ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸುರತ್ಕಲ್ ಟೋಲ್ ಗೇಟ್ ಮುಚ್ಚುವಂತೆ ಒತ್ತಾಯಿಸಿ ಅಹೋರಾತ್ರಿ ಧರಣಿ ಸತ್ಯಾಗ್ರಹ

|
Google Oneindia Kannada News

ಮಂಗಳೂರು, ಅಕ್ಟೋಬರ್. 22: ಮಂಗಳೂರು ಹೊರವಲಯದ ಸುರತ್ಕಲ್ ಟೋಲ್ ಗೇಟ್ ಸುಂಕ ಸಂಗ್ರಹದ ಗುತ್ತಿಗೆ ನವೀಕರಿಸುತ್ತಿರುವ ಹೆದ್ದಾರಿ ಪ್ರಾಧಿಕಾರದ ನಿಲುವು ವಿರೋಧಿಸಿ ಹಾಗೂ ಅಕ್ಟೋಬರ್ 30ರ ಒಳಗೆ ಈ ಟೋಲ್ ಗೇಟ್ ಮುಚ್ಚುವಂತೆ ಒತ್ತಾಯಿಸಿ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಮುಖಂಡರು ಅನಿರ್ಧಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.

ಅಕ್ಟೋಬರ್ 30ಕ್ಕೆ ಸುರತ್ಕಲ್ ಟೋಲ್ ಗೇಟ್‌ನ ಟೋಲ್ ಸಂಗ್ರಹದ ಗುತ್ತಿಗೆಯ ಅವಧಿ ಮುಕ್ತಾಯಗೊಳ್ಳುತ್ತಿದೆ. ಆ ನಂತರ ಇದರ ಗುತ್ತಿಗೆಯನ್ನು ನವೀಕರಿಸುವುದಿಲ್ಲ ಎಂದು ಹೆದ್ದಾರಿ ಪ್ರಾಧಿಕಾರದ ಸಭೆಯಲ್ಲಿ ಸಂಸದರು ಭರವಸೆ ನೀಡಿದ್ದರು.

ಸುರತ್ಕಲ್ ಟೋಲ್ ಗೇಟ್ ಮುಚ್ಚುವಂತೆ ಒತ್ತಾಯಿಸಿ ಬೃಹತ್ ಪ್ರತಿಭಟನೆಸುರತ್ಕಲ್ ಟೋಲ್ ಗೇಟ್ ಮುಚ್ಚುವಂತೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

ಆದರೆ ಈಗ ಮತ್ತೊಮ್ಮೆ ಟೋಲ್ ಗುತ್ತಿಗೆ ನವೀಕರಿಸುವ ಟೆಂಡರ್ ಪ್ರಕ್ರಿಯೆಗೆ ಹೆದ್ದಾರಿ ಪ್ರಾಧಿಕಾರ ಚಾಲನೆ ನೀಡಿದೆ. ಎಂದು ಪ್ರತಿಭಟನಾಕಾರರರು ಆರೋಪಿಸಿದ್ದಾರೆ.

Protest against Surathkal Toll gate

ನಿಯಮಗಳನ್ನು ಪಾಲಿಸದ ಸುರತ್ಕಲ್ ಟೋಲ್ ಗೇಟ್ ವಿರುದ್ಧ ಪ್ರತಿಭಟನೆನಿಯಮಗಳನ್ನು ಪಾಲಿಸದ ಸುರತ್ಕಲ್ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ

ಇದೊಂದು ಅಕ್ರಮ ಟೋಲ್ ಗೇಟ್ ಆಗಿದ್ದು, ಈ ಅಕ್ರಮವನ್ನು ಮುಂದುವರಿಸಲು ಹೆದ್ದಾರಿ ಪ್ರಾಧಿಕಾರ ಮುಂದಾಗಿದೆ. ಈ ಪ್ರಕ್ರಿಯೆಗೆ ಸಂಸದ ನಳಿನ್ ಕುಮಾರ್ ಕಟೀಲ್ ನೇರ ಕಾರಣ ಎಂದು ಧರಣಿನಿರತರು ಆರೋಪಿಸಿದ್ದಾರೆ.

Protest against Surathkal Toll gate

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶುರುವಾಯಿತು ಟೋಲ್ ಸಂಗ್ರಹರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶುರುವಾಯಿತು ಟೋಲ್ ಸಂಗ್ರಹ

ಅದಲ್ಲದೆ ಕೂಳೂರು ಹೊಸಸೇತುವೆ ನಿರ್ಮಾಣ ಆಗುವವರಗೆ ಹಳೆ ಸೇತುವೆಯಲ್ಲಿ ಸಂಚಾರ ನಿಷೇಧಿಸದಂತೆ ಆಗ್ರಹಿಸಿ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಮುಖಂಡರು ಒತ್ತಾಯಿಸಿದ್ದಾರೆ.

English summary
Toll gate horata samiti has began protest demanding the closure of the Surathkal Toll gate plaza
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X