Accident News: ಆಟೋ-ಕಾರು ನಡುವೆ ಭೀಕರ ಅಪಘಾತ: ಪುಟ್ಟ ಮಗು ಸಾವು
Accident News: ಇತ್ತೀಚಿನ ದಿನಗಳಲ್ಲಿ ಅಪಘಾತಗಳು ಪ್ರಕರಣಗಳು ಹೆಚ್ಚಾಗುತ್ತಲಿವೆ. ಇದೀಗ ಆಟೋ-ಕಾರು ನಡುವೆ ಭೀಕರ ಅಪಘಾತ ನಡೆದಿದ್ದು, ಈ ವೇಳೆ ಪುಟ್ಟ ಮಗು ಸಾವನ್ನಪ್ಪಿರುವ ಘಟನೆ ಪುತ್ತೂರು ತಲ್ಲೂಕಿನಲ್ಲಿ ನಡೆದಿದೆ.
ಆಟೋಗೆ ಕಾರು ಡಿಕ್ಕಿಯಾದ ಪರಿಣಾಮ ನಾಲ್ಕೂವರೆ ವರ್ಷದ ಮಗು ದಾರುಣವಾಗಿ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಪರ್ಪುಂಜ ಕೊಯಿಲತ್ತಡ್ಕದಲ್ಲಿ ನಡೆದಿದೆ. ಘಟನೆಯಲ್ಲಿ ಆಟೋ ಚಾಲಕ ಸೇರಿ ಐವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬಸ್ ಓವರ್ ಟೇಕ್ ಮಾಡಲು ಹೋಗಿ ಆಟೋಗೆ ಕಾರು ಡಿಕ್ಕಿ ಹೊಡೆದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಸುಳ್ಯ ಕಡೆಯಿಂದ ಪುತ್ತೂರಿನತ್ತ ಬರುತ್ತಿದ್ದ ಕಾರು ಚಾಲಕ ಬಸ್ನ ಓವರ್ಟೇಕ್ ಮಾಡಲು ಯತ್ನಿಸಿದ್ದಾನೆ. ಈ ವೇಳೆ ನಿಯಂತ್ರಣ ತಪ್ಪಿ ಕಾರು ಪುತ್ತೂರಿನಿಂದ ತಿಂಗಳಾಡಿ ಕಡೆಗೆ ತೆರಳುತ್ತಿದ್ದ ಆಟೋಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಆಟೋ ಚಾಲಕ ಹನೀಫ್ ಬನ್ನೂರು ಅವರ ಮಗಳು ಶಜ್ವಾ ಫಾತಿಮಾ ಮೃತಪಟ್ಟಿದ್ದಾಳೆ.
ಘಟನೆಯಲ್ಲಿ ಹನೀಫ್, ಪತ್ನಿ, ಇಬ್ಬರು ಮಕ್ಕಳು ಮತ್ತು ಅತ್ತೆಗೆ ಗಾಯ ಆಗಿದ್ದು, ಈ ಪೈಕಿ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನೆ ಮಾಡಲಾಗಿದೆ. ಈ ಸಂಬಂಧ ಪುತ್ತೂರು ಗ್ರಾಮಾಂತರ ಪೊಲೀರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಓರ್ವ ಸಾವು: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಗೇರುಸೊಪ್ಪ ಬಳಿ ಕಾರು ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 11 ಮಂದಿಗೆ ಗಂಭೀರ ಗಾಯವಾಗಿದ್ದು, ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.
ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗೇರುಸೊಪ್ಪದಲ್ಲಿ ಬಳಿ ಈ ಭೀಕೆ ಅಪಘಾತ ಸಂಭವಿಸಿದೆ. ಈ ಡಿಕ್ಕಿ ಹೊಡೆದ ರಭಸಕ್ಕೆ ರಸ್ತೆ ಪಕ್ಕದ ಕಂದಕಕ್ಕೆ ಬಸ್ ಪಲ್ಟಿ ಆಗಿದೆ. ಬೆಂಗಳೂರಿನಿಂದ ಭಟ್ಕಳಕ್ಕೆ ಬರುತ್ತಿದ್ದ ವೇಳೆ ಕೆಎಸ್ಆರ್‌ಟಿಸಿ ಬಸ್ ಅಪಘಾತಕ್ಕೆ ಒಳಗಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಸುಳಿಮನೆ ಮುರ್ಕಿ ಕ್ರಾಸ್‌ನಲ್ಲಿ ನಿಯಂತ್ರಣ ತಪ್ಪಿ ಕಾರು-ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದುಕೊಂಡಿವೆ. ಈ ವೇಳೆ ಘಟನೆಯಲ್ಲಿ ಗಾಯಗೊಂಡವರನ್ನು 108 ಹಾಗೂ ಖಾಸಗಿ ಅಂಬುಲೆನ್ಸ್ ಮೂಲಕ ಹೊನ್ನಾವರ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಅಪಘಾತಕ್ಕೀಡಾದ ಸಾರಿಗೆ ಬಸ್‌ನಲ್ಲಿ 30ಕ್ಕೂ ಅಧಿಕ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು. ಇನ್ನೂ ಈ ಘಟನೆ ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾಗಿದೆ.












Click it and Unblock the Notifications