ಅನಂತ್‌ಕುಮಾರ್ ಹೆಗಡೆ ವಿರುದ್ಧ ಕ್ರಮಕ್ಕೆ ಚಿಂತನೆ: ಎಂ.ಬಿ.ಪಾಟೀಲ್

ಮಂಗಳೂರು, ಜನವರಿ 28: ಕೇಂದ್ರ ಬಿಜೆಪಿ ಸಚಿವ ಅನಂತ್‌ಕುಮಾರ್ ಹೆಗಡೆ ಅವರ ಪ್ರಚೋದನಾತ್ಮಕ ಹೇಳಿಕೆ ನೀಡಿರುವ ಕಾರಣ ಅವರ ವಿರುದ್ಧ ಕ್ರಮಕೈಗೊಳ್ಳಲು ಚಿಂತಿಸಲಾಗುತ್ತಿದೆ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ಅವರು ಹೇಳಿದರು.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನಂತ್‌ಕುಮಾರ್ ಹೆಗಡೆ ಅವರು ಹಿಂಸೆಗೆ ಪ್ರಚೋದನೆ ಕೊಡುವ ಹೇಳಿಕೆ ನೀಡಿದ್ದಾರೆ ಇದು ಅಪರಾಧ, ಕಾನೂನು ಕ್ರಮ ಕೈಗೊಳ್ಳುವ ಅವಕಾಶ ಇದೆ ಅದರ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದು ಅವರು ಹೇಳಿದರು.

ಚುನಾವಣೆ ಹತ್ತಿರವಾಗುತ್ತಿದ್ದಂತೆ ಅನಂತ್‌ಕುಮಾರ್ ಅವರು ಈ ರೀತಿಯ ಹೇಳಿಕೆ ನೀಡಿರುವುದು ಅವರ ತಂತ್ರವನ್ನು ತಿಳಿಸುತ್ತಿದೆ. ಬೇಕೆಂದೇ ಜನರನ್ನು ಪ್ರಚೋದಿಸುವ ಕಾರ್ಯ ಮಾಡುತ್ತಿದ್ದಾರೆ ಎಂದು ಅವರು ಹೇಳಿದರು.

Thinking to take action against central minister Ananth Kumar Hegde: MB Patil

ಸಂವಿಧಾನದಡಿ ಸಂಸದರಾಗಿ ಸಂವಿಧಾನವನ್ನೇ ತಿದ್ದುತ್ತೀನಿ ಎಂದವರು ಅವರು, ಸಂಸದರಾಗಲು ಅಲ್ಲ ಗ್ರಾಮ ಪಂಚಾಯಿತಿ ಸದಸ್ಯರಾಗುವುದಕ್ಕೂ ಅವರು ನಾಲಾಯಕ್ಕು ಎಂದು ಅನಂತ್‌ಕುಮಾರ್ ಅವರನ್ನು ಜರಿದರು.

ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮಹಿಳೆಯೊಂದಿಗೆ ವಾಗ್ವಾದ ನಡೆಸಿದ ಬಗ್ಗೆ ಮಾತನಾಡಿದ ಎಂ.ಬಿ.ಪಾಟೀಲ್ ಆ ಬಗ್ಗೆ ನನಗೆ ಮಾಹಿತಿ ಇಲ್ಲ, ತಿಳಿದುಕೊಂಡ ನಂತರ ಮಾತನಾಡುತ್ತೇನೆ ಎಂದು ಹೇಳಿದರು.

ಕೇಂದ್ರ ಬಿಜೆಪಿ ಸಚಿವ ಅನಂತ್‌ಕುಮಾರ್ ಹೆಗಡೆ ಅವರು ನಿನ್ನೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ, ಹಿಂದೂ ಮಹಿಳೆಯ ಮೈಮುಟ್ಟುವ ಮುಸ್ಲೀಮರ ಕೈ ಕತ್ತರಿಸಿ ಎಂದು ಹೇಳಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+