ಮಿಥುನ್ ರೈಗೆ ಟಿಕೆಟ್ ನಿರಾಕರಣೆ: ಇಂದು ಎನ್ಎಸ್ ಯುಐ ಮುಖಂಡರ ರಾಜೀನಾಮೆ
ಮಂಗಳೂರು ಏಪ್ರಿಲ್ 18 : ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ಪಾಳಯದ ಯುವ ಮುಖಂಡರು ಬಂಡಾಯವೆದ್ದಿದ್ದಾರೆ. ಕಾಂಗ್ರೆಸ್ ಯುವ ಮುಖಂಡ ಮಿಥುನ್ ರೈಗೆ ಮುಲ್ಕಿ-ಮೂಡಬಿದರೆ ವಿಧಾನಸಭಾ ಕ್ಷೇತ್ರದ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಜಿಲ್ಲೆಯ ಕಾಂಗ್ರೆಸ್ ಯುವ ಮುಖಂಡರು ಹಾಗೂ ಎನ್ಎಸ್ ಯುಐ ಪದಾಧಿಕಾರಿಗಳು ಬಂಡಾಯದ ಬಾವುಟ ಹಾರಿಸಿದ್ದಾರೆ.
ಯುವ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಮಿಥುನ್ ರೈಗೆ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಎನ್ಎಸ್ ಯುಐ ಮುಖಂಡರು ಮಂಗಳೂರಿನಲ್ಲಿ ಮಾಧ್ಯಮ ಗೋಷ್ಠಿ ನಡೆಸಿ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ. ರಾಜೀನಾಮೆ ವಿಚಾರವಾಗಿ ಮಾತನಾಡಿದ ಎನ್ಎಸ್ ಯುಐ ರಾಜ್ಯ ಕಾರ್ಯದರ್ಶಿ ರೂಪೇಶ್ ರೈ, "ಯುವ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಮಿಥುನ್ ರೈ ಅವರಿಗೆ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎನ್ಎಸ್ ಯುಐ ನಾಯಕರು ಸಾಮೂಹಿಕ ರಾಜೀನಾಮೆ ನೀಡಲು ನಿರ್ಧರಿಸಿದ್ದೇವೆ," ಎಂದು ತಿಳಿಸಿದರು.

"ಕಾಂಗ್ರೆಸ್ ಜಿಲ್ಲಾಧ್ಯಕ್ಷರಿಗೆ ರಾಜೀನಾಮೆ ಸಲ್ಲಿಸುತ್ತೇವೆ. ಮಿಥುನ್ ರೈ ಯಾವ ಪಕ್ಷಕ್ಕೆ ಹೋದರೂ ನಾವು ಅವರ ಜೊತೆ ಹೋಗುತ್ತೇವೆ. ಮಿಥುನ್ ರೈ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ದರಾಗಿದ್ದೇವೆ," ಎಂದು ರೂಪೇಶ್ ರೈ ಸ್ಪಷ್ಟಪಡಿಸಿದರು.
ಕಾಂಗ್ರೆಸ್ ಪಾಳಯದ ಯುವ ಮುಖಂಡರು ಈಗ ಹೆೃಕಮಾಂಡ್ ವಿರುದ್ಧವೇ ತಿರುಗಿ ಬಿದ್ದಿದ್ದಾರೆ. ಕಾಂಗ್ರೆಸ್ ಪಾಳಯದಲ್ಲಿ ನಡೆಯುತ್ತಿರುವ ಈ ಬೆಳವಣಿಗೆ ಪಕ್ಷದ ನಾಯಕರಿಗೆ ಮುಜುಗರ ಮೂಡಿಸಿದೆ. ರಾಜೀನಾಮೆಯ ಒತ್ತಡ ಹೇರಿ ಮಿಥುನ್ ರೈಗೆ ಟಿಕೆಟ್ ಕೊಡಿಸಲು ಕೊನೆಯ ಹಂತದ ಪ್ರಯತ್ನ ನಡೆಸಿದ್ದಾರೆ.

ನಿನ್ನೆ ಕೂಡ ಯುವ ಕಾಂಗ್ರೆಸ್ ನ ಕೆಲ ಮುಖಂಡರು ಪತ್ರಿಕಾಗೋಷ್ಠಿ ನಡೆಸಿ ರಾಜೀನಾಮೆ ನೀಡುವ ಹೇಳಿಕೆ ನೀಡಿದ್ದರು. ಕಾಂಗ್ರೆಸ್ ಯುವ ಮುಖಂಡರ ಈ ಒತ್ತಡ ತಂತ್ರ ಎಷ್ಟು ಫಲಿಸಲಿದೆ ಎಂಬುದನ್ನು ಕಾದು ನೋಡಬೇಕಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications