ಮಂಗಳೂರು: ಐಪಿಎಲ್ ಬೆಟ್ಟಿಂಗ್ ನಲ್ಲಿ ತೊಡಗಿದ್ದ 16 ಜನರ ಬಂಧನ

ಮಂಗಳೂರು, ಅಕ್ಟೋಬರ್ 29: ಕರಾವಳಿ ಜಿಲ್ಲೆ ದಕ್ಷಿಣ ಕನ್ನಡ ಮಂಗಳೂರು ನಗರದಲ್ಲಿ ಐಪಿಎಲ್ ಕ್ರಿಕೆಟ್‌ ಬೆಟ್ಟಿಂಗ್ ಅಡ್ಡೆಗಳ ಮೇಲೆ ಡಿಸಿಪಿ ಅರುಣಾಂಶುಗಿರಿ ಹಾಗೂ ವಿನಯ್ ಎ. ಗಾಂವ್ಕರ್ ನೇತೃತ್ವದಲ್ಲಿ ಸಿಸಿಬಿ ತಂಡವು ದಾಳಿ ನಡೆಸಿದೆ.

ಐಪಿಎಲ್ ಕ್ರಿಕೆಟ್‌ ಬೆಟ್ಟಿಂಗ್ ವಿಚಾರ ಪೊಲೀಸ್‌ ಇಲಾಖೆಯ ಗಮನಕ್ಕೆ ಬಂದಿದ್ದು, ಸಿಸಿಬಿ ತಂಡವು ನಗರದ ವಿವಿಧ ಕಡೆಗಳಲ್ಲಿ ದಾಳಿ ನಡೆಸಿ 4 ಕ್ರಿಕೆಟ್‌ ಬೆಟ್ಟಿಂಗ್ ಪ್ರಕರಣಗಳನ್ನು ದಾಖಲಿಸಿಕೊಂಡಿದೆ.

3 ಪ್ರಕರಣಗಳು ಮಂಗಳೂರು ನಗರ ಉತ್ತರ ಪೊಲೀಸ್‌ ಠಾಣೆ ಹಾಗೂ 1 ಪ್ರಕರಣ ಮಂಗಳೂರು ದಕ್ಷಿಣ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದೆ. ಈ ಎಲ್ಲ ಪ್ರಕರಣದಲ್ಲಿ ಒಟ್ಟು 16 ಮಂದಿಯನ್ನು ಬಂಧಿಸಲಾಗಿದ್ದು, ಅವರಿಂದ 28 ಮೊಬೈಲ್‌ ಹಾಗೂ 8 ಲಕ್ಷ ರೂ. ಮೌಲ್ಯದ 1 ಕಾರು ಹಾಗೂ 2,67,100 ರೂ. ನಗದು ಹಣವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.

Mangaluru: The Arrest Of 16 People Involved In IPL Betting

ಮಂಗಳೂರು ನಗರದಲ್ಲಿ ಯಾವುದೇ ರಿಕ್ರಿಯೇಶನ್ ಕ್ಲಬ್‌ಗಳನ್ನು ತೆರೆಯಲು ಅನುಮತಿ ಕೋರಿ ಯಾರೂ ಅರ್ಜಿ ಸಲ್ಲಿಸಿಲ್ಲ ಹಾಗೂ ಯಾವುದೇ ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸಲು ಪೊಲೀಸ್‌ ಇಲಾಖೆಯಿಂದ ಅನುಮತಿ ನೀಡಿರುವುದಿಲ್ಲ ಎಂದು ಮಂಗಳೂರು ಪೊಲೀಸ್‌ ಆಯುಕ್ತ ವಿಕಾಸ್ ಕುಮಾರ್‌ ತಿಳಿಸಿದ್ದಾರೆ.

ಮಂಗಳೂರು ನಗರದಲ್ಲಿ ಯಾವುದಾದರೂ ಅನಧಿಕೃತ ಕ್ಲಬ್‌ಗಳು ನಡೆಯುತ್ತಿರುವುದರ ಅಥವಾ ಯಾವುದೇ ರೀತಿಯ ಕ್ರಿಕೆಟ್‌ ಬೆಟ್ಟಿಂಗ್ ನಡೆಯುತ್ತಿರುವ ಮಾಹಿತಿ ಸಾರ್ವಜನಿಕರಿಗೆ ಇದ್ದಲ್ಲಿ ಪೊಲೀಸ್‌ ಇಲಾಖೆಗೆ ನೀಡಬೇಕು ಹಾಗೂ ಮಾಹಿತಿಯನ್ನು ನೀಡಿದವರ ವಿವರಗಳನ್ನು ಗೌಪ್ಯವಾಗಿ ಇಡಲಾಗುವುದು ಎಂದು ಪೊಲೀಸ್‌ ಆಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+