ಮಂಗಳೂರಿಗೆ ಭೇಟಿ ನೀಡುವವರ ಗಮನಕ್ಕೆ: ಈ ರಸ್ತೆ ಏಪ್ರಿಲ್ 30ರ ತನಕ ಬಂದ್
ಮಂಗಳೂರು, ಏಪ್ರಿಲ್ 01: ಕರ್ನಾಟಕದ ಕರಾವಳಿ ನಗರ ಮಂಗಳೂರಿಗೆ ಭೇಟಿ ನೀಡುವವರು ತಪ್ಪದೇ ಈ ಸುದ್ದಿಯನ್ನು ಓದಿ. ಏಪ್ರಿಲ್ 1 ರಿಂದ 30ರ ತನಕ ಈ ರಸ್ತೆಯಲ್ಲಿ ವಾಹನ ಸಂಚಾರವನ್ನು ಬಂದ್ ಮಾಡಲಾಗಿದೆ. ಈ ಕುರಿತು ಮಂಗಳೂರು ನಗರ ಪೊಲೀಸರು ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿಯನ್ನು ನೀಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಾಮಗಾರಿ ಹಿನ್ನಲೆಯಲ್ಲಿ ರಸ್ತೆಯನ್ನು ಬಂದ್ ಮಾಡಲಾಗಿದೆ.
ಮಂಗಳೂರು ನಗರದಿಂದ ಕೇರಳ ರಾಜ್ಯಕ್ಕೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 66ರ ಹಳೆಯ ನೇತ್ರಾವತಿ ಸೇತುವೆಯಲ್ಲಿ (ತಲಪಾಡಿ - ಮಂಗಳೂರು ನಗರಕ್ಕೆ ಬರುವ) ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ದಿನಾಂಕ 01-04-2025 ರಿಂದ 30-04-2025ರ ತನಕ 30 ದಿನಗಳು ಪ್ರಮುಖ ದುರಸ್ತಿ ಕಾಮಗಾರಿ ನಡೆಯಲಿದೆ.

ಆದ್ದರಿಂದ ಒಂದು ಸೇತುವೆಯಲ್ಲಿ (ಮಂಗಳೂರು ನಗರ-ತಲಪಾಡಿ ಕಡೆಗೆ ಹೋಗುವ) ವಾಹನಗಳ ಸಂಚಾರಕ್ಕಾಗಿ ದ್ವಿಮುಖ ಸಂಚಾರ ವ್ಯವಸ್ಥೆ ಮಾಡಲಾಗಿರುತ್ತದೆ. ಇದರಿಂದ ಪಂಪ್‌ವೆಲ್‌ನಿಂದ ತೊಕ್ಕೊಟ್ಟು ತನಕ ಸದರಿ ಹೆದ್ದಾರಿಯ ರಸ್ತೆಯಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿರುತ್ತದೆ ಎಂದು ಪೊಲೀಸರು ಹೇಳಿದ್ದಾರೆ.
ಹಳೆಯ ನೇತ್ರಾವತಿ ಸೇತುವೆಯಲ್ಲಿ ದುರಸ್ತಿ ಕಾಮಗಾರಿ ನಡೆಯುವ ದಿನಗಳಲ್ಲಿ ಸಂಚಾರ ದಟ್ಟಣೆ ಹೆಚ್ಚಾಗುವ ಸಾಧ್ಯತೆಗಳಿದ್ದು, ನೇತ್ರಾವತಿ ಸೇತುವೆಯ ಮೂಲಕ ಸಂಚರಿಸುವ ಎಲ್ಲಾ ವಾಹನಗಳ ಚಾಲಕರು, ಸವಾರರು ಮತ್ತು ಸಾರ್ವಜನಿಕರು ಎಚ್ಚರಿಕೆಯಿಂದ ಚಲಿಸಬೇಕು ಹಾಗೂ ಪೀಕ್ ಅವರ್‌ಗಳಲ್ಲಿ ಸದರಿ ಮಾರ್ಗದಲ್ಲಿ ವಾಹನ ಸಂಚಾರವನ್ನು ತಪ್ಪಿಸಲು ಕೋರಲಾಗಿದೆ.
ಪರ್ಯಾಯ ಮಾರ್ಗಗಳ ವಿವರಗಳು
* ಮುಡಿಪು-ಕೊಣಾಜೆ-ದೇರಳಕಟ್ಟೆ ಕಡೆಯಿಂದ ಮಂಗಳೂರು ನಗರ ಕಡೆಗೆ ಲಘು ವಾಹನಗಳು/ ದ್ವಿ-ಚಕ್ರ ವಾಹನಗಳಲ್ಲಿ ಸಂಚರಿಸುವ ಸ್ಥಳೀಯ ವಾಸಿಗಳು ಕೊಣಾಜೆ ಹರೇಕಳ (ಬ್ರಿಡ್ಜ್) ಅಡ್ಯಾರ್ ಮುಖಾಂತರ ಮಂಗಳೂರು ಕಡೆಗೆ ಸಂಚರಿಸಬಹುದಾಗಿದೆ.
* ಮಂಗಳೂರು ಕಡೆಯಿಂದ ಕೊಣಾಜೆ-ಮುಡಿಪು-ದೇರಳಕಟ್ಟೆ ಕಡೆಗೆ ಸಂಚರಿಸುವ ಸ್ಥಳೀಯ ದ್ವಿ- ಚಕ್ರ/ ಲಘು ವಾಹನಗಳು ಅಡ್ಯಾರ್-ಹರೇಕಳ (ಬ್ರಿಡ್ಜ್) ಮುಖಾಂತರ ಸಂಚರಿಸುವುದು.
* ತಲಪಾಡಿ, ಉಳ್ಳಾಲ ಕಡೆಯಿಂದ ಬೆಂಗಳೂರು-ಉಪ್ಪಿನಂಗಡಿ-ಪುತ್ತೂರು-ಸುಳ್ಯ ಕಡೆಗೆ ಸಂಚರಿಸುವ ವಾಹನಗಳು ತೊಕ್ಕೊಟ್ಟಿನಿಂದ ಬಲಕ್ಕೆ ತಿರುಗಿ ಮುಡಿಪು-ಬೋಳಿಯಾರ್-ಮೆಲ್ಕಾರ್ ಮೂಲಕ ಸಂಚರಿಸುವುದು
* ಬಿ. ಸಿ. ರೋಡ್ ಕಡೆಯಿಂದ ತಲಪಾಡಿ ಮತ್ತು ಕೇರಳ ಕಡೆಗೆ ಸಂಚರಿಸುವ ವಾಹನಗಳು ಮೆಲ್ಕಾರ್-ಮುಡಿಪು-ತೊಕ್ಕೊಟ್ಟು ಮುಖಾಂತರ ಸಂಚರಿಸುವುದು ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಳೆಯ ನೇತ್ರಾವತಿ ಸೇತುವೆಯನ್ನು 2016ರಲ್ಲಿಯೂ ದುರಸ್ತಿಗಾಗಿ ಹಲವು ದಿನಗಳ ಕಾಲ ಮುಚ್ಚಲಾಗಿತ್ತು. 2024ರಲ್ಲಿಯೂ ಕೆಲವು ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿತ್ತು. ಈಗ ಮತ್ತೆ ಗುಂಡಿಗಳು ಬಿದ್ದಿದ್ದು, ಒಂದು ತಿಂಗಳ ಕಾಲ ದುರಸ್ತಿ ಕಾರ್ಯವನ್ನು ನಡೆಸುವುದಾಗಿ ಎನ್‌ಹೆಚ್‌ಎಐ ಹೇಳಿದೆ.
ನಗರದಲ್ಲಿ ಸಂಚಾರ ದಟ್ಟಣೆ ಹೆಚ್ಚಿರುವ ಪ್ರದೇಶದಲ್ಲಿ ರಾತ್ರಿಯ ವೇಳೆ ಕಾಮಗಾರಿ ಕೈಗೊಳ್ಳಬೇಕು. ಈ ಹಿಂದೆ ಸೇತುವೆ ದುರಸ್ತಿ ಸಮಯದಲ್ಲಿ ಬ್ಯಾರಿಕೇಡ್ ಹಾಕಿ ರೋಡ್ ಬಂದ್ ಮಾಡಿದ್ದು, ವಾಹನ ಸವಾರರು ಪರದಾಡಿದ್ದರು. ಈಗ ಮತ್ತೆ ಒಂದು ತಿಂಗಳು ರಸ್ತೆ ಬಂದ್ ಮಾಡಲಾಗುತ್ತಿದೆ ಎಂದು ಸ್ಥಳೀಯರು ಹೇಳಿದ್ದಾರೆ.
ಎನ್‌ಹೆಚ್‌ಎಐ ಕಳೆದ ಬಾರಿ ರಸ್ತೆ ರಿಪೇರಿ ಮಾಡಿದಾಗ ಕಾಮಗಾರಿ ಸರಿಯಾಗಿ ಮಾಡಿರಲಿಲ್ಲ. ರಿಪೇರಿ ಬಳಿಕ ಅಲ್ಲಲ್ಲಿ ಕಬ್ಬಿಣದ ರಾಡ್‌ಗಳು ಎದ್ದು ಬಂದಿದ್ದವು. ಇವು ಚಕ್ರಗಳಿಗೆ ಸಿಲುಕಿ ವಾಹನಗಳ ಸಂಚಾರಕ್ಕೆ ಸಹ ತೊಂದರೆಯಾಗಿತ್ತು ಎಂದು ಜನರು ಆರೋಪಿಸಿದ್ದಾರೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು












Click it and Unblock the Notifications