ಬೆಂಗ್ರೆ ಬೀಚ್ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಿಸಲು ನಿರ್ಲಕ್ಷ್ಯ, ಎಎಸ್ಐ ಅಮಾನತು

ಮಂಗಳೂರು, ನವೆಂಬರ್. 30: ಮಂಗಳೂರಿನ ಬೆಂಗ್ರೆ ಬೀಚ್ ನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಿಸದೇ ಕರ್ತವ್ಯ ನಿರ್ಲಕ್ಷ್ಯ ತೋರಿದ ಪೊಲೀಸ್ ಅಧಿಕಾರಿಯೊಬ್ಬರನ್ನು ಅಮಾನತುಗೊಳಿಸಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿ ಡಾ. ರವಿಕಾಂತೇ ಗೌಡ ಆದೇಶ ಹೊರಡಿಸಿದ್ದಾರೆ.

ಮಂಗಳೂರು ನಗರ ಮಹಿಳಾ ಪೊಲೀಸ್ ಠಾಣೆಯಲ್ಲಿ ನವೆಂಬರ್ 26 ರಂದು 376(ಡಿ), 323, 354, 506 ಐಪಿಸಿಯಂತೆ ದಾಖಲಾದ ಪ್ರಕರಣದಲ್ಲಿ ಸಂತ್ರಸ್ಥೆ ಯುವತಿ ನವೆಂಬರ್. 18 ರಂದು ತೋಟ ಬೆಂಗ್ರೆ ಪರಿಸರದಲ್ಲಿ ಯುವಕರಿಂದ ನಡೆದ ಲೈಂಗಿಕ ದೌರ್ಜನ್ಯದ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ನವೆಂಬರ್ 20 ರಂದು ದೂರು ನೀಡಲು ಹೋಗಿದ್ದರು.

ಆದರೆ ಅಲ್ಲಿ ಕರ್ತವ್ಯದಲ್ಲಿದ್ದ ಎಎಸ್ಐ ರಘುರಾಮ ಹೆಗ್ಡೆಯವರು ಘಟನೆಯ ಕುರಿತು ತಕ್ಷಣಕ್ಕೆ ದೂರನ್ನು ದಾಖಲಿಸಲು ಮಾಡಲು ನಿರಾಕರಿಸಿ, ಘಟನೆ ಎಲ್ಲಿ ಸಂಭವಿಸಿದೆಯೋ ಅದೇ ವ್ಯಾಪ್ತಿಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುವಂತೆ ಸೂಚಿಸಿದ್ದಾರೆ.

Thota Bengre gang rape case:ASI suspended

ಸಾಮೂಹಿಕ ಅತ್ಯಾಚಾರದಂತಹ ಘೋರ ಘಟನೆಯ ಪ್ರಕರಣ ದಾಖಲಿಸದೇ ಸಂತ್ರಸ್ಥೆಯನ್ನು ಹಿಂದೆ ಕಳುಹಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಘುರಾಮ ಹೆಗ್ಡೆ ಅವರನ್ನು ಕರ್ತವ್ಯ ನಿರ್ಲಕ್ಷ ಆರೋಪದಡಿ ಸೇವೆಯಿಂದ ಅಮಾನತುಗೊಳಿಸಿ, ವಿಚಾರಣೆಗೆ ಒಳಪಡಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ರವಿಕಾಂತೇ ಗೌಡ ಆದೇಶಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+