ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಟಿಪ್ಪು ಜಯಂತಿಯಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ನವೆಂಬರ್ 9: ಮಂಗಳೂರಿನ ಟಿಪ್ಪು ಸುಲ್ತಾನ್ ಜಯಂತಿ ಆಚರಿಸುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿಷೇದಾಜ್ಞೆ ಜಾರಿ ಮಾಡಿ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ ಸೆಂಥಿಲ್ ಆದೇಶ ಹೊರಡಿಸಿದ್ದಾರೆ.

ಸರಕಾರದ ನಿರ್ದೇಶನದಂತೆ ಟಿಪ್ಪು ಸುಲ್ತಾನ್ ಜಯಂತಿ ಆಚರಣೆಯನ್ನು ನವೆಂಬರ್ 10ರಂದು ಮಂಗಳೂರಿನ ಜಿಲ್ಲಾಪಂಚಾಯಿತಿ ಸಭಾಂಗಣದಲ್ಲಿ ಆಚರಿಸಲು ನಿರ್ಧರಿಸಲಾಗಿದೆ. ಆದರೆ ಟಿಪ್ಪು ಜಯಂತಿ ಆಚರಣೆಗೆ ಹಿಂದೂಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಈ ಆದೇಶ ಹೊರಡಿಸಿದ್ದಾರೆ.

ಸ್ವಾತಂತ್ರ್ಯ ಯೋಧ ಟಿಪ್ಪು ಸುಲ್ತಾನ್ -ಜಯಂತಿ, ಆಚರಣೆ ಅಗತ್ಯವೇನು?ಸ್ವಾತಂತ್ರ್ಯ ಯೋಧ ಟಿಪ್ಪು ಸುಲ್ತಾನ್ -ಜಯಂತಿ, ಆಚರಣೆ ಅಗತ್ಯವೇನು?

ಜಿಲ್ಲೆಯಲ್ಲಿ ಕಾನೂನು, ಶಾಂತಿ ಸುವ್ಯಸ್ಥೆ ಕಾಪಾಡುವ ಉದ್ದೇಶದಿಂದ ನವೆಂಬರ್ 9ರ ಸಂಜೆ 6 ಗಂಟೆಯಿಂದ ನವೆಂಬರ್ 10 ಮದ್ಯರಾತ್ರಿ 12 ಗಂಟೆವರೆಗೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿಷೇದಾಜ್ಞೆ ಜಾರಿ ಮಾಡಿ, ಜಿಲ್ಲಾಧಿಕಾರಿ ಅವರು ಆದೇಶ ಹೊರಡಿಸಿದ್ದಾರೆ.

Tipu Sultan

ನಿಷೇದಾಜ್ಞೆ ಅವಧಿಯಲ್ಲಿ ಯಾವುದೇ ಮೆರವಣಿಗೆ, ಪ್ರತಿಭಟನೆ, ಮುಷ್ಕರಗಳನ್ನು ನಡೆಸುವಂತಿಲ್ಲ. ಯಾವುದೇ ಮಾರಕಾಸ್ತ್ರಗಳನ್ನು ಹಿಡಿದು ಓಡಾಡುವಂತಿಲ್ಲ. ಯಾವುದೇ ರೀತಿಯ ಪ್ರಚಾರಗಳನ್ನು, ಭಿತ್ತಿ ಪತ್ರ ಹಂಚುವ ಮೂಲಕ ವಾಹನದಲ್ಲಿ ಪ್ರಚಾರ, ಘೋಷಣೆ, ಭಾಷಣ ಮಾಡುವಂತಹ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ.

ಸರಕಾರದಿಂದ ಆಯೋಜಿಸಿದ ಕಾರ್ಯಕ್ರಮಗಳು, ಮದುವೆ, ಮುಂಜಿ, ಶವ ಸಂಸ್ಕಾರ, ಸಂತೆ, ಜಾತ್ರೆ ಕಾರ್ಯಕ್ರಮಗಳಿಗೆ ನಿಷೇಧಾಜ್ಞೆ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

English summary
In the wake of Tipu jayanti on November 10, 2018, section 144 has been imposed in Dakshina Kannada district from 9th evening.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X