ವಿಷ ಪ್ರಸಾದ ದುರಂತ: ಮಾನವೀಯತೆ ಮೆರೆದ ಆಳ್ವಾಸ್
ಮಂಗಳೂರು, ಡಿಸೆಂಬರ್ 19: ಸುಳ್ವಾಡಿ ಗ್ರಾಮದ ಮಾರಮ್ಮ ದೇವಸ್ಥಾನದಲ್ಲಿ ವಿಷಪ್ರಸಾದ ಸೇವಿಸಿ ಸಾವನ್ನಪ್ಪಿದ್ದ ಕೃಷ್ಣನಾಯ್ಕ್ -ಮೈಲಿಬಾಯಿ ದಂಪತಿಯ ಮನೆಗೆ ಮಂಗಳವಾರ ಆಳ್ವಾಸ್ ಪದವಿ ಕಾಲೇಜಿನ ಪ್ರಾಂಶುಪಾಲ ಕುರಿಯನ್ ಮತ್ತು ತಂಡ ಭೇಟಿ ನೀಡಿ 1 ಲಕ್ಷ ರೂಪಾಯಿ ಹಣ ನೀಡಿದ್ದಾರೆ.
ಈ ಘೋರ ದುರಂತದಲ್ಲಿ ಮೃತಪಟ್ಟ ಕೃಷ್ಣನಾಯ್ಕ್ -ಮೈಲಿಬಾಯಿ ದಂಪತಿಯ ಮೂವರು ಮಕ್ಕಳಿಗೆ ಉನ್ನತ ಶಿಕ್ಷಣ ಪಡೆದು ಉದ್ಯೋಗಕ್ಕೆ ಸೇರುವ ತನಕ ಉಚಿತ ಶಿಕ್ಷಣ, ಹಾಸ್ಟೆಲ್ ವ್ಯವಸ್ಥೆ ಹಾಗೂ ಉದ್ಯೋಗ ಕಲ್ಪಿಸುವ ಜವಬ್ದಾರಿಯನ್ನು ಸಂಸ್ಥೆಯ ಅಧ್ಯಕ್ಷ ಮೋಹನ್ ಆಳ್ವ ಅವರು ಹೊತ್ತುಕೊಂಡಿದ್ದು, ಮೂಡುಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಈ ಮಾನವೀಯ ಕೊಡುಗೆಯನ್ನು ಮಕ್ಕಳು ಒಪ್ಪಿದ್ದಾರೆ ಎಂದು ಹೇಳಲಾಗಿದೆ.
ದುರಂತದಲ್ಲಿ ಮೃತಪಟ್ಟ ದಂಪತಿಯ ಹಿರಿಯ ಮಗಳು ರಾಣಿಬಾಯಿ ಬಿಎಸ್ಸಿ , ಎರಡನೇ ಮಗಳು ಪ್ರಿಯಾಬಾಯಿ ಬಿಎಸ್ ಸಿ ನರ್ಸಿಂಗ್ ಹಾಗೂ ಮಗ ರಾಜೇಶ್ ನಾಯ್ಕ್ ಅವರ ಪಿಯುಸಿ ವ್ಯಾಸಂಗವನ್ನು ಆಳ್ವಾಸ್ ಶಿಕ್ಷ ಣ ಪ್ರತಿಷ್ಠಾನದಲ್ಲಿ ಉಚಿತವಾಗಿ ನೀಡುವ ಬಗ್ಗೆ ಮನವರಿಕೆ ಮಾಡಿದ್ದು ಅದಕ್ಕೆ ಅವರೂ ಸಮ್ಮತಿ ಸೂಚಿಸಿದ್ದಾರೆ.

ಪದವಿ ಕಾಲೇಜಿನ ಪ್ರಾಂಶುಪಾಲ ಡಾ ಕುರಿಯನ್ ಆಳ್ವಾಸ್ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲ ಡಾ ಯತಿಕುಮಾರ್ ಸ್ವಾಮಿ ಗೌಡ , ಕಾಮರ್ಸ್ ಡೀನ್ ಪ್ರಶಾಂತ್ ಹಾಗೂ ಉಪನ್ಯಾಸಕ ಅಂಬರೀಶ್ ಅವರು ನಿಯೋಗ ಕೃಷ್ಣನಾಯ್ಕ್-ಮೈಲಿಬಾಯಿ ದಂಪತಿಯ ಮನೆಗೆ ಭೇಟಿ ನೀಡಿ ಮಕ್ಕಳಿಗೆ ಸಾಂತ್ವನ ಹೇಳಿದರು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications