ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊರೊನಾ ಸೋಂಕಿಗೆ ದ.ಕ. ಜಿಲ್ಲೆಯಲ್ಲಿ ಮೂರನೇ ಬಲಿ

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಏಪ್ರಿಲ್ 30 : ಕೊರೊನಾ ಸೋಂಕಿಗೆ ಜಿಲ್ಲೆಯಲ್ಲಿ ಮೂರನೇ ಬಲಿಯಾಗಿದ್ದು, ಜಿಲ್ಲೆಯ ಜನತೆಗೆ ಮತ್ತೆ ಆತಂಕ ಎದುರಾಗಿದೆ. ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಂಟ್ವಾಳದ ಮಹಿಳೆ ಇಂದು ಮೃತಪಟ್ಟಿದ್ದಾರೆ.

ಈ ಸಾವಿನ ಮೂಲಕ ಜಿಲ್ಲೆಯ ಜನತೆಯಲ್ಲಿ ಮತ್ತೆ ಆತಂಕ ತುಂಬಿದೆ. ಬಂಟ್ವಾಳ ಕಸಬಾ ಮೂಲದ ಮಹಿಳೆ ಮೃತಪಟ್ಟವರು. ಕಳೆದ ಕೆಲವು ದಿನಗಳಿಂದ ಈ ಮಹಿಳೆಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ನಿನ್ನೆಯಿಂದ ಮಹಿಳೆಯ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ವೆಂಟಿಲೇಟರ್ ಅಳವಡಿಸಿ ಅವರಿಗೆ ಚಿಕಿತ್ಸೆ ನೀಡಲಾಗಿತ್ತು.

Third Death In Dakshina Kannada District By Coronavirus

 ದಕ್ಷಿಣ ಕನ್ನಡ: ಕೊರೊನಾ ಪೀಡಿತ ಮಹಿಳೆಯ ಅಂತಿಮ ಸಂಸ್ಕಾರ ನಡೆಸಲು ಬಿಡದೇ 'ಸಂಸ್ಕಾರ' ಮರೆತ ಜನ ದಕ್ಷಿಣ ಕನ್ನಡ: ಕೊರೊನಾ ಪೀಡಿತ ಮಹಿಳೆಯ ಅಂತಿಮ ಸಂಸ್ಕಾರ ನಡೆಸಲು ಬಿಡದೇ 'ಸಂಸ್ಕಾರ' ಮರೆತ ಜನ

ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಬುಧವಾರ ಜಿಲ್ಲಾಡಳಿತ ನೀಡಿದ್ದ ವರದಿಯಲ್ಲಿ ಮಹಿಳೆಯ ಸ್ಥಿತಿ ಗಂಭೀರವಾಗಿದ್ದು, ವೆಂಟಿಲೇಟರ್ ಅಳವಡಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ನೀಡಲಾಗಿತ್ತು. ಆದರೆ, ಈ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ.

English summary
Third death by coronavirus reported in dakshina kannada district today. Bantwala based women who was admitted to hospital died today
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X