ಆ.29ರಂದು ಮಂಗಳೂರಿಗೆ ಟಿಬೆಟಿಯನ್ ಆಧ್ಯಾತ್ಮ ಗುರು ದಲೈಲಾಮ
ಮಂಗಳೂರು, ಆಗಸ್ಟ್ 27: ಟಿಬೆಟಿಯನ್ ಆಧ್ಯಾತ್ಮ ಗುರು ದಲೈಲಾಮ ಆಗಸ್ಟ್ 29ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ದಲೈಲಾಮ ಆಗಮನದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಅಧ್ಯಕ್ಷತೆಯಲ್ಲಿ ಪೂರ್ವಸಿದ್ಧತಾ ಸಭೆ ನಡೆಸಲಾಗಿದ್ದು, ಭದ್ರತೆ ಹಾಗೂ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ.
ಆಗಸ್ಟ್ 29 ರಂದು ಮಧ್ಯಾಹ್ನ 12.20ಕ್ಕೆ ವಿಮಾನ ನಿಲ್ದಾಣಕ್ಕೆ ಆಗಮಿಸುವ ಅವರು ನಗರದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಆಗಸ್ಟ್ 30 ರಂದು ನಗರದ ಫಾದರ್ ಮುಲ್ಲರ್ ಸಭಾಂಗಣದಲ್ಲಿ ನಡೆಯುವ ಅಖಿಲ ಭಾರತ ಕ್ಯಾಥೊಲಿಕ್ ಶಾಲಾ ಒಕ್ಕೂಟದ ರಾಷ್ಟ್ರೀಯ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಆಗಸ್ಟ್ 31 ರಂದು ಬೆಳಿಗ್ಗೆ 7 ಗಂಟೆಗೆ ವಿಮಾನದ ಮೂಲಕ ಅವರು ಬೆಂಗಳೂರಿಗೆ ತೆರಳಲಿದ್ದಾರೆ.

ದಲೈಲಾಮ ಮಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಭದ್ರತೆ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ. ದೇಶದೊಳಗೆ ಒಳ ನುಸುಳಿರುವ ಉಗ್ರರು ವಿಧ್ವಂಸಕ ಕೃತ್ಯ ಎಸಗುವ ಆತಂಕವಿರುವ ಹಾಗೂ ದಲೈಲಾಮ ಅವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರಿನ ಎಲ್ಲಾ ಆಯಕಟ್ಟಿನ ಸ್ಥಳಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications