ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗಳೂರು ಹೊರವಲಯದ ತೊಕ್ಕೊಟ್ಟು ಮೇಲ್ಸೇತುವೆ ಉದ್ಘಾಟನೆ

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಜೂನ್ 13 : ಮಂಗಳೂರು ಹೊರವಲಯದ ತೊಕ್ಕೊಟ್ಟು ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಜಂಕ್ಷನ್‌ ನಲ್ಲಿ ನಿರ್ಮಿಸಲಾಗಿರುವ ಮೇಲ್ಸೇತುವೆ ಗುರುವಾರ ಉದ್ಘಾಟನೆ ಆಗಿದೆ. ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ತೊಕ್ಕೊಟ್ಟು ಮೇಲ್ಸೇತುವೆಯನ್ನು ಉದ್ಘಾಟಿಸಿದರು.

ವೇಳಾಪಟ್ಟಿ ಪ್ರಕಾರ ತೊಕ್ಕೊಟ್ಟು ಮೇಲ್ಸೇತುವೆಯು ಈ ಹಿಂದೆಯೇ ಉದ್ಘಾಟನೆ ಆಗಬೇಕಿತ್ತು. ಆದರೆ ತಾಂತ್ರಿಕ ಕಾರಣಗಳಿಂದ ಉದ್ಘಾಟನಾ ದಿನಾಂಕ ಮುಂದೂಡಲಾಗಿತ್ತು. ಜೂನ್ 14ರಂದು ಜನಪ್ರತಿನಿಧಿಗಳು, ಜಿಲ್ಲಾಡಳಿತ ಮತ್ತು ಹೆದ್ದಾರಿ ಇಲಾಖೆ ಅಧಿಕಾರಿಗಳ ಸಭೆ ನಡೆಯಲಿದ್ದು, ಆ ಬಳಿಕ ಉದ್ಘಾಟನೆಯ ದಿನಾಂಕ ನಿಗದಿ ಪಡಿಸುವುದಾಗಿ ಹೇಳಲಾಗಿತ್ತು.

ಕರಾವಳಿಯಲ್ಲಿ ಮುಂದುವರೆದಿದೆ ಮಳೆ, ಭಾರೀ ಕಡಲ ಕೊರೆತಕರಾವಳಿಯಲ್ಲಿ ಮುಂದುವರೆದಿದೆ ಮಳೆ, ಭಾರೀ ಕಡಲ ಕೊರೆತ

ಆದರೆ, ಇದೀಗ ಒಂದೆಡೆ ಮಳೆ ಆರಂಭವಾಗಿದೆ. ಅಲ್ಲದೇ ಮೇಲ್ಸೇತುವೆ ಕಾಮಗಾರಿ ಸಂಪೂರ್ಣವಾಗಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಉದ್ಘಾಟನೆ ಮಾಡಲಾಗಿದೆ.

Thokkottu flyover inaugurated by MP Nalin Kumar Kateel today

ಎಂಟು ವರ್ಷಗಳ ಹಿಂದೆ ಆರಂಭಗೊಂಡಿದ್ದ ತೊಕ್ಕೊಟ್ಟು ಮೇಲ್ಸೇತುವೆ ಕಾಮಗಾರಿ ಆರ್ಥಿಕ ಅಡಚಣೆಯಿಂದ ಅಮೆಗತಿಯಲ್ಲಿ ಸಾಗಿತ್ತು. ತೊಕ್ಕೊಟ್ಟು ಮೇಲ್ಸೇತುವೆ ಹಾಗೂ ಪಂಪ್ ವೆಲ್ ಮೇಲ್ಸೇತುವೆ ಕಾಮಗಾರಿ ವಿಳಂಬ ವಿಚಾರ ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು.

Thokkottu flyover inaugurated by MP Nalin Kumar Kateel today

ಕಾಮಗಾರಿ ವಿಳಂಬಕ್ಕೆ ಕಾರಣ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಎಂದು ಆರೋಪಿಸಲಾಗಿತ್ತು. ಈ ವಿಚಾರವನ್ನೇ ಮುಂದೆ ಮಾಡಿಕೊಂಡು ಕಾಂಗ್ರೆಸ್ ಹಾಗೂ ಜೆಡಿಎಸ್ ನಿಂದು ರಸ್ತೆಗಿಳಿದು ಪ್ರತಿಭಟನೆ ನಡೆಸಲಾಗಿತ್ತು. ತೊಕ್ಕೊಟ್ಟು ಮೇಲ್ಸೇತುವೆ ಕಾಮಗಾರಿ ನಡೆಸುವ ಸಂಸ್ಥೆಗೆ ಸಂಸದರ ಶಿಫಾರಸ್ಸಿನ ಮೇರೆಗೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೆಚ್ಚುವರಿ ಹಣವನ್ನು ಬಿಡುಗಡೆ ಮಾಡಿದ್ದರು. ಈಗ ಕಾಮಗಾರಿ ಪೂರ್ಣಗೊಂಡಿದೆ.

English summary
Mangaluru outskirt Thokkottu flyover inaugurated by MP Nalin Kumar Kateel on Thursday. Flyover works pending for long time. Finally work completed and inaugurated by MP Nalin Kumar Kateel.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X