ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗಳೂರು ಬೀಚ್‌ಗಳಿಗೆ ಪ್ರವಾಸಿಗರ ಭೇಟಿಗೆ ನಿಷೇಧ

|
Google Oneindia Kannada News

ಮಂಗಳೂರು, ಡಿಸೆಂಬರ್ 30: ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಕೋವಿಡ್ ಹರಡುವಿಕೆ ತಡೆಯಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಮುಂದಾಗಿದೆ. ಜಿಲ್ಲೆಯ ಬೀಚ್‌ಗಳಿಗೆ ಜನವರಿ 2ರ ತನಕ ಪ್ರವಾಸಿಗರ ಭೇಟಿಯನ್ನು ನಿಷೇಧಿಸಿದೆ.

ಜಿಲ್ಲಾಧಿಕಾರಿ ಕೆ. ವಿ. ರಾಜೇಂದ್ರ ಈ ಕುರಿತು ಆದೇಶ ಹೊರಡಿಸಿದ್ದಾರೆ. ಡಿಸೆಂಬರ್ 31ರ 12 ಗಂಟೆಯಿಂದ ಜನವರಿ 2ರ ಮಧ್ಯಾಹ್ನ 12 ಗಂಟೆಯ ತನಕ ಪ್ರವಾಸಿಗರು ಬೀಚ್‌ಗಳಿಗೆ ಭೇಟಿ ನೀಡುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ರಾಮನಗರದ ಪ್ರವಾಸಿ ತಾಣಗಳಿಗೆ ಭೇಟಿ ನಿಷೇಧ ರಾಮನಗರದ ಪ್ರವಾಸಿ ತಾಣಗಳಿಗೆ ಭೇಟಿ ನಿಷೇಧ

ಉಳ್ಳಾಲ, ಸೋಮೇಶ್ವರ, ಮೊಗವೀರಪಟ್ಣ, ಪಣಂಬೂರು, ತಣ್ಣೀರುಬಾವಿ, ಸಸಿಹಿತ್ಲು ಮತ್ತು ಸುರತ್ಕಲ್ ಸೇರಿದಂತೆ ಬೀಚ್‌ಗಳಿಗೆ ಪ್ರವಾಸಿಗರು ಭೇಟಿ ನೀಡುವಂತಿಲ್ಲ. ಸ್ಥಳೀಯರು ಮತ್ತು ಮೀನುಗಾರರಿಗೆ ಈ ಆದೇಶ ಅನ್ವಯವಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಹೊಸ ವರ್ಷಾಚರಣೆ ಸಂಭ್ರಮಕ್ಕೆ ನಿಯಮ ವಿಧಿಸಿಲ್ಲ: ಕೋಲಾರ ಜಿಲ್ಲಾಧಿಕಾರಿಹೊಸ ವರ್ಷಾಚರಣೆ ಸಂಭ್ರಮಕ್ಕೆ ನಿಯಮ ವಿಧಿಸಿಲ್ಲ: ಕೋಲಾರ ಜಿಲ್ಲಾಧಿಕಾರಿ

Tourist Visiting Beaches Banned From December 31

ರೂಪಾಂತರ ಕೋವಿಡ್ ಸೋಂಕು ಹರಡುವಿಕೆ ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ. ರಜೆ, ಹೊಸ ವರ್ಷದ ಸಂಭ್ರಮದ ಹಿನ್ನಲೆಯಲ್ಲಿ ಸಾವಿರಾರು ಜನರು ಬೀಚ್‌ಗಳಿಗೆ ಭೇಟಿ ನೀಡುತ್ತಾರೆ. ಇದನ್ನು ತಡೆಯಲು ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ.

ಕೋವಿಡ್-19 ಮಾರ್ಗಸೂಚಿ ಜನವರಿ 31ರವರೆಗೂ ವಿಸ್ತರಣೆಕೋವಿಡ್-19 ಮಾರ್ಗಸೂಚಿ ಜನವರಿ 31ರವರೆಗೂ ವಿಸ್ತರಣೆ

ಮಂಗಳವಾರದ ವರದಿ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 35 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಜಿಲ್ಲೆಯಲ್ಲಿನ ಒಟ್ಟು ಪ್ರಕರಣಗಳ ಸಂಖ್ಯೆ 32,818. ಸಕ್ರಿಯ ಪ್ರಕರಣಗಳ ಸಂಖ್ಯೆ 304.

English summary
Dakshina Kannada district administration banned tourist visiting beaches from December 31st to January 2, 12 pm.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X