಲ್ಲಾಧಿಕಾರಿ ಆದೇಶದಲ್ಲಿರುವುದೇನು..?
ಮಂಗಳೂರು, ಜನವರಿ 30: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ವೇಣೂರಿನ ಪಟಾಕಿ ತಯಾರಿಕಾ ಘಟಕದಲ್ಲಿ ಸಂಭವಿಸಿದ ದುರಂತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿರುವ ಎಲ್ಲಾ ಪಟಾಕಿ ತಯಾರಿಕಾ ಘಟಕಗಳಿಗೆ ತಾತ್ಕಾಲಿಕ ನಿರ್ಬಂಧ ವಿಧಿಸಿ ಪ್ರಭಾರ ಜಿಲ್ಲಾಧಿಕಾರಿ ಡಾ.ಆನಂದ ಕೆ ಆದೇಶ ಹೊರಡಿಸಿದ್ದಾರೆ.
ಸುಪ್ರೀಂ ಕೋರ್ಟ್ ಆದೇಶ, ಸರ್ಕಾರದ ಮಾರ್ಗಸೂಚಿ ಪಾಲನೆಯ ಮರುಪರಿಶೀಲನೆಗಾಗಿ ನಿರ್ಬಂಧ ವಿಧಿಸಲಾಗಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸುಡುಮದ್ದು ತಯಾರಿಕಾ ಘಟಕಗಳನ್ನು ನಿರ್ಬಂಧಿಸಿ ಅಮಾನತ್ತಿನಲಿಡಲು ಆದೇಶಿಸಲಾಗಿದೆ. ಹಾಗೂ ಪಟಾಕಿ ತಯಾರಿಕೆ, ಮಾರಾಟ ಘಟಕಗಳ ಮರುಪರಿಶೀಲನೆಗೆ ಜಿಲ್ಲಾ ಮಟ್ಟದ ತನಿಖಾ ಸಮಿತಿ ರಚನೆ ಮಾಡಲಾಗಿದೆ ಎಂದು ಪ್ರಭಾರ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಮಂಗಳೂರು ಮತ್ತು ಪುತ್ತೂರು ಎಸಿಗಳ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಲಾಗಿದ್ದು, ಜಿಲ್ಲಾ ವ್ಯಾಪ್ತಿಯ ಎಲ್ಲಾ ಸುಡುಮದ್ದು ತಯಾರಿಕಾ ಘಟಕಗಳನ್ನು ತಕ್ಷಣ ಸೀಲ್ಡೌನ್ ಮಾಡಲು ಆದೇಶಿಸಲಾಗಿದೆ. ಸರ್ಕಾರದ ಮಾರ್ಗಸೂಚಿ ಪಾಲನೆ ಬಗ್ಗೆ ಪರಿಶೀಲನೆ ನಡೆಸಿ ಪೆಬ್ರವರಿ 5ರ ಒಳಗಾಗಿ ಸಮಗ್ರ ವರದಿ ಸಲ್ಲಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.
ಆದೇಶ ಪ್ರತಿಯಲ್ಲಿ ಇರುವುದೇನು..?
28-01-2024 ರಂದು ಭಾನುವಾರ ಸಂಜೆ ಬೆಳ್ತಂಗಡಿ ತಾಲೂಕಿನ ವೇಣೂರು ಗೋಳಿಯಂಗಡಿ ಸಮೀಪದ ಕುಕ್ಕೇಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಡ್ಯಾರು ಎಂಬಲ್ಲಿ ಸುಡುಮದ್ದು ತಯಾರಿಕಾ ಘಟಕದಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಮೂವರು ಕಾರ್ಮಿಕರ ಜೀವ ಹಾನಿಯಾಗಿರುತ್ತದೆ ಹಾಗೂ ಸಮೀಪದ ಮನೆಯ ಆಸ್ತಿ ಪಾಸ್ತಿಗೆ ಹಾನಿಯುಂಟಾಗಿರುತ್ತದೆ.

Explosive Act 1984 & Explosive Rules 2008 ರ ನಿಯಾಮಾವಳಿ 107 ರಂತೆ ಸುಡುಮದ್ದು ತಯಾರಿಕಾ ಘಟಕಗಳಿಗೆ ನಮೂನೆ LE - 1 ರಲ್ಲಿ ಪರವಾನಿಗೆಗಳನ್ನು ಮಂಜೂರು ಮಾಡಿದ್ದು, ಜಿಲ್ಲೆಯಲ್ಲಿ ಪರವಾನಿಗೆ ಪಡೆದುಕೊಂಡ ಅಧಿಕೃತ ತಯಾರಿಕಾ ಘಟಕಗಳಲ್ಲಿ ಮಾನ್ಯ ಸರ್ವೋಚ್ಛ ನ್ಯಾಯಾಲಯದ ಆದೇಶ ಹಾಗೂ ಸರಕಾರದ ನಿರ್ದೇಶನ ಮತ್ತು ಮಾರ್ಗಸೂಚಿಗಳಂತೆ ಪಟಾಕಿ ವ್ಯವಹಾರ ಮಾಡುತ್ತಿರುವುದನ್ನು ನಿಯಂತ್ರಿಸಲು ಮತ್ತು ಪಟಾಕಿಗಳನ್ನು ತಯಾರಿಕೆ ಮಾಡುವ ಸಂದರ್ಭದಲ್ಲಿ ಅಗ್ನಿ ಅನಾಹುತಗಳನ್ನು ಸಂಭವಿಸುವುದನ್ನು ತಡೆಗಟ್ಟಲು ಸಲುವಾಗಿ ಮರುಪರಿಶೀಲನೆ ಮಾಡಲು ಈ ಕೆಳಗಿನಂತೆ ಆದೇಶಿಸಲಾಗಿದೆ.
ಆದೇಶ ಸಂಖ್ಯೆ: ARM CR 02/2022-23/C3 ದಿನಾಂಕ: 29-01-2024
ಪ್ರಸ್ತಾವನೆಯಲ್ಲಿ ವಿವರಿಸಿದ ಅಂಶಗಳ ಅನುಸಾರ ಡಾ|ಆನಂದ್ ಕೆ, ಭಾ.ಆ.ಸೇ., ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಆದ ನಾನು ಸ್ಪೋಟಕ ನಿಯಮಗಳು 2008 ಅಧಿನಿಯಮ 40 ರಡಿಯಲ್ಲಿ ಪ್ರದತ್ತವಾಗಿರುವ ಅಧಿಕಾರವನ್ನು ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಗೆ ಬರುವ ಎಲ್ಲಾ ಸುಡುಮದ್ದು ತಯಾರಿಕಾ ಘಟಕಗಳನ್ನು ಈ ತಕ್ಷಣದಿಂದ ಜಾರಿಗೆ ಬರುವಂತೆ ತಾತ್ಕಾಲಿಕವಾಗಿ ನಿರ್ಬಂಧಿಸಿ ಮುಂದಿನ ಆದೇಶದವರೆಗೆ ಅಮಾನತ್ತಿನಲಿಡಲು ಆದೇಶಿಸಲಾಗಿದೆ.
ಈ ಆದೇಶವನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸುವಂತೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಮತ್ತು ಪುತ್ತೂರು ಉಪವಿಭಾಗಾಧಿಕಾರಿಗಳಿಗೆ ನಿರ್ದೇಶನ ನೀಡಿದೆ.
ಘಟನೆಯ ಹಿನ್ನೆಲೆ ಏನು?
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ವೇಣೂರಿನ ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, ಮೂವರು ದಾರುಣವಾಗಿ ಸಾವನ್ನಪ್ಪಿದ್ದರು. ಕೇರಳ ಮೂಲದ ವರ್ಗೀಸ್(62), ಸ್ವಾಮಿ(60) ಹಾಗೂ ಹಾಸನ ಅರಿಸೀಕೆರೆ ಮೂಲದ ಚೇತನ್ (24) ಮೃತಪಟ್ಟಿದ್ದರು. ಅಲ್ಲದೇ ಹಾಸನದವರಾದ ದಿನೇಶ, ಕಿರಣ, ಅರಸೀಕೆರೆಯ ಕುಮಾರ, ಚಿಕ್ಕಮಾರಹಳ್ಳಿಯ ಕಲ್ಲೇಶ, ಕೇರಳದವರಾದ ಪ್ರೇಮ್, ಕೇಶವ ಗಾಯಗೊಂಡಿದ್ದರು. ಸಯ್ಯದ್ ಬಶೀರ್ ಎನ್ನುವವರ ಪಟಾಕಿ ತಯಾರಿಕಾ ಘಟಕದಲ್ಲಿ ಈ ಘಟನೆ ನಡೆದಿತ್ತು.
ಘಟನೆ ವೇಳೆ ದೊಡ್ಡ ಗಾತ್ರದ ಸ್ಫೋಟಕಗಳು ಐದು ಬಾರಿ ಸ್ಫೋಟಗೊಂಡಿದೆ. ಪರಿಣಾಮ ಸ್ಫೋಟ ನಡೆದ ಸುತ್ತಮುತ್ತಲಿನ 2 ಕಿ.ಮೀ. ವ್ಯಾಪ್ತಿಯ ಮನೆಗಳಿಗೆ ಹಾನಿಯಾಗಿದೆ. ಕೆಲವು ಮನೆಗಳು ಸಂಪೂರ್ಣ ಜಖಂಗೊಂಡಿದೆ. ಮನೆಯ ಮೇಲ್ಛಾವಣಿಯ ಶೀಟ್ ಗಳು ತುಂಡು ತುಂಡಾಗಿ ಮುರಿದು ಬಿದ್ದಿದೆ. ಸ್ಫೋಟದ ವೇಳೆ ಕಣ್ಣುಗಳು ಮಂಜಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು












Click it and Unblock the Notifications