ಕದ್ರಿ: ಕಾಲೇಜು ವಿದ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್ ಗಿರಿ, ಮೂವರು ಪೊಲೀಸ್‌ ವಶಕ್ಕೆ

ಮಂಗಳೂರು, ಜನವರಿ 19: ಮಂಗಳೂರು ನಗರದ ಕದ್ರಿ ಪಾರ್ಕ್‌ ಬಂದಿದ್ದ ಕಾಲೇಜು ವಿದ್ಯಾರ್ಥಿಗಳ ಮೇಲೆ ಇಂದು ಬೆಳಗ್ಗೆ ನೈತಿಕ ಪೊಲೀಸ್ ಗಿರಿ ನಡೆದಿದ್ದು, ಕದ್ರಿ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಅಪ್ರಾಪ್ತ ಸೇರಿದಂತೆ ಮೂವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ನೈತಿಕ ಪೊಲೀಸ್ ಗಿರಿ ನಡೆಸಿದ ಆರೋಪಿಗಳಾದ ಬಂಟ್ವಾಳ ನಿವಾಸಿಗಳಾದ ನಿತಿನ್ , ಹರ್ಷ ಸೇರಿದಂತೆ ಪೆರ್ಮುದೆಯ ಕಾನೂನಿನ ಸಂಘರ್ಷಕ್ಕೊಳಗಾದ ಬಾಲಕನೊಬ್ಬನನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

Three Accused Arrested By Kadri Police Due To Moral Policing In Mangaluru

ನಂತೂರಿನ ಕಾಲೇಜಿನಲ್ಲಿ ಜರ್ನಲಿಸಂ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ ಅಖಿಲ್ ಚಾಕೋ ಹಾಗೂ ದೇರಳಕಟ್ಟೆಯ ಕಾಲೇಜೊಂದರಲ್ಲಿ ನರ್ಸಿಂಗ್ ಮಾಡುತ್ತಿದ್ದ ವಿದ್ಯಾರ್ಥಿನಿಯ ಮೇಲೆ ತಂಡವೊಂದು ನೈತಿಕ ಪೊಲೀಸ್ ಗಿರಿ ನಡೆಸಿದೆ. ಇಂದು ಬೆಳಗ್ಗೆ ದೇರಳಕಟ್ಟೆಯಿಂದ ಈ ಜೋಡಿ ಬಸ್‌ನಲ್ಲಿ ಆಗಮಿಸಿ ಜ್ಯೋತಿಯಲ್ಲಿ ಇಳಿದಿದೆ.

ಬಸ್‌ನಲ್ಲಿದ್ದಾಗಲೇ ಹಿಂಬಾಲಿಸಿಕೊಂಡು ಬಂದ ಐದಾರು ಮಂದಿಯ ಯುವಕರ ತಂಡ ಇವರು ಕದ್ರಿ ಪಾರ್ಕ್‌ಗೆ ಬರುತ್ತಿದ್ದಾಗ ಪಾರ್ಕ್ ರಸ್ತೆಯಲ್ಲೇ ತಡೆದು ನೈತಿಕ ಪೊಲೀಸ್ ಗಿರಿ ನಡೆಸಿದೆ. ಕದ್ರಿ ಪಾರ್ಕ್ ರಸ್ತೆಯಲ್ಲಿ ಜೋಡಿಯನ್ನು ತಡೆದು ವಿಚಾರಿಸಿದ ಯುವಕರ ತಂಡ ಹಲ್ಲೆಗೆತ್ನಿಸಿದೆ. ಈ ವೇಳೆ ಜೋಡಿ ರಿಕ್ಷಾದಲ್ಲಿ ಹೋಗಲು ಯತ್ನಿಸಿದಾಗ ಮತ್ತೆ ತಂಡ ಅವರನ್ನು ಎಳೆದಾಡಿದೆ. ಆಗ ಸ್ಥಳದಲ್ಲಿ ಜನರು ಜಮಾಯಿಸಿದ್ದಾರೆ.

ಈ ಬಗ್ಗೆ ಮಾಹಿತಿ ಪಡೆದ ಕದ್ರಿ ಠಾಣಾ ಪಿಎಸ್ಐ ಉಮೇಶ್ ಕುಮಾರ್ ಹಾಗೂ ತಂಡ ಘಟನೆ ನಡೆದ ಐದೇ ನಿಮಿಷಕ್ಕೆ ಸ್ಥಳಕ್ಕೆ ದೌಡಾಯಿಸಿದ್ದಾರೆ. ವಿದ್ಯಾರ್ಥಿಗಳಿಬರನ್ನು ರಕ್ಷಿಸಿ ಕಾನೂನಿನ ಸಂಘರ್ಷಕ್ಕೊಳಗಾದ ಬಾಲಕ ಸೇರಿದಂತೆ ಮೂವರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ನೈತಿಕ ಪೊಲೀಸ್ ಗಿರಿ ನಡೆಸಿದ ತಂಡದಲ್ಲಿ ಮತ್ತೋರ್ವ ಅಪ್ರಾಪ್ತ ಬಾಲಕನಿದ್ದ ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ಇನ್ನುಳಿದ ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಈ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+