ಮೂರು ಸಂಸದರನ್ನು ಕೊಟ್ಟು ಗಮನ ಸೆಳೆದ ಸುಳ್ಯ

ಮಂಗಳೂರು ಮೇ 24: ಲೋಕಸಭಾ ಕ್ಷೇತ್ರದ ಫಲಿತಾಂಶ ಹೊರಬಿದ್ದಿದೆ. ದೇಶದೆಲ್ಲೆಡೆ ಬಿಜೆಪಿ ಜಯಭೇರಿ ಬಾರಿಸಿದೆ. ಬಿಜೆಪಿ ಅಭ್ಯರ್ಥಿಗಳು ಭಾರಿ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಈ ನಡುವೆ ಸುಳ್ಯ ವಿಧಾನಸಭಾ ಈ ಲೋಕಸಭಾ ಚುನಾವಣೆಯಲ್ಲಿ ದೇಶದ ಗಮನ ಸೆಳೆದಿದೆ. ಈ ವಿಧಾನ ಸಭಾ ಕ್ಷೇತ್ರದ 3 ಮಂದಿ ಬಿಜೆಪಿ ಅಭ್ಯರ್ಥಿಗಳು ಲೋಕಸಭಾ ಚುನಾವಣೆಯಲ್ಲಿ ಭಾರೀ ಮತಗಳ ಅಂತರದಿಂದ ಗೆಲುವು ಸಾಧಿಸಿ ಗಮನ ಸೆಳೆದಿದ್ದಾರೆ.

ಈ ವಿಧಾನ ಸಭಾ ಕ್ಷೇತ್ರದ ನಳಿನ್ ಕುಮಾರ್ ಕಟೀಲ್, ಶೋಭಾ ಕರಂದ್ಲಾಜೆ ಮತ್ತು ಡಿ.ವಿ. ಸದಾನಂದ ಗೌಡ ಈ ಮೂರು ಮಂದಿ ನಾಯಕರು ಭರ್ಜರಿ ಗೆಲುವು ಸಾಧಿಸಿದ್ದಾರೆ. ದ.ಕ.ಲೋಕಸಭಾ ಕ್ಷೇತ್ರದ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್, ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಶೋಭಾ ಕರಂದ್ಲಾಜೆ, ಬೆಂಗಳೂರು ಉತ್ತರ ಕ್ಷೇತ್ತದ ಅಭ್ಯರ್ಥಿ ಡಿ.ವಿ.ಸದಾನಂದ ಗೌಡ ಸುಳ್ಯ ಕ್ಷೇತ್ರದವರಾಗಿದ್ದು, ಬೇರೆ ಬೇರೆ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸಿದ್ದರು. ಈ ಮೂವರೂ ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ.

 Three MPs belongs to Sullia legislative assembly constituency

ಸುಳ್ಯ ತಾಲ್ಲೂಕಿನ ಮಂಡೆಕೋಲು ಗ್ರಾಮದ ದೇವರಗುಂಡದವರಾದ ಸದಾನಂದ ಗೌಡ ನಾಲ್ಕನೆ ಬಾರಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಕಡಬ ತಾಲ್ಲೂಕಿನ ಪಾಲ್ತಾಡಿ ಕುಂಜಾಡಿಯವರಾದ ನಳಿನ್ ಕುಮಾರ್ ಮೂರನೇ ಬಾರಿ ದಕ್ಷಿಣ ಕನ್ನಡ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಕಡಬ ತಾಲೂಕಿನ ಚಾರ್ವಾಕದವರಾದ ಶೋಭಾ ಕರಂದ್ಲಾಜೆ ಎರಡನೇ ಬಾರಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧೆಗಿಳಿದಿದ್ದರು. ಸುಳ್ಯ ತಾಲ್ಲೂಕಿನವರಾದ ಈ ಮೂವರೂ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ದೆಹಲಿಯತ್ತ ಹೆಜ್ಜೆ ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಸುಳ್ಯ ಬಿಜೆಪಿಯಲ್ಲಿ ಸಂಭ್ರಮ ಇನ್ನಷ್ಟು ಹೆಚ್ಚಿಸಿದೆ. ದೇಶದ ಗಮನ ಸೆಳೆದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+