ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದಕ್ಷಿಣ ಕನ್ನಡದಲ್ಲಿ ಕೈ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಗಣನೀಯ ಹೆಚ್ಚಳ

|
Google Oneindia Kannada News

ಮಂಗಳೂರು, ಮಾರ್ಚ್ 15:ಲೋಕಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾಜಕೀಯ ಪಕ್ಷಗಳ ಚಟುವಟಿಕೆ ಚುರುಕಾಗಿದೆ. ಹಾಗೆಯೇ ಕಾಂಗ್ರೆಸ್‌ ಪಾಳೆಯದಲ್ಲಿ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದೆ.

ಈ ನಡುವೆ ಟಿಕೆಟ್ ಗಾಗಿ ಲಾಬಿ ಜೋರಾಗುತ್ತಿದೆ. ಉಡುಪಿ -ಚಿಕ್ಕಮಗಳೂರು ಕ್ಷೇತ್ರ ಜೆಡಿಎಸ್ ಪಾಲಾದ ಹಿನ್ನೆಲೆಯಲ್ಲಿ ಟಿಕೆಟ್ ಆಕಾಂಕ್ಷಿಗಳಾಗಿದ್ದ ಕಾಂಗ್ರೆಸ್‌ ನಾಯಕರೆಲ್ಲ ದಕ್ಷಿಣ ಕನ್ನಡದತ್ತ ಮುಖ ಮಾಡಿದ್ದಾರೆ.

ಬಿಜೆಪಿಯಲ್ಲಿ ಹಾಲಿ ಸಂಸದ ನಳಿನ್ ಕುಮಾರ್‌ ಕಟೀಲು ಮೂರನೇ ಬಾರಿಗೆ ಕಣಕ್ಕಿಳಿಯುವುದು ಬಹುತೇಕ ಖಚಿತಗೊಂಡಿದೆ. ಆದರೆ ಕಾಂಗ್ರೆಸ್‌ನಲ್ಲಿ ಅಭ್ಯರ್ಥಿ ಆಯ್ಕೆ ಕಸರತ್ತು ಮುಂದುವರಿದಿದ್ದು, ಕುತೂಹಲಕ್ಕೆ ಎಡೆ ಮಾಡಿದೆ. ಬಿಜೆಪಿ ಅಭ್ಯರ್ಥಿ ಹೆಸರು ಇದೇ ಬರುವ ಮಾರ್ಚ್ 18ರಂದು ಘೋಷಣೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ಬಿಜೆಪಿ ಟಿಕೆಟ್ ಗಾಗಿ ಲಾಭಿ ಆರಂಭಿಸಿದ ಸತ್ಯಜಿತ್ ಸುರತ್ಕಲ್ಬಿಜೆಪಿ ಟಿಕೆಟ್ ಗಾಗಿ ಲಾಭಿ ಆರಂಭಿಸಿದ ಸತ್ಯಜಿತ್ ಸುರತ್ಕಲ್

ಈ ನಡುವೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿದೆ. ಮಾಜಿ ಸಚಿವ ರಮಾನಾಥ ರೈ, ಕಾಂಗ್ರೆಸ್ ಹಿರಿಯ ಮುಖಂಡ ಜಿ ಜನಾರ್ಧನ ಪೂಜಾರಿ , ರಾಜ್ಯಸಭಾ ಸದಸ್ಯ ಬಿ.ಕೆ. ಹರಿಪ್ರಸಾದ್‌, ವಿಧಾನ ಪರಿಷತ್‌ ಸದಸ್ಯ ಐವನ್ ಡಿಸೋಜಾ, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಯುವ ನಾಯಕ ಮಿಥುನ್ ರೈ ಹಾಗೂ ಉದ್ಯಮಿ ಯು.ಕೆ. ಮೋನು , ಎಸ್‌ಕೆಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಎಂ.ಎನ್‌. ರಾಜೇಂದ್ರ ಕುಮಾರ್‌ ಹೆಸರು ಆಕಾಂಕ್ಷಿಗಳ ಪಟ್ಟಿಯಲ್ಲಿ ಮುಂಚೂಣಿಯಲ್ಲಿದೆ.

ಟಿಕೆಟ್ ಗಾಗಿ ಪೈಪೋಟಿ ಹೆಚ್ಚು

ಟಿಕೆಟ್ ಗಾಗಿ ಪೈಪೋಟಿ ಹೆಚ್ಚು

ಕಾಂಗ್ರೆಸ್‌ ಟಿಕೆಟ್ ಪ್ರಬಲ ಆಕಾಂಕ್ಷಿಯಾಗಿರುವ ಬಿ.ಕೆ.ಹರಿಪ್ರಸಾದ್‌ ಇಲ್ಲಿ ಅವಕಾಶ ಕೈ ತಪ್ಪಿದರೆ, ಉಡುಪಿ ಕ್ಷೇತ್ರವನ್ನು ಆಯ್ದುಕೊಳ್ಳಲು ಬಯಸಿದ್ದರು. ಆದರೆ ಈಗ ಉಡುಪಿ ಕ್ಷೇತ್ರ ಕೈ ತಪ್ಪಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಟಿಕೆಟ್ ಗಾಗಿ ಪೈಪೋಟಿ ಹೆಚ್ಚಾಗಿದೆ. ಆದರೆ ಈ ನಡುವೆ ಮಾಜಿ ಸಚಿವ ಬಿ. ರಮಾನಾಥ ರೈ ಅವರ ಹೆಸರು ಕೂಡ ಮುಂಚೂಣಿಯಲ್ಲಿದೆ.

 ರಾಜೇಂದ್ರ ಕುಮಾರ್ ಗೆ ಟಿಕೆಟ್ ನೀಡಿದರೆ ಬಂಡಾಯ ಸ್ಪರ್ಧೆ ಖಚಿತ:ಜನಾರ್ದನ ಪೂಜಾರಿ ರಾಜೇಂದ್ರ ಕುಮಾರ್ ಗೆ ಟಿಕೆಟ್ ನೀಡಿದರೆ ಬಂಡಾಯ ಸ್ಪರ್ಧೆ ಖಚಿತ:ಜನಾರ್ದನ ಪೂಜಾರಿ

 ದಕ್ಷಿಣ ಕನ್ನಡದಿಂದ ಪ್ರಯತ್ನ

ದಕ್ಷಿಣ ಕನ್ನಡದಿಂದ ಪ್ರಯತ್ನ

ಮಾಜಿ ಸಚಿವ ವಿನಯ ಕುಮಾರ್‌ ಸೊರಕೆ ಕಾಪು ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಉಡುಪಿಯಿಂದ ಪ್ರಬಲ ಆಕಾಂಕ್ಷಿಯಾಗಿದ್ದರು. ಉಡುಪಿ ಚಿಕ್ಕಮಗಳೂರು ಕ್ಷೇತ್ರ ಜೆಡಿಎಸ್ ಪಾಲಾದ ಹಿನ್ನೆಲೆಯಲ್ಲಿ ಈಗ ದಕ್ಷಿಣ ಕನ್ನಡದಿಂದ ಪ್ರಯತ್ನ ನಡೆಸಬೇಕಾಗಿದೆ.

 ಮೈಸೂರು- ಕೊಡಗು ಲೋಕಸಭಾ ಕ್ಷೇತ್ರ:ಅಭ್ಯರ್ಥಿಗಳ ಆಯ್ಕೆ ವಿಳಂಬವೇಕೆ? ಮೈಸೂರು- ಕೊಡಗು ಲೋಕಸಭಾ ಕ್ಷೇತ್ರ:ಅಭ್ಯರ್ಥಿಗಳ ಆಯ್ಕೆ ವಿಳಂಬವೇಕೆ?

 ಈ ಹೆಸರೂ ಕೇಳಿ ಬರುತ್ತಿದೆ

ಈ ಹೆಸರೂ ಕೇಳಿ ಬರುತ್ತಿದೆ

ಈ ನಡುವೆ ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಎಸ್‌ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷ ಎಂ.ಎನ್‌. ರಾಜೇಂದ್ರ ಕುಮಾರ್‌ ಹೆಸರು ದಕ್ಷಿಣ ಕನ್ನಡ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯಲ್ಲಿ ಈಗ ಪ್ರಬಲವಾಗಿ ಕೇಳಿ ಬರತೊಡಗಿದೆ.

 ಮೋದಿಗೆ ಹೊಗಳಿದ ಪೂಜಾರಿ

ಮೋದಿಗೆ ಹೊಗಳಿದ ಪೂಜಾರಿ

ರಾಜೇಂದ್ರ ಕುಮಾರ್ ಅವರ ವಿರುದ್ಧ ಬಿ ಜನಾರ್ಧನ ಪೂಜಾರಿ ಕಿಡಿಕಾರಿದ್ದು, ಒಂದು ವೇಳೆ ರಾಜೇಂದ್ರ ಕುಮಾರ್ ಗೆ ಕಾಂಗ್ರೆಸ್ ಟಿಕೆಟ್ ನೀಡಿದರೆ ಬಂಡಾಯವಾಗಿ ಸ್ಪರ್ಧೆಗೆ ಇಳಿಯುವ ಬೆದರಿಕೆ ಒಡ್ಡಿದ್ದಾರೆ. ಅದಲ್ಲದೇ ಪೂಜಾರಿ ಪ್ರಧಾನಿ ಮೋದಿ ಅವರನ್ನು ಹೊಗಳಿರುವುದು ಕಾಂಗ್ರೆಸ್ ಮುಖಂಡರಿಗೆ ನುಂಗಲಾರದ ತುತ್ತಾಗಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಕುತೂಹಲವನ್ನು ಇನ್ನಷ್ಟು ಹೆಚ್ಚಿಸಿದೆ.

English summary
Ticket aspirant in congress increased day by day in Dakshina kannada. Now congress facing problems to finalise candidate for Dakshina Kannada Loksabha Constituency.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X