ಕುದ್ರೋಳಿ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಿದ ರಾಜ್ಯಪಾಲ ಗೆಹ್ಲೋಟ್
ಮಂಗಳೂರು, ಮಾರ್ಚ್ 14; ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಪ್ರವಾಸದಲ್ಲಿದ್ದಾರೆ. ಮಂಗಳೂರಿಗೆ ಆಗಮಿಸಿದ ಅವರು ಶ್ರೀ ಕ್ಷೇತ್ರ ಕುದ್ರೋಳಿಗೆ ಭೇಟಿ ನೀಡಿ ಗೋಕರ್ಣನಾಥನ ದರ್ಶನ ಮಾಡಿದರು.
ವಿಶೇಷ ವಿಮಾನದ ಮೂಲಕ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸೋಮವಾರ ಆಗಮಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ರನ್ನು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಿಇಒ ಕುಮಾರ್, ಮಂಗಳೂರು ಸಹಾಯಕ ಆಯುಕ್ತ ಮದನ್ ಮೋಹನ್, ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಸೇರಿದಂತೆ ಅಧಿಕಾರಿಗಳು ಜಿಲ್ಲಾಡಳಿತದ ಪರವಾಗಿ ಸ್ವಾಗತಿಸಿದರು.
ಬಜ್ಪೆ ವಿಮಾನ ನಿಲ್ದಾಣದಿಂದ ನೇರ ಶ್ರೀಕ್ಷೇತ್ರ ಕುದ್ರೋಳಿ ಗೋಕರ್ಣನಾಥ ಕ್ಷೇತ್ರಕ್ಕೆ ಆಗಮಿಸಿದ ರಾಜ್ಯಪಾಲರು ಗೋಕರ್ಣನಾಥ ಹಾಗೂ ಪರಿವಾರ ದೇವರುಗಳಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭ ದೇವಸ್ಥಾನದ ವತಿಯಿಂದ ರಾಜ್ಯಪಾಲರಿಗೆ ಶಾಲು, ಫಲಪುಷ್ಪ, ದೇವರ ವಿಗ್ರಹ ನೀಡಿ ವಿಶೇಷ ಗೌರವ ಸಲ್ಲಿಸಲಾಯಿತು.

ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿದವರ ದಾಖಲೆ ಪುಸ್ತಕದಲ್ಲಿ ರಾಜ್ಯಪಾಲರು ಹೆಸರು ಸಹಿಯನ್ನು ದಾಖಲಿಸಿದರು. ಬಳಿಕ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿಯವರ ಆತ್ಮಕಥೆಯ ಇಂಗ್ಲಿಷ್ ಅನುವಾದ ಪುಸ್ತಕವನ್ನು ನೀಡಲಾಯಿತು.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ ಹಿನ್ನಲೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ಮಂಗಳೂರಿನಿಂದ ರಸ್ತೆ ಮಾರ್ಗದ ಮೂಲಕ ಮೂಡಬಿದರೆಯ ಸಾವಿರ ಕಂಬದ ಬಸದಿ, ಜೈನ ಬಸದಿಗೆ ರಾಜ್ಯಪಾಲರು ಭೇಟಿ ನೀಡಲಿದ್ದಾರೆ. ಬಳಿಕ ಕಾರ್ಕಳ ಉತ್ಸವ ಕಾರ್ಯಕ್ರಮದಲ್ಲೂ ಭಾಗವಹಿಸಲಿದ್ದಾರೆ.
ರಾಜ್ಯಪಾಲರ ಆಗಮನ ಹಿನ್ನಲೆಯಲ್ಲಿ ಇಡೀ ಮಂಗಳೂರು ನಗರದಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಕಾರ್ಕಳ ಉತ್ಸವ ಬಳಿಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ವಾಸ್ತವ್ಯ ಹೂಡಲಿದ್ದು, ಭದ್ರತಾ ದೃಷ್ಟಿಯಿಂದ ಪಾಸ್ ಇಲ್ಲದವರಿಗೆ ಸರ್ಕ್ಯೂಟ್ ಹೌಸ್‌ಗೆ ಪ್ರವೇಶ ನಿಷೇಧಿಸಲಾಗಿದೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications