ಮಂಗಳೂರು: ಕೋಳಿ ಅಂಕ ನಡೆಸಲು ಅನುಮತಿ ಕೇಳುವವರಿಗೆ ಪೊಲೀಸರ ಖಡಕ್ ವಾರ್ನಿಂಗ್
ಮಂಗಳೂರು, ಜನವರಿ 31: ಕೋಳಿ ಅಂಕ ಕ್ರೀಡೆ ಕರಾವಳಿಯ ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿ ನಡೆಯುತ್ತದೆ. ಇತರ ಕ್ರೀಡೆಗಳಂತೆ ಇದನ್ನು ಕೂಡ ಆಯೋಜನೆ ಮಾಡಲಾಗುತ್ತದೆ. ಹೀಗಾಗಿ ಕೋಳಿ ಅಂಕಕ್ಕೆ ಅನುಮತಿ ನೀಡುವಂತೆ ಅನೇಕರು ಪೊಲೀಸರಿಗೆ ಮನವಿ ಸಲ್ಲಿಸುತ್ತಿದ್ದಾರೆ.
ಜೂಜಿನ ಕೋಳಿ ಅಂಕವು ಕಾನೂನು ಬಾಹಿರವಾಗಿರುವುದರಿಂದ ಮನವಿ ಪತ್ರಗಳು ಪೊಲೀಸರಿಗೆ ದೊಡ್ಡ ತಲೆ ನೋವಾಗಿದ್ದು, ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಎಸ್‌ಪಿ ಸಿಬಿ ರಿಷ್ಯಂತ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಕೋಳಿ ಅಂಕಕ್ಕೆ ಯಾವುದೇ ಠಾಣೆಗಳಲ್ಲಿ ಅನುಮತಿ ನೀಡಲು ಕಾನೂನಿನಲ್ಲಿ ಅವಕಾಶ ಇಲ್ಲ. ಹೀಗಾಗಿ ಸಾರ್ವಜನಿಕರು ಕೋಳಿ ಅಂಕ ನಡೆಸಲು ಅನುಮತಿಗೋಸ್ಕರ ಠಾಣೆಗಳಲ್ಲಿ ಮನವಿ ಸಲ್ಲಿಸಬಾರದು ಎಂದು ತಿಳಿಸಿದ್ದಾರೆ.

ಈ ಬಗ್ಗೆ ಸಾರ್ವಜನಿಕರಿಗೆ ಸಂಪೂರ್ಣವಾಗಿ ವಿವರಿಸಿರುವ ಎಸ್‌ಪಿ ಸಿಬಿ ರಿಷ್ಯಂತ್, ಜೂಜಿನ ಕೋಳಿ ಅಂಕವು ಕಾನೂನುಬಾಹಿರ ಅಪರಾಧವಾಗಿದೆ. ಕೋಳಿ ಅಂಕವನ್ನು ನಡೆಸುವುದಕ್ಕಾಗಿ ಪೊಲೀಸ್ ಠಾಣೆಗಳಲ್ಲಿ ಅನುಮತಿ ನೀಡಲು ಕಾನೂನಿನಲ್ಲಿ ಯಾವುದೇ ಅವಕಾಶವಿರುವುದಿಲ್ಲ, ಹಾಗಾಗಿ ಸಾರ್ವಜನಿಕರು ಕೋಳಿ ಅಂಕ ನಡೆಸಲು ಅನುಮತಿಗಾಗಿ ಪೊಲೀಸ್ ಠಾಣೆಗಳಿಗೆ ಮನವಿ ಸಲ್ಲಿಸಬಾರದು. ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಇಂತಹ ಅಕ್ರಮ ಚಟುವಟಿಕೆಗಳನ್ನು ನಡೆಸುವುದು ಕಂಡುಬಂದಲ್ಲಿ, ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.
ಪುತ್ತೂರಿನಲ್ಲಿ ಟಿಪ್ಪರ್-ಬೈಕ್ ಡಿಕ್ಕಿ: ಶಿಕ್ಷಕಿ ಸ್ಥಳದಲ್ಲೇ ಸಾವು
ಪುತ್ತೂರು: ಟಿಪ್ಪರ್ ಹಾಗೂ ದ್ವಿಚಕ್ರ ವಾಹನ ನಡುವೆ ಸಂಭವಿಸಿದ ಅಪಘಾತದಲ್ಲಿ ಶಿಕ್ಷಕಿ ಮೃತಪಟ್ಟ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪೋಳ್ಯದಲ್ಲಿ ನಡೆದಿದೆ. ಇಂಡಿದು ಗ್ರಾಮದ ಮಿತ್ತೂರು ಮದಕ ಸುರೇಶ್ ಕುಲಾಲ್ ಅವರ ಪತ್ನಿ ಮಾಣಿ ಖಾಸಗಿ ಶಾಲೆಯ ಶಿಕ್ಷಕಿ ಅನಿತಾ (35) ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಕೆಲವು ದಿನಗಳ ಹಿಂದೆ ಮನೆಯಲ್ಲಿ ಬಿದ್ದು ಗಾಯಗೊಂಡಿದ್ದ ಮೃತ ಅನಿತಾ ಅವರು ಸೋಮವಾರ ಪುತ್ತೂರಿನ ಸರಕಾರಿ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆದು ಪತಿ ಸುರೇಶ್ ಹಾಗೂ 5 ವರ್ಷದ ಪುತ್ರಿಯ ಜೊತೆಗೆ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಕಬಕ ಸಮೀಪದ ಪೋಳ್ಯದಲ್ಲಿ ಏಕಾಏಕಿ ವೇಗವಾಗಿ ಬಂದ ಟಿಪ್ಪರ್ ಡಿಕ್ಕಿ ಹೊಡೆದಿದೆ. ಅಪಘಾತದ ಭೀಕರತೆ ಅನಿತಾ ಸ್ಥಳದಲ್ಲೇ ಸಾವನ್ನಪ್ಪಿದ್ದು, ಬೈಕ್‌ನಲ್ಲಿದ್ದ ಇನ್ನಿಬ್ಬರು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.












Click it and Unblock the Notifications